ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
253 : 2

تِلْكَ الرُّسُلُ فَضَّلْنَا بَعْضَهُمْ عَلٰی بَعْضٍ ۘ— مِنْهُمْ مَّنْ كَلَّمَ اللّٰهُ وَرَفَعَ بَعْضَهُمْ دَرَجٰتٍ ؕ— وَاٰتَیْنَا عِیْسَی ابْنَ مَرْیَمَ الْبَیِّنٰتِ وَاَیَّدْنٰهُ بِرُوْحِ الْقُدُسِ ؕ— وَلَوْ شَآءَ اللّٰهُ مَا اقْتَتَلَ الَّذِیْنَ مِنْ بَعْدِهِمْ مِّنْ بَعْدِ مَا جَآءَتْهُمُ الْبَیِّنٰتُ وَلٰكِنِ اخْتَلَفُوْا فَمِنْهُمْ مَّنْ اٰمَنَ وَمِنْهُمْ مَّنْ كَفَرَ ؕ— وَلَوْ شَآءَ اللّٰهُ مَا اقْتَتَلُوْا ۫— وَلٰكِنَّ اللّٰهَ یَفْعَلُ مَا یُرِیْدُ ۟۠

ಆ ಸಂದೇಶವಾಹಕರಲ್ಲಿ ಕೆಲವರನ್ನು ನಾವು ಇತರ ಕೆಲವರಿಗಿಂತ ಶ್ರೇಷ್ಠಗೊಳಿಸಿದ್ದೇವೆ. ಅವರಲ್ಲಿ ಅಲ್ಲಾಹು (ನೇರವಾಗಿ) ಮಾತನಾಡಿದವರಿದ್ದಾರೆ. ಅವರಲ್ಲಿ ಕೆಲವರ ಪದವಿಗಳನ್ನು ಅವನು ಎತ್ತರಿಸಿದ್ದಾನೆ. ಮರ್ಯಮರ ಮಗ ಈಸಾರಿಗೆ ನಾವು ಪವಾಡಗಳನ್ನು ನೀಡಿದ್ದೇವೆ ಮತ್ತು ಪವಿತ್ರಾತ್ಮನ ಮೂಲಕ ಅವರನ್ನು ಬೆಂಬಲಿಸಿದ್ದೇವೆ. ಅಲ್ಲಾಹು ಇಚ್ಛಿಸುತ್ತಿದ್ದರೆ ಅವರ ನಂತರದವರು ಅವರಿಗೆ ಸ್ಪಷ್ಟ ಸಾಕ್ಷ್ಯಾಧಾರಗಳು ಬಂದ ಬಳಿಕವೂ ಪರಸ್ಪರ ಹೊಡೆದಾಡುತ್ತಿರಲಿಲ್ಲ. ಆದರೆ ಅವರು ಭಿನ್ನಮತ ತಳೆದರು. ಅವರಲ್ಲಿ ಕೆಲವರು ಸತ್ಯವಿಶ್ವಾಸಿಗಳಾದರು ಮತ್ತು ಕೆಲವರು ಸತ್ಯನಿಷೇಧಿಗಳಾದರು. ಅಲ್ಲಾಹು ಇಚ್ಛಿಸುತ್ತಿದ್ದರೆ ಅವರು ಪರಸ್ಪರ ಹೊಡೆದಾಡುತ್ತಿರಲಿಲ್ಲ. ಆದರೆ ಅಲ್ಲಾಹು ಅವನು ಬಯಸುವುದನ್ನು ಮಾಡುತ್ತಾನೆ. info
التفاسير: