ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
91 : 2

وَاِذَا قِیْلَ لَهُمْ اٰمِنُوْا بِمَاۤ اَنْزَلَ اللّٰهُ قَالُوْا نُؤْمِنُ بِمَاۤ اُنْزِلَ عَلَیْنَا وَیَكْفُرُوْنَ بِمَا وَرَآءَهٗ ۗ— وَهُوَ الْحَقُّ مُصَدِّقًا لِّمَا مَعَهُمْ ؕ— قُلْ فَلِمَ تَقْتُلُوْنَ اَنْۢبِیَآءَ اللّٰهِ مِنْ قَبْلُ اِنْ كُنْتُمْ مُّؤْمِنِیْنَ ۟

“ಅಲ್ಲಾಹು ಅವತೀರ್ಣಗೊಳಿಸಿದ ಗ್ರಂಥದಲ್ಲಿ (ಕುರ್‌ಆನ್‍ನಲ್ಲಿ) ವಿಶ್ವಾಸವಿಡಿ” ಎಂದು ಅವರೊಡನೆ ಹೇಳಲಾದರೆ, ಅವರು ಹೇಳುತ್ತಾರೆ: “ನಮಗೆ ಅವತೀರ್ಣವಾದ ಗ್ರಂಥದಲ್ಲಿ ನಾವು ವಿಶ್ವಾಸವಿಡುತ್ತೇವೆ.” ವಾಸ್ತವವಾಗಿ, ಅದರ ನಂತರದ ಗ್ರಂಥವು (ಕುರ್‌ಆನ್) ಅವರ ಬಳಿಯಿರುವ ಗ್ರಂಥವನ್ನು ದೃಡೀಕರಿಸುವ ಸತ್ಯವಾಗಿದ್ದೂ ಸಹ ಅವರು ಅದನ್ನು ನಿಷೇಧಿಸುತ್ತಾರೆ. ಹೇಳಿರಿ: “ನೀವು ಸತ್ಯವನ್ನೇ ಹೇಳುವವರಾಗಿದ್ದರೆ, ಮೊದಲು ಬಂದ ಅಲ್ಲಾಹನ ಪ್ರವಾದಿಗಳನ್ನು ನೀವೇಕೆ ಕೊಲೆ ಮಾಡಿದಿರಿ?”[1] info

[1] ನಾವು ತೌರಾತ್ (ತೋರಾ) ನಲ್ಲಿ ವಿಶ್ವಾಸವಿಟ್ಟಿದ್ದೇವೆ, ಆದ್ದರಿಂದ ನಮಗೆ ಕುರ್‌ಆನ್‌ನಲ್ಲಿ ವಿಶ್ವಾಸವಿಡಬೇಕಾದ ಅಗತ್ಯವಿಲ್ಲ ಎಂದು ಅವರು ಹೇಳುತ್ತಿದ್ದರು. ಆದರೆ ವಾಸ್ತವವಾಗಿ ಅವರು ತೌರಾತ್‌ನಲ್ಲೂ ಸರಿಯಾಗಿ ವಿಶ್ವಾಸವಿಟ್ಟಿರಲಿಲ್ಲ. ತೌರಾತ್‌ನಲ್ಲಿ ವಿಶ್ವಾಸವಿಟ್ಟಿದ್ದೇವೆಂಬ ಅವರ ಮಾತು ಸತ್ಯವಾಗಿದ್ದರೆ ಅವರು ತೌರಾತನ್ನು ಬೋಧಿಸಲು ಬಂದ ಪ್ರವಾದಿಗಳನ್ನು ಕೊಲೆ ಮಾಡುತ್ತಿರಲಿಲ್ಲ.

التفاسير: