ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

លេខ​ទំព័រ:close

external-link copy
3 : 25

وَاتَّخَذُوْا مِنْ دُوْنِهٖۤ اٰلِهَةً لَّا یَخْلُقُوْنَ شَیْـًٔا وَّهُمْ یُخْلَقُوْنَ وَلَا یَمْلِكُوْنَ لِاَنْفُسِهِمْ ضَرًّا وَّلَا نَفْعًا وَّلَا یَمْلِكُوْنَ مَوْتًا وَّلَا حَیٰوةً وَّلَا نُشُوْرًا ۟

ಅವರು ಅವನನ್ನು ಬಿಟ್ಟು ಬೇರೆ ದೇವರುಗಳನ್ನು ಸ್ವೀಕರಿಸಿದ್ದಾರೆ. ಆದರೆ, ಆ ದೇವರುಗಳು ಯಾವುದೇ ವಸ್ತುವನ್ನು ಸೃಷ್ಟಿಸುವುದಿಲ್ಲ. ವಾಸ್ತವವಾಗಿ ಅವರೇ ಸೃಷ್ಟಿಗಳು. ಸ್ವಯಂ ತಮಗೂ ಕೂಡ ಯಾವುದೇ ತೊಂದರೆ ಅಥವಾ ಉಪಕಾರವನ್ನು ಮಾಡುವ ಸಾಮರ್ಥ್ಯವನ್ನು ಅವರು ಹೊಂದಿಲ್ಲ. ಮರಣ, ಜೀವನ, ಪುನರುತ್ಥಾನ ಮುಂತಾದ ಯಾವುದೂ ಅವರ ವಶದಲ್ಲಿಲ್ಲ. info
التفاسير:

external-link copy
4 : 25

وَقَالَ الَّذِیْنَ كَفَرُوْۤا اِنْ هٰذَاۤ اِلَّاۤ اِفْكُ ١فْتَرٰىهُ وَاَعَانَهٗ عَلَیْهِ قَوْمٌ اٰخَرُوْنَ ۛۚ— فَقَدْ جَآءُوْ ظُلْمًا وَّزُوْرًا ۟ۚۛ

ಸತ್ಯನಿಷೇಧಿಗಳು ಹೇಳಿದರು: “ಈ ಕುರ್‌ಆನ್ ಸುಳ್ಳಿನ ಕಂತೆಯಾಗಿದೆ. ಅವನು (ಪ್ರವಾದಿ) ಇದನ್ನು ಸ್ವಯಂ ರಚಿಸಿದ್ದಾನೆ. ಬೇರೆ ಕೆಲವರು ಕೂಡ ಅದಕ್ಕೆ ಸಹಾಯ ಮಾಡಿದ್ದಾರೆ.” ಇವರು ಮಹಾ ಅನ್ಯಾಯವನ್ನು ಮತ್ತು ಸುಳ್ಳಾರೋಪವನ್ನು ಮಾಡಿದ್ದಾರೆ. info
التفاسير:

external-link copy
5 : 25

وَقَالُوْۤا اَسَاطِیْرُ الْاَوَّلِیْنَ اكْتَتَبَهَا فَهِیَ تُمْلٰی عَلَیْهِ بُكْرَةً وَّاَصِیْلًا ۟

ಅವರು ಹೇಳಿದರು: “ಇದು ಪ್ರಾಚೀನ ಕಾಲದ ಜನರ ಪುರಾಣಗಳು. ಅವನು (ಪ್ರವಾದಿ) ಇದನ್ನು ಸ್ವಯಂ ಬರೆಯುತ್ತಿದ್ದಾನೆ. ಮುಂಜಾನೆ ಮತ್ತು ಸಂಜೆ ಅವನಿಗೆ ಇದನ್ನು ಓದಿಕೊಡಲಾಗುತ್ತಿದೆ.” info
التفاسير:

external-link copy
6 : 25

قُلْ اَنْزَلَهُ الَّذِیْ یَعْلَمُ السِّرَّ فِی السَّمٰوٰتِ وَالْاَرْضِ ؕ— اِنَّهٗ كَانَ غَفُوْرًا رَّحِیْمًا ۟

ಹೇಳಿರಿ: “ಭೂಮ್ಯಾಕಾಶಗಳಲ್ಲಿರುವ ರಹಸ್ಯಗಳನ್ನು ತಿಳಿದವನೇ ಇದನ್ನು ಅವತೀರ್ಣಗೊಳಿಸಿದ್ದಾನೆ. ನಿಶ್ಚಯವಾಗಿಯೂ ಅವನು ಕ್ಷಮಿಸುವವನು ಮತ್ತು ದಯೆ ತೋರುವವನಾಗಿದ್ದಾನೆ.” info
التفاسير:

external-link copy
7 : 25

وَقَالُوْا مَالِ هٰذَا الرَّسُوْلِ یَاْكُلُ الطَّعَامَ وَیَمْشِیْ فِی الْاَسْوَاقِ ؕ— لَوْلَاۤ اُنْزِلَ اِلَیْهِ مَلَكٌ فَیَكُوْنَ مَعَهٗ نَذِیْرًا ۟ۙ

ಅವರು ಹೇಳುತ್ತಾರೆ: “ಇವನೆಂತಹ ಪ್ರವಾದಿ? ಇವನು ಆಹಾರ ಸೇವಿಸುತ್ತಾನೆ ಮತ್ತು ಪೇಟೆಗಳಲ್ಲಿ ಸಂಚರಿಸುತ್ತಾನೆ. ಇವನ ಜೊತೆಗೆ ಒಬ್ಬ ದೇವದೂತನನ್ನು ಏಕೆ ಕಳುಹಿಸಲಾಗಿಲ್ಲ? ಅವನು ಕೂಡ ಇವನ ಜೊತೆಗೆ ಸೇರಿ ಮುನ್ನೆಚ್ಚರಿಕೆ ನೀಡಬಹುದಿತ್ತಲ್ಲವೇ? info
التفاسير:

external-link copy
8 : 25

اَوْ یُلْقٰۤی اِلَیْهِ كَنْزٌ اَوْ تَكُوْنُ لَهٗ جَنَّةٌ یَّاْكُلُ مِنْهَا ؕ— وَقَالَ الظّٰلِمُوْنَ اِنْ تَتَّبِعُوْنَ اِلَّا رَجُلًا مَّسْحُوْرًا ۟

ಅಥವಾ ಇವನ ಬಳಿ ಒಂದು ನಿಧಿಯನ್ನು ಏಕೆ ಹಾಕಿಲ್ಲ? ಅಥವಾ ಇವನಿಗೆ ಹಣ್ಣುಗಳನ್ನು ತಿನ್ನಲು ಒಂದು ತೋಟವನ್ನು ಏಕೆ ಕೊಡಲಾಗಿಲ್ಲ?” ಆ ಅಕ್ರಮಿಗಳು ಹೇಳಿದರು: “ನೀವು ಮಾಟ ಮಾಡಲಾದ ವ್ಯಕ್ತಿಯನ್ನೇ ಅನುಸರಿಸುತ್ತಿದ್ದೀರಿ.” info
التفاسير:

external-link copy
9 : 25

اُنْظُرْ كَیْفَ ضَرَبُوْا لَكَ الْاَمْثَالَ فَضَلُّوْا فَلَا یَسْتَطِیْعُوْنَ سَبِیْلًا ۟۠

ನೋಡಿ! ಅವರು ನಿಮ್ಮ ಬಗ್ಗೆ ಹೇಗೆಲ್ಲಾ ಮಾತನಾಡುತ್ತಿದ್ದಾರೆಂದು. Fದರಿಂದ ಸ್ವತಃ ಅವರೇ ದಾರಿತಪ್ಪುತ್ತಿದ್ದಾರೆ. ಅವರಿಗೆ ಯಾವುದೇ ರೀತಿಯಲ್ಲೂ ಸರಿದಾರಿಗೆ ಬರಲು ಸಾಧ್ಯವಾಗುವುದಿಲ್ಲ. info
التفاسير:

external-link copy
10 : 25

تَبٰرَكَ الَّذِیْۤ اِنْ شَآءَ جَعَلَ لَكَ خَیْرًا مِّنْ ذٰلِكَ جَنّٰتٍ تَجْرِیْ مِنْ تَحْتِهَا الْاَنْهٰرُ ۙ— وَیَجْعَلْ لَّكَ قُصُوْرًا ۟

ಅಲ್ಲಾಹು ಸಮೃದ್ಧಪೂರ್ಣನು. ಅವನು ಇಚ್ಛಿಸಿದರೆ ನಿಮಗೆ ಅವರು ಹೇಳುವುದಕ್ಕಿಂತಲೂ ಶ್ರೇಷ್ಠವಾದುದನ್ನು, ಅಂದರೆ ತಳಭಾಗದಲ್ಲಿ ನದಿಗಳು ಹರಿಯುವ ತೋಟಗಳನ್ನು ದಯಪಾಲಿಸುವನು ಮತ್ತು ನಿಮಗೆ ಮಹಾ ಸೌಧಗಳನ್ನು ದಯಪಾಲಿಸುವನು. info
التفاسير:

external-link copy
11 : 25

بَلْ كَذَّبُوْا بِالسَّاعَةِ وَاَعْتَدْنَا لِمَنْ كَذَّبَ بِالسَّاعَةِ سَعِیْرًا ۟ۚ

ಆದರೆ, ಅವರು ಅಂತ್ಯಸಮಯವನ್ನು ನಿಷೇಧಿಸಿದರು. ಅಂತ್ಯಸಮಯವನ್ನು ನಿಷೇಧಿಸಿದವರಿಗೆ ನಾವು ಧಗಧಗಿಸುವ ನರಕಾಗ್ನಿಯನ್ನು ಸಿದ್ಧಗೊಳಿಸಿದ್ದೇವೆ. info
التفاسير: