ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

លេខ​ទំព័រ:close

external-link copy
12 : 25

اِذَا رَاَتْهُمْ مِّنْ مَّكَانٍ بَعِیْدٍ سَمِعُوْا لَهَا تَغَیُّظًا وَّزَفِیْرًا ۟

ಅದು ಅವರನ್ನು ವಿದೂರ ಸ್ಥಳದಿಂದ ನೋಡುವಾಗಲೇ, ಅದು ರೋಷಾವೇಶದಿಂದ ಆರ್ಭಟಿಸುವುದನ್ನು ಅವರು ಕೇಳುವರು. info
التفاسير:

external-link copy
13 : 25

وَاِذَاۤ اُلْقُوْا مِنْهَا مَكَانًا ضَیِّقًا مُّقَرَّنِیْنَ دَعَوْا هُنَالِكَ ثُبُوْرًا ۟ؕ

ಅವರನ್ನು ಸಂಕೋಲೆಗಳಿಂದ ಬಂಧಿಸಿ ನರಕದ ಒಂದು ಇಕ್ಕಟ್ಟಾದ ಸ್ಥಳದಲ್ಲಿ ಎಸೆಯಲಾದರೆ ಅವರು ಅಲ್ಲಿ ವಿನಾಶವನ್ನು ಕೂಗಿ ಕರೆಯುವರು. info
التفاسير:

external-link copy
14 : 25

لَا تَدْعُوا الْیَوْمَ ثُبُوْرًا وَّاحِدًا وَّادْعُوْا ثُبُوْرًا كَثِیْرًا ۟

(ಅವರೊಡನೆ ಹೇಳಲಾಗುವುದು).“ಇಂದು ನೀವು ಒಂದು ವಿನಾಶವನ್ನು ಕೂಗಿ ಕರೆಯಬೇಡಿ. ಹಲವಾರು ವಿನಾಶಗಳನ್ನು ಕೂಗಿ ಕರೆಯಿರಿ.” info
التفاسير:

external-link copy
15 : 25

قُلْ اَذٰلِكَ خَیْرٌ اَمْ جَنَّةُ الْخُلْدِ الَّتِیْ وُعِدَ الْمُتَّقُوْنَ ؕ— كَانَتْ لَهُمْ جَزَآءً وَّمَصِیْرًا ۟

ಹೇಳಿರಿ: “ಅದು ಶ್ರೇಷ್ಠವೇ? ಅಥವಾ ದೇವಭಯವುಳ್ಳವರಿಗೆ ವಾಗ್ದಾನ ಮಾಡಲಾದ ಶಾಶ್ವತ ಸ್ವರ್ಗವು ಶ್ರೇಷ್ಠವೇ?” ಅದು ಅವರಿಗೆ ನೀಡಲಾಗುವ ಪ್ರತಿಫಲ ಮತ್ತು ಅವರ ಗಮ್ಯಸ್ಥಾನವಾಗಿದೆ. info
التفاسير:

external-link copy
16 : 25

لَهُمْ فِیْهَا مَا یَشَآءُوْنَ خٰلِدِیْنَ ؕ— كَانَ عَلٰی رَبِّكَ وَعْدًا مَّسْـُٔوْلًا ۟

ಅವರಿಗೆ ಅಲ್ಲಿ ಅವರು ಇಚ್ಛಿಸುವುದೆಲ್ಲವೂ ದೊರೆಯುತ್ತದೆ. ಅವರು ಅದರಲ್ಲಿ ಶಾಶ್ವತವಾಗಿ ವಾಸಿಸುತ್ತಾರೆ. ಅದು ನಿಮ್ಮ ಪರಿಪಾಲಕನ (ಅಲ್ಲಾಹನ) ಉತ್ತರದಾಯಿತ್ವವಿರುವ ವಾಗ್ದಾನವಾಗಿದೆ. info
التفاسير:

external-link copy
17 : 25

وَیَوْمَ یَحْشُرُهُمْ وَمَا یَعْبُدُوْنَ مِنْ دُوْنِ اللّٰهِ فَیَقُوْلُ ءَاَنْتُمْ اَضْلَلْتُمْ عِبَادِیْ هٰۤؤُلَآءِ اَمْ هُمْ ضَلُّوا السَّبِیْلَ ۟ؕ

ಅವನು ಅವರನ್ನು ಮತ್ತು ಅಲ್ಲಾಹನನ್ನು ಬಿಟ್ಟು ಅವರು ಆರಾಧಿಸುತ್ತಿದ್ದ ದೇವರುಗಳನ್ನು ಒಟ್ಟುಗೂಡಿಸುವ ದಿನ! ಅವನು (ಆ ದೇವರುಗಳೊಡನೆ) ಕೇಳುವನು: “ನನ್ನ ಈ ದಾಸರನ್ನು ದಾರಿತಪ್ಪಿಸಿದ್ದು ನೀವೋ? ಅಥವಾ ಸ್ವತಃ ಅವರೇ ದಾರಿತಪ್ಪಿದರೋ?” info
التفاسير:

external-link copy
18 : 25

قَالُوْا سُبْحٰنَكَ مَا كَانَ یَنْۢبَغِیْ لَنَاۤ اَنْ نَّتَّخِذَ مِنْ دُوْنِكَ مِنْ اَوْلِیَآءَ وَلٰكِنْ مَّتَّعْتَهُمْ وَاٰبَآءَهُمْ حَتّٰی نَسُوا الذِّكْرَ ۚ— وَكَانُوْا قَوْمًا بُوْرًا ۟

ಅವರು (ದೇವರುಗಳು) ಹೇಳುವರು: “ನೀನು ಪರಿಶುದ್ಧನು! ನಿನ್ನನ್ನು ಬಿಟ್ಟು ಬೇರೆಯವರನ್ನು ರಕ್ಷಕರಾಗಿ ಸ್ವೀಕರಿಸುವುದು ನಮಗೆ ಯೋಗ್ಯವಲ್ಲ. ಆದರೆ ನೀನು ಅವರಿಗೆ ಮತ್ತು ಅವರ ಪೂರ್ವಜರಿಗೆ ಸವಲತ್ತುಗಳನ್ನು ದಯಪಾಲಿಸಿದೆ. ಎಲ್ಲಿಯವರೆಗೆಂದರೆ ಅವರು ಉಪದೇಶವನ್ನು ಸಂಪೂರ್ಣ ಮರೆತು, ನಾಶವಾಗಿ ಹೋದ ಒಂದು ಜನತೆಯಾಗಿ ಮಾರ್ಪಡುವ ತನಕ.” info
التفاسير:

external-link copy
19 : 25

فَقَدْ كَذَّبُوْكُمْ بِمَا تَقُوْلُوْنَ ۙ— فَمَا تَسْتَطِیْعُوْنَ صَرْفًا وَّلَا نَصْرًا ۚ— وَمَنْ یَّظْلِمْ مِّنْكُمْ نُذِقْهُ عَذَابًا كَبِیْرًا ۟

(ಅಲ್ಲಾಹು ಬಹುದೇವಾರಾಧಕರೊಡನೆ ಹೇಳುವನು): “ನೀವು ಏನು ಹೇಳುತ್ತಿದ್ದಿರೋ ಅದನ್ನು ಅವರು (ದೇವರುಗಳು) ನಿಷೇಧಿಸಿದ್ದಾರೆ. ಇನ್ನು ಶಿಕ್ಷೆಯನ್ನು ದೂರೀಕರಿಸಲು ಅಥವಾ ಯಾವುದೇ ಸಹಾಯ ಪಡೆಯಲು ನಿಮಗೆ ಸಾಧ್ಯವಿಲ್ಲ. ನಿಮ್ಮಲ್ಲಿ ಅಕ್ರಮವೆಸಗಿದವನು[1] ಯಾರೋ ಅವನಿಗೆ ನಾವು ಮಹಾ ಶಿಕ್ಷೆಯ ರುಚಿಯನ್ನು ತೋರಿಸುವೆವು.” info

[1] ಅಂದರೆ ದೇವ ಸಹಭಾಗಿತ್ವ (ಶಿರ್ಕ್) ಮಾಡಿದವನು.

التفاسير:

external-link copy
20 : 25

وَمَاۤ اَرْسَلْنَا قَبْلَكَ مِنَ الْمُرْسَلِیْنَ اِلَّاۤ اِنَّهُمْ لَیَاْكُلُوْنَ الطَّعَامَ وَیَمْشُوْنَ فِی الْاَسْوَاقِ ؕ— وَجَعَلْنَا بَعْضَكُمْ لِبَعْضٍ فِتْنَةً ؕ— اَتَصْبِرُوْنَ ۚ— وَكَانَ رَبُّكَ بَصِیْرًا ۟۠

(ಪ್ರವಾದಿಯವರೇ) ನಾವು ನಿಮಗಿಂತ ಮೊದಲು ಕಳುಹಿಸಿದ ಸಂದೇಶವಾಹಕರೆಲ್ಲರೂ ಆಹಾರವನ್ನು ಸೇವಿಸುತ್ತಿದ್ದರು ಮತ್ತು ಪೇಟೆಗಳಲ್ಲಿ ಸಂಚರಿಸುತ್ತಿದ್ದರು. ನಾವು ನಿಮ್ಮಲ್ಲಿ ಒಬ್ಬರನ್ನು ಇನ್ನೊಬ್ಬರಿಗೆ ಪರೀಕ್ಷೆಯನ್ನಾಗಿ ಮಾಡಿದ್ದೇವೆ. ನೀವು ತಾಳ್ಮೆಯಿಂದಿರುತ್ತೀರೋ ಎಂದು ನೋಡಲು. ನಿಮ್ಮ ಪರಿಪಾಲಕನು ಎಲ್ಲವನ್ನೂ ನೋಡುವವನಾಗಿದ್ದಾನೆ. info
التفاسير: