ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

លេខ​ទំព័រ:close

external-link copy
56 : 25

وَمَاۤ اَرْسَلْنٰكَ اِلَّا مُبَشِّرًا وَّنَذِیْرًا ۟

(ಪ್ರವಾದಿಯವರೇ) ನಾವು ನಿಮ್ಮನ್ನು ಸುವಾರ್ತೆ ತಿಳಿಸುವವರಾಗಿ ಮತ್ತು ಮುನ್ನೆಚ್ಚರಿಕೆ ನೀಡುವವರಾಗಿಯೇ ಕಳುಹಿಸಿದ್ದೇವೆ. info
التفاسير:

external-link copy
57 : 25

قُلْ مَاۤ اَسْـَٔلُكُمْ عَلَیْهِ مِنْ اَجْرٍ اِلَّا مَنْ شَآءَ اَنْ یَّتَّخِذَ اِلٰی رَبِّهٖ سَبِیْلًا ۟

ಹೇಳಿರಿ: “ನಾನು ಇದಕ್ಕಾಗಿ ನಿಮ್ಮಿಂದ ಯಾವುದೇ ಪ್ರತಿಫಲವನ್ನು ಕೇಳುವುದಿಲ್ಲ. ಆದರೆ ಯಾರು ತನ್ನ ಪರಿಪಾಲಕನ (ಅಲ್ಲಾಹನ) ಕಡೆಗೆ ಮಾರ್ಗವನ್ನು ಸ್ವೀಕರಿಸಲು ಇಚ್ಛಿಸುತ್ತಾನೋ (ಅವನು ಅದನ್ನು ಸ್ವೀಕರಿಸಬೇಕು ಎಂಬುದರ) ಹೊರತು.” info
التفاسير:

external-link copy
58 : 25

وَتَوَكَّلْ عَلَی الْحَیِّ الَّذِیْ لَا یَمُوْتُ وَسَبِّحْ بِحَمْدِهٖ ؕ— وَكَفٰی بِهٖ بِذُنُوْبِ عِبَادِهٖ خَبِیْرَا ۟

ಎಂದಿಗೂ ಸಾಯದೆ ನಿರಂತರ ಬದುಕಿರುವವನಲ್ಲಿ (ಅಲ್ಲಾಹನಲ್ಲಿ) ಭರವಸೆಯಿಡಿ. ಅವನ ಸ್ತುತಿಯೊಂದಿಗೆ ಅವನ ಪರಿಶುದ್ಧಿಯನ್ನು ಕೊಂಡಾಡಿರಿ. ಅವನ ದಾಸರು ಮಾಡುವ ಪಾಪಗಳನ್ನು ಸೂಕ್ಷ್ಮವಾಗಿ ತಿಳಿಯಲು ಅವನೇ ಸಾಕು. info
التفاسير:

external-link copy
59 : 25

١لَّذِیْ خَلَقَ السَّمٰوٰتِ وَالْاَرْضَ وَمَا بَیْنَهُمَا فِیْ سِتَّةِ اَیَّامٍ ثُمَّ اسْتَوٰی عَلَی الْعَرْشِ ۛۚ— اَلرَّحْمٰنُ فَسْـَٔلْ بِهٖ خَبِیْرًا ۟

ಅವನು ಭೂಮ್ಯಾಕಾಶಗಳನ್ನು ಮತ್ತು ಅವುಗಳ ನಡುವೆಯಿರುವ ಎಲ್ಲಾ ವಸ್ತುಗಳನ್ನು ಆರು ದಿನಗಳಲ್ಲಿ ಸೃಷ್ಟಿಸಿದವನು. ನಂತರ ಅವನು ಸಿಂಹಾಸನದಲ್ಲಿ ಆರೂಢನಾದನು. ಅವನು ಪರಮ ದಯಾಳು. ನೀವು ಅವನ ಬಗ್ಗೆ ಸೂಕ್ಷ್ಮವಾಗಿ ತಿಳಿದವನೊಡನೆ (ಪ್ರವಾದಿಯೊಡನೆ) ಕೇಳಿರಿ. info
التفاسير:

external-link copy
60 : 25

وَاِذَا قِیْلَ لَهُمُ اسْجُدُوْا لِلرَّحْمٰنِ ۚ— قَالُوْا وَمَا الرَّحْمٰنُ ۗ— اَنَسْجُدُ لِمَا تَاْمُرُنَا وَزَادَهُمْ نُفُوْرًا ۟

“ಪರಮ ದಯಾಳುವಿಗೆ (ಅಲ್ಲಾಹನಿಗೆ) ಸಾಷ್ಟಾಂಗ ಮಾಡಿರಿ” ಎಂದು ಅವರೊಡನೆ ಹೇಳಲಾದರೆ ಅವರು ಕೇಳುತ್ತಾರೆ: “ಪರಮ ದಯಾಳು ಎಂದರೇನು?[1] ನೀನು ಆಜ್ಞಾಪಿಸುವವನಿಗೆ ನಾವು ಸಾಷ್ಟಾಂಗ ಮಾಡಬೇಕೇ?” ಇದು ಅವರಿಗೆ ದ್ವೇಷವನ್ನು ಇನ್ನಷ್ಟು ಹೆಚ್ಚಿಸಿಬಿಟ್ಟಿತು. info

[1] ಮಕ್ಕಾದ ಸತ್ಯನಿಷೇಧಿಗಳು ಅಲ್ಲಾಹನನ್ನು ರಹ್ಮಾನ್ (ಪರಮ ದಯಾಳು) ಎಂದು ಒಪ್ಪಿಕೊಳ್ಳುತ್ತಿರಲಿಲ್ಲ.

التفاسير:

external-link copy
61 : 25

تَبٰرَكَ الَّذِیْ جَعَلَ فِی السَّمَآءِ بُرُوْجًا وَّجَعَلَ فِیْهَا سِرٰجًا وَّقَمَرًا مُّنِیْرًا ۟

ಆಕಾಶದಲ್ಲಿ ನಕ್ಷತ್ರಪುಂಜಗಳನ್ನು ಸ್ಥಾಪಿಸಿದವನು (ಅಲ್ಲಾಹು) ಸಮೃದ್ಧಪೂರ್ಣನು. ಅವನು ಅದರಲ್ಲಿ ಒಂದು ದೀಪವನ್ನು (ಸೂರ್ಯನನ್ನು) ಮತ್ತು ಬೆಳಗುವ ಚಂದ್ರನನ್ನು ಉಂಟುಮಾಡಿದನು. info
التفاسير:

external-link copy
62 : 25

وَهُوَ الَّذِیْ جَعَلَ الَّیْلَ وَالنَّهَارَ خِلْفَةً لِّمَنْ اَرَادَ اَنْ یَّذَّكَّرَ اَوْ اَرَادَ شُكُوْرًا ۟

ಅವನೇ ರಾತ್ರಿ-ಹಗಲುಗಳನ್ನು ಒಂದರ ಹಿಂದೆ ಇನ್ನೊಂದು ಬರುವಂತೆ ಮಾಡಿದವನು. ಉಪದೇಶ ಸ್ವೀಕರಿಸಲು ಬಯಸುವವರಿಗೆ ಅಥವಾ ಕೃತಜ್ಞರಾಗಲು ಬಯಸುವವರಿಗೆ (ಒಂದು ದೃಷ್ಟಾಂತವೆಂಬಂತೆ). info
التفاسير:

external-link copy
63 : 25

وَعِبَادُ الرَّحْمٰنِ الَّذِیْنَ یَمْشُوْنَ عَلَی الْاَرْضِ هَوْنًا وَّاِذَا خَاطَبَهُمُ الْجٰهِلُوْنَ قَالُوْا سَلٰمًا ۟

ಪರಮ ದಯಾಳುವಿನ (ಅಲ್ಲಾಹನ) ದಾಸರು ಭೂಮಿಯಲ್ಲಿ ವಿನಯದಿಂದ ನಡೆಯುವವರಾಗಿದ್ದಾರೆ. ಅವಿವೇಕಿಗಳು ಅವರೊಡನೆ ಮಾತನಾಡಿದರೆ ಅವರು ಶಾಂತಿ-ಸಮಾಧಾನದ ಮಾತುಗಳನ್ನು ಹೇಳುತ್ತಾರೆ.[1] info

[1] ಅಂದರೆ ಅವರು ಅವಿವೇಕಿಗಳೊಡನೆ ತರ್ಕ ಅಥವಾ ವಾಗ್ವಾದಕ್ಕೆ ಇಳಿಯುವುದಿಲ್ಲ. ಬದಲಿಗೆ, ಸಭ್ಯವಾದ ರೀತಿಯಲ್ಲಿ ಅವರನ್ನು ನಿರ್ಲಕ್ಷಿಸುತ್ತಾ ಸಾಗಿ ಬಿಡುತ್ತಾರೆ.

التفاسير:

external-link copy
64 : 25

وَالَّذِیْنَ یَبِیْتُوْنَ لِرَبِّهِمْ سُجَّدًا وَّقِیَامًا ۟

ಅವರು (ಅಲ್ಲಾಹನ ದಾಸರು) ಯಾರೆಂದರೆ, ತಮ್ಮ ಪರಿಪಾಲಕನಿಗೆ (ಅಲ್ಲಾಹನಿಗೆ) ಸಾಷ್ಟಾಂಗ ಮಾಡುತ್ತಾ ಮತ್ತು ನಿಂತು ನಮಾಝ್ ಮಾಡುತ್ತಾ ರಾತ್ರಿಯನ್ನು ಕಳೆಯುವವರು. info
التفاسير:

external-link copy
65 : 25

وَالَّذِیْنَ یَقُوْلُوْنَ رَبَّنَا اصْرِفْ عَنَّا عَذَابَ جَهَنَّمَ ۖۗ— اِنَّ عَذَابَهَا كَانَ غَرَامًا ۟ۗۖ

ಅವರು ಹೇಳುತ್ತಾರೆ: “ನಮ್ಮ ಪರಿಪಾಲಕನೇ! ನಮ್ಮಿಂದ ನರಕ ಶಿಕ್ಷೆಯನ್ನು ದೂರೀಕರಿಸು. ನಿಜಕ್ಕೂ ಅದರ ಶಿಕ್ಷೆಯು ಸದಾ ಅಂಟಿಕೊಂಡಿರುತ್ತದೆ. info
التفاسير:

external-link copy
66 : 25

اِنَّهَا سَآءَتْ مُسْتَقَرًّا وَّمُقَامًا ۟

ನಿಶ್ಚಯವಾಗಿಯೂ ಅದು ಬಹಳ ನಿಕೃಷ್ಟ ವಾಸಸ್ಥಳ ಮತ್ತು ವಾಸ್ತವ್ಯವಾಗಿದೆ.” info
التفاسير:

external-link copy
67 : 25

وَالَّذِیْنَ اِذَاۤ اَنْفَقُوْا لَمْ یُسْرِفُوْا وَلَمْ یَقْتُرُوْا وَكَانَ بَیْنَ ذٰلِكَ قَوَامًا ۟

ಅವರು ಖರ್ಚು ಮಾಡುವಾಗ ಅತಿಯಾಗಿ ಖರ್ಚು ಮಾಡುವುದಿಲ್ಲ ಮತ್ತು ಜಿಪುಣತನ ತೋರುವುದೂ ಇಲ್ಲ. ಬದಲಿಗೆ, ಅವೆರಡರ ನಡುವಿನ ಮಧ್ಯಮ ಮಾರ್ಗವನ್ನು ಸ್ವೀಕರಿಸುತ್ತಾರೆ. info
التفاسير: