ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

លេខ​ទំព័រ:close

external-link copy
68 : 25

وَالَّذِیْنَ لَا یَدْعُوْنَ مَعَ اللّٰهِ اِلٰهًا اٰخَرَ وَلَا یَقْتُلُوْنَ النَّفْسَ الَّتِیْ حَرَّمَ اللّٰهُ اِلَّا بِالْحَقِّ وَلَا یَزْنُوْنَ ۚؕ— وَمَنْ یَّفْعَلْ ذٰلِكَ یَلْقَ اَثَامًا ۟ۙ

ಅವರು ಅಲ್ಲಾಹನ ಜೊತೆಗೆ ಬೇರೆ ದೇವರುಗಳನ್ನು ಕರೆದು ಪ್ರಾರ್ಥಿಸುವುದಿಲ್ಲ, ಕಾನೂನುಬದ್ಧ ರೀತಿಯಲ್ಲೇ ಹೊರತು ಅಲ್ಲಾಹು (ಕೊಲ್ಲುವುದನ್ನು) ನಿಷೇಧಿಸಿದ ಜೀವವನ್ನು ಕೊಲ್ಲುವುದಿಲ್ಲ ಮತ್ತು ವ್ಯಭಿಚಾರ ಮಾಡುವುದಿಲ್ಲ. ಯಾರು ಇವುಗಳನ್ನು ಮಾಡುತ್ತಾನೋ ಅವನು ಶಿಕ್ಷೆಯನ್ನು ಪಡೆಯುವನು. info
التفاسير:

external-link copy
69 : 25

یُّضٰعَفْ لَهُ الْعَذَابُ یَوْمَ الْقِیٰمَةِ وَیَخْلُدْ فِیْهٖ مُهَانًا ۟ۗۖ

ಪುನರುತ್ಥಾನ ದಿನದಂದು ಅವನಿಗೆ ಇಮ್ಮಡಿ ಶಿಕ್ಷೆ ನೀಡಲಾಗುವುದು. ಅವನು ಅವಮಾನವನ್ನು ಸಹಿಸುತ್ತಾ ಸದಾಕಾಲ ಅದರಲ್ಲಿ ವಾಸಿಸುವನು. info
التفاسير:

external-link copy
70 : 25

اِلَّا مَنْ تَابَ وَاٰمَنَ وَعَمِلَ عَمَلًا صَالِحًا فَاُولٰٓىِٕكَ یُبَدِّلُ اللّٰهُ سَیِّاٰتِهِمْ حَسَنٰتٍ ؕ— وَكَانَ اللّٰهُ غَفُوْرًا رَّحِیْمًا ۟

ಆದರೆ ಪಶ್ಚಾತ್ತಾಪಪಟ್ಟವರು, ಸತ್ಯವಿಶ್ವಾಸಿಗಳಾದವರು ಮತ್ತು ಸತ್ಕರ್ಮವೆಸಗಿದವರು ಇದಕ್ಕೆ ಹೊರತಾಗಿದ್ದಾರೆ. ಅಲ್ಲಾಹು ಅವರ ದುಷ್ಕೃತ್ಯಗಳನ್ನು ಸತ್ಕರ್ಮಗಳಾಗಿ ಬದಲಾಯಿಸುವನು. ಅಲ್ಲಾಹು ಕ್ಷಮಿಸುವವನು ಮತ್ತು ದಯೆ ತೋರುವವನಾಗಿದ್ದಾನೆ. info
التفاسير:

external-link copy
71 : 25

وَمَنْ تَابَ وَعَمِلَ صَالِحًا فَاِنَّهٗ یَتُوْبُ اِلَی اللّٰهِ مَتَابًا ۟

ಯಾರು ಪಶ್ಚಾತ್ತಾಪಪಟ್ಟು ಸತ್ಕರ್ಮವೆಸಗುತ್ತಾನೋ ಅವನು ಅಲ್ಲಾಹನ ಕಡೆಗೆ ಪ್ರಾಮಾಣಿಕವಾಗಿ ಮರಳಿದ್ದಾನೆ. info
التفاسير:

external-link copy
72 : 25

وَالَّذِیْنَ لَا یَشْهَدُوْنَ الزُّوْرَ ۙ— وَاِذَا مَرُّوْا بِاللَّغْوِ مَرُّوْا كِرَامًا ۟

ಅವರು ಸುಳ್ಳು ಸಾಕ್ಷ್ಯ ಹೇಳದವರು ಮತ್ತು ಅನಗತ್ಯ ಸಂಗತಿಗಳ ಬಳಿಯಿಂದ ನಡೆಯಬೇಕಾಗಿ ಬಂದರೆ ಸಭ್ಯತೆಯಿಂದ ನಡೆಯುವವರಾಗಿದ್ದಾರೆ. info
التفاسير:

external-link copy
73 : 25

وَالَّذِیْنَ اِذَا ذُكِّرُوْا بِاٰیٰتِ رَبِّهِمْ لَمْ یَخِرُّوْا عَلَیْهَا صُمًّا وَّعُمْیَانًا ۟

ಅವರಿಗೆ ಅವರ ಪರಿಪಾಲಕನ (ಅಲ್ಲಾಹನ) ವಚನಗಳ ಮೂಲಕ ಉಪದೇಶ ನೀಡಲಾದರೆ ಅವರು ಕಿವುಡರು ಮತ್ತು ಕುರುಡರಾಗಿ ಬಿಡುವುದಿಲ್ಲ. info
التفاسير:

external-link copy
74 : 25

وَالَّذِیْنَ یَقُوْلُوْنَ رَبَّنَا هَبْ لَنَا مِنْ اَزْوَاجِنَا وَذُرِّیّٰتِنَا قُرَّةَ اَعْیُنٍ وَّاجْعَلْنَا لِلْمُتَّقِیْنَ اِمَامًا ۟

ಅವರು ಪ್ರಾರ್ಥಿಸುತ್ತಾರೆ: “ನಮ್ಮ ಪರಿಪಾಲಕನೇ! ನಮ್ಮ ಪತ್ನಿಯರಲ್ಲಿ ಮತ್ತು ನಮ್ಮ ಮಕ್ಕಳಲ್ಲಿ ನಮಗೆ ಕಣ್ತಂಪನ್ನು ನೀಡು. ದೇವಭಯವುಳ್ಳವರಿಗೆ ನಮ್ಮನ್ನು ಮುಂದಾಳುಗಳನ್ನಾಗಿ ಮಾಡು.” info
التفاسير:

external-link copy
75 : 25

اُولٰٓىِٕكَ یُجْزَوْنَ الْغُرْفَةَ بِمَا صَبَرُوْا وَیُلَقَّوْنَ فِیْهَا تَحِیَّةً وَّسَلٰمًا ۟ۙ

ಅವರು ತಾಳ್ಮೆ ತೋರಿದ್ದಕ್ಕೆ ಪ್ರತಿಫಲವಾಗಿ ಅವರಿಗೆ ಸ್ವರ್ಗದ ಉನ್ನತ ಮಹಲುಗಳನ್ನು ನೀಡಲಾಗುವುದು. ಅಲ್ಲಿ ಅವರು ಅಭಿವಂದನೆಗಳನ್ನು ಮತ್ತು ಶಾಂತಿಯ ಹಾರೈಕೆಗಳನ್ನು ಪಡೆಯುವರು. info
التفاسير:

external-link copy
76 : 25

خٰلِدِیْنَ فِیْهَا ؕ— حَسُنَتْ مُسْتَقَرًّا وَّمُقَامًا ۟

ಅವರು ಅದರಲ್ಲಿ ಶಾಶ್ವತವಾಗಿ ವಾಸಿಸುವರು. ಆ ವಾಸಸ್ಥಳ ಮತ್ತು ಸ್ಥಾನಮಾನವು ಬಹಳ ಉತ್ತಮವಾಗಿದೆ. info
التفاسير:

external-link copy
77 : 25

قُلْ مَا یَعْبَؤُا بِكُمْ رَبِّیْ لَوْلَا دُعَآؤُكُمْ ۚ— فَقَدْ كَذَّبْتُمْ فَسَوْفَ یَكُوْنُ لِزَامًا ۟۠

ಹೇಳಿರಿ: “ನಿಮ್ಮ ಪ್ರಾರ್ಥನೆಗಳು ಇಲ್ಲದಿರುತ್ತಿದ್ದರೆ ನನ್ನ ಪರಿಪಾಲಕನು (ಅಲ್ಲಾಹು) ನಿಮ್ಮನ್ನು ಪರಿಗಣಿಸುತ್ತಲೇ ಇರಲಿಲ್ಲ.” ಆದರೆ ನೀವು ನಿಷೇಧಿಸಿದ್ದೀರಿ. ಆದ್ದರಿಂದ ಅದಕ್ಕಿರುವ ಶಿಕ್ಷೆಯು ಸದ್ಯವೇ ನಿಮ್ಮನ್ನು ಅಂಟಿಕೊಳ್ಳಲಿದೆ. info
التفاسير: