ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

ಅನ್ನಮ್ಲ್

external-link copy
1 : 27

طٰسٓ ۫— تِلْكَ اٰیٰتُ الْقُرْاٰنِ وَكِتَابٍ مُّبِیْنٍ ۟ۙ

ತ್ವಾ ಸೀನ್. ಇವು ಕುರ್‌ಆನ್‍ನ—ಸ್ಪಷ್ಟ ಗ್ರಂಥದ ವಚನಗಳಾಗಿವೆ. info
التفاسير:

external-link copy
2 : 27

هُدًی وَّبُشْرٰی لِلْمُؤْمِنِیْنَ ۟ۙ

ಇದು ಸತ್ಯವಿಶ್ವಾಸಿಗಳಿಗೆ ಸನ್ಮಾರ್ಗದರ್ಶಿ ಮತ್ತು ಸುವಾರ್ತೆಯಾಗಿದೆ. info
التفاسير:

external-link copy
3 : 27

الَّذِیْنَ یُقِیْمُوْنَ الصَّلٰوةَ وَیُؤْتُوْنَ الزَّكٰوةَ وَهُمْ بِالْاٰخِرَةِ هُمْ یُوْقِنُوْنَ ۟

ಅವರು (ಸತ್ಯವಿಶ್ವಾಸಿಗಳು) ಯಾರೆಂದರೆ, ನಮಾಝನ್ನು ಸಂಸ್ಥಾಪಿಸುವವರು, ಝಕಾತ್ ನೀಡುವವರು ಮತ್ತು ಪರಲೋಕದಲ್ಲಿ ದೃಢವಿಶ್ವಾಸವಿಡುವವರು. info
التفاسير:

external-link copy
4 : 27

اِنَّ الَّذِیْنَ لَا یُؤْمِنُوْنَ بِالْاٰخِرَةِ زَیَّنَّا لَهُمْ اَعْمَالَهُمْ فَهُمْ یَعْمَهُوْنَ ۟ؕ

ನಿಶ್ಚಯವಾಗಿಯೂ, ಪರಲೋಕದಲ್ಲಿ ವಿಶ್ವಾಸವಿಡದವರಿಗೆ ನಾವು ಅವರ ಕರ್ಮಗಳನ್ನು ಅಲಂಕರಿಸಿ ಕೊಟ್ಟಿದ್ದೇವೆ. ಆದ್ದರಿಂದ ಅವರು ಅಂಧವಾಗಿ ವಿಹರಿಸುತ್ತಿದ್ದಾರೆ. info
التفاسير:

external-link copy
5 : 27

اُولٰٓىِٕكَ الَّذِیْنَ لَهُمْ سُوْٓءُ الْعَذَابِ وَهُمْ فِی الْاٰخِرَةِ هُمُ الْاَخْسَرُوْنَ ۟

ಅವರಿಗೆ ಅತ್ಯಂತ ಕೆಟ್ಟ ಶಿಕ್ಷೆಯಿದೆ. ಅವರು ಪರಲೋಕದಲ್ಲಿ ಅತ್ಯಧಿಕ ನಾಶ-ನಷ್ಟಕ್ಕೆ ಗುರಿಯಾಗುತ್ತಾರೆ. info
التفاسير:

external-link copy
6 : 27

وَاِنَّكَ لَتُلَقَّی الْقُرْاٰنَ مِنْ لَّدُنْ حَكِیْمٍ عَلِیْمٍ ۟

ನಿಶ್ಚಯವಾಗಿಯೂ ನಿಮಗೆ ಈ ಕುರ್‌ಆನನ್ನು ವಿವೇಕಪೂರ್ಣನು ಮತ್ತು ಸರ್ವಜ್ಞನಾದ ಅಲ್ಲಾಹನ ಕಡೆಯಿಂದ ನೀಡಲಾಗುತ್ತಿದೆ. info
التفاسير:

external-link copy
7 : 27

اِذْ قَالَ مُوْسٰی لِاَهْلِهٖۤ اِنِّیْۤ اٰنَسْتُ نَارًا ؕ— سَاٰتِیْكُمْ مِّنْهَا بِخَبَرٍ اَوْ اٰتِیْكُمْ بِشِهَابٍ قَبَسٍ لَّعَلَّكُمْ تَصْطَلُوْنَ ۟

ಮೂಸಾ ತಮ್ಮ ಕುಟುಂಬದೊಂದಿಗೆ ಹೇಳಿದ ಸಂದರ್ಭ: “ನನಗೆ (ದೂರದಲ್ಲಿ) ಬೆಂಕಿ ಕಾಣುತ್ತಿದೆ. ನಾನು ಅಲ್ಲಿಂದ ಏನಾದರೂ ಸುದ್ದಿಯನ್ನು ತರುತ್ತೇನೆ ಅಥವಾ ಏನಾದರೂ ದೀವಟಿಗೆಯನ್ನು ಉರಿಸಿಕೊಂಡು ಬರುತ್ತೇನೆ. ಅದರಿಂದ ನಿಮಗೆ ಚಳಿ ಕಾಯಿಸಬಹುದು.” info
التفاسير:

external-link copy
8 : 27

فَلَمَّا جَآءَهَا نُوْدِیَ اَنْ بُوْرِكَ مَنْ فِی النَّارِ وَمَنْ حَوْلَهَا ؕ— وَسُبْحٰنَ اللّٰهِ رَبِّ الْعٰلَمِیْنَ ۟

ಅವರು ಅದರ ಬಳಿಗೆ ಬಂದಾಗ, ಹೀಗೊಂದು ವಾಣಿ ಕೇಳಿಸಿತು: “ಬೆಂಕಿಯ ಬಳಿಯಿರುವವರು ಮತ್ತು ಅದರ ಪರಿಸರದಲ್ಲಿರುವವರು ಸಮೃದ್ಧರಾಗಿದ್ದಾರೆ. ಸರ್ವಲೋಕಗಳ ಪರಿಪಾಲಕನಾದ ಅಲ್ಲಾಹು ಮಹಾ ಪರಿಶುದ್ಧನಾಗಿದ್ದಾನೆ. info
التفاسير:

external-link copy
9 : 27

یٰمُوْسٰۤی اِنَّهٗۤ اَنَا اللّٰهُ الْعَزِیْزُ الْحَكِیْمُ ۟ۙ

ಓ ಮೂಸಾ! ಖಂಡಿತವಾಗಿಯೂ ನಾನು ಪ್ರಬಲನು ಮತ್ತು ವಿವೇಕಪೂರ್ಣನಾದ ಅಲ್ಲಾಹನಾಗಿದ್ದೇನೆ.” info
التفاسير:

external-link copy
10 : 27

وَاَلْقِ عَصَاكَ ؕ— فَلَمَّا رَاٰهَا تَهْتَزُّ كَاَنَّهَا جَآنٌّ وَّلّٰی مُدْبِرًا وَّلَمْ یُعَقِّبْ ؕ— یٰمُوْسٰی لَا تَخَفْ ۫— اِنِّیْ لَا یَخَافُ لَدَیَّ الْمُرْسَلُوْنَ ۟ۗۖ

“ನೀವು ನಿಮ್ಮ ಕೋಲನ್ನು ಎಸೆಯಿರಿ.” ಆಗ ಅದೊಂದು ಸರ್ಪವೋ ಎಂಬಂತೆ ವಿಲಿವಿಲಿ ಒದ್ದಾಡುವುದನ್ನು ಕಂಡಾಗ, ಮೂಸಾ (ಭಯದಿಂದ) ಹಿಂದೆ ತಿರುಗಿ ಓಡತೊಡಗಿದರು. ಅವರು ತಿರುಗಿ ನೋಡಲೇ ಇಲ್ಲ. (ಅಲ್ಲಾಹು ಹೇಳಿದನು): “ಓ ಮೂಸಾ! ಭಯಪಡಬೇಡಿ. ನನ್ನ ಉಪಸ್ಥಿತಿಯಲ್ಲಿ ಸಂದೇಶವಾಹಕರುಗಳು ಭಯಪಡುವುದಿಲ್ಲ. info
التفاسير:

external-link copy
11 : 27

اِلَّا مَنْ ظَلَمَ ثُمَّ بَدَّلَ حُسْنًا بَعْدَ سُوْٓءٍ فَاِنِّیْ غَفُوْرٌ رَّحِیْمٌ ۟

ಆದರೆ ಯಾರಾದರೂ ಅಕ್ರಮವೆಸಗಿ, ನಂತರ ಆ ಕೆಡುಕನ್ನು ಅದರ ಹಿಂದೆಯೇ ಒಳಿತು ಮಾಡುವ ಮೂಲಕ ಬದಲಾಯಿಸಿದರೆ, ನಿಶ್ಚಯವಾಗಿಯೂ ನಾನು ಕ್ಷಮಿಸುವವನು ಮತ್ತು ದಯೆ ತೋರುವವನಾಗಿದ್ದೇನೆ. info
التفاسير:

external-link copy
12 : 27

وَاَدْخِلْ یَدَكَ فِیْ جَیْبِكَ تَخْرُجْ بَیْضَآءَ مِنْ غَیْرِ سُوْٓءٍ ۫— فِیْ تِسْعِ اٰیٰتٍ اِلٰی فِرْعَوْنَ وَقَوْمِهٖ ؕ— اِنَّهُمْ كَانُوْا قَوْمًا فٰسِقِیْنَ ۟

ನೀವು ನಿಮ್ಮ ಕೈಯನ್ನು ನಿಮ್ಮ ಅಂಗಿಯಲ್ಲಿ ವಕ್ಷಕ್ಕೆ ತೂರಿಸಿರಿ. ಆಗ ಅದಕ್ಕೆ ಯಾವುದೇ ದೋಷವುಂಟಾಗದೆ ಅದು ಬೆಳ್ಳಗೆ ಹೊಳೆಯುತ್ತಾ ಹೊರಬರುತ್ತದೆ. ಇವು ಫರೋಹ ಮತ್ತು ಅವನ ಜನರಿಗಿರುವ ಒಂಬತ್ತು ದೃಷ್ಟಾಂತಗಳಲ್ಲಿ ಒಳಪಡುತ್ತವೆ. ನಿಶ್ಚಯವಾಗಿಯೂ ಅವರು ದುಷ್ಕರ್ಮಿಗಳಾದ ಜನರಾಗಿದ್ದಾರೆ.” info
التفاسير:

external-link copy
13 : 27

فَلَمَّا جَآءَتْهُمْ اٰیٰتُنَا مُبْصِرَةً قَالُوْا هٰذَا سِحْرٌ مُّبِیْنٌ ۟ۚ

ಅವರ ಬಳಿಗೆ ಈ ಕಣ್ತೆರೆಸುವಂತಹ ದೃಷ್ಟಾಂತಗಳು ಬಂದಾಗ ಅವರು ಹೇಳಿದರು: “ಇದು ಸ್ಪಷ್ಟ ಮಾಟಗಾರಿಕೆಯಾಗಿದೆ.” info
التفاسير: