ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
76 : 28

اِنَّ قَارُوْنَ كَانَ مِنْ قَوْمِ مُوْسٰی فَبَغٰی عَلَیْهِمْ ۪— وَاٰتَیْنٰهُ مِنَ الْكُنُوْزِ مَاۤ اِنَّ مَفَاتِحَهٗ لَتَنُوْٓاُ بِالْعُصْبَةِ اُولِی الْقُوَّةِ ۗ— اِذْ قَالَ لَهٗ قَوْمُهٗ لَا تَفْرَحْ اِنَّ اللّٰهَ لَا یُحِبُّ الْفَرِحِیْنَ ۟

ನಿಶ್ಚಯವಾಗಿಯೂ ಕಾರೂನ್ ಮೂಸಾರ ಜನರಲ್ಲಿ ಸೇರಿದವನಾಗಿದ್ದನು.[1] ಅವನು ಅವರ ಮೇಲೆ ಅತಿರೇಕವೆಸಗುತ್ತಿದ್ದನು. ನಾವು ಅವನಿಗೆ ಎಷ್ಟು ದೊಡ್ಡ ದೊಡ್ಡ ಖಜಾನೆಗಳನ್ನು ನೀಡಿದ್ದೇವೆಂದರೆ, ಬಲಿಷ್ಠರಾದ ಹಲವಾರು ಜನರು ಕೂಡ ಬಹಳ ಕಷ್ಟದಿಂದಲೇ ಅವುಗಳ ಕೀಲಿಕೈಗಳನ್ನು ಹೊತ್ತು ಸಾಗುತ್ತಿದ್ದರು. ಅವನ ಜನರು ಅವನೊಡನೆ ಹೇಳಿದ ಸಂದರ್ಭ: “ಅಟ್ಟಹಾಸ ಮೆರೆಯಬೇಡ. ಖಂಡಿತನಾಗಿಯೂ ಅಟ್ಟಹಾಸ ಮೆರೆಯುವವರನ್ನು ಅಲ್ಲಾಹು ಇಷ್ಟಪಡುವುದಿಲ್ಲ. info

[1] ಕಾರೂನ್ ಇಸ್ರಾಯೇಲ್ ಜನಾಂಗದಲ್ಲಿ ಸೇರಿದವನು. ಅಲ್ಲಾಹು ಅವನಿಗೆ ಅಪಾರ ಐಶ್ವರ್ಯವನ್ನು ನೀಡಿದಾಗ ಅವನು ಅಲ್ಲಾಹನನ್ನು ಮರೆತು ಜನರ ಮೇಲೆ ಅತಿರೇಕವೆಸಗತೊಡಗಿದನು.

التفاسير: