ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
37 : 3

فَتَقَبَّلَهَا رَبُّهَا بِقَبُوْلٍ حَسَنٍ وَّاَنْۢبَتَهَا نَبَاتًا حَسَنًا ۙ— وَّكَفَّلَهَا زَكَرِیَّا ؕ— كُلَّمَا دَخَلَ عَلَیْهَا زَكَرِیَّا الْمِحْرَابَ ۙ— وَجَدَ عِنْدَهَا رِزْقًا ۚ— قَالَ یٰمَرْیَمُ اَنّٰی لَكِ هٰذَا ؕ— قَالَتْ هُوَ مِنْ عِنْدِ اللّٰهِ ؕ— اِنَّ اللّٰهَ یَرْزُقُ مَنْ یَّشَآءُ بِغَیْرِ حِسَابٍ ۟

ಅವಳ ಪರಿಪಾಲಕ (ಅಲ್ಲಾಹು) ಅವಳನ್ನು ಉತ್ತಮ ರೀತಿಯಲ್ಲಿ ಸ್ವೀಕರಿಸಿ ಉತ್ತಮ ರೀತಿಯಲ್ಲಿ ಬೆಳೆಸಿದನು. ಅವಳ ಪಾಲನೆ-ಪೋಷಣೆ ಮಾಡುವ ಹೊಣೆಯನ್ನು ಝಕರಿಯ್ಯಾರಿಗೆ ಒಪ್ಪಿಸಿದನು. ಝಕರಿಯ್ಯಾ ಅವಳ ಕೋಣೆಗೆ ತೆರಳಿದಾಗಲೆಲ್ಲ ಅವಳ ಬಳಿ ಏನಾದರೊಂದು ಆಹಾರವನ್ನು ಕಾಣುತ್ತಿದ್ದರು. ಅವರು ಕೇಳಿದರು: “ಓ ಮರ್ಯಮ್! ಇದು ನಿನಗೆಲ್ಲಿಂದ ದೊರೆಯುತ್ತದೆ?” ಅವಳು ಉತ್ತರಿಸಿದಳು: “ಅದು ಅಲ್ಲಾಹನ ಬಳಿಯಿಂದ. ನಿಶ್ಚಯವಾಗಿಯೂ ಅಲ್ಲಾಹು ಅವನು ಇಚ್ಛಿಸುವವರಿಗೆ ಲೆಕ್ಕವಿಲ್ಲದೆ ದಯಪಾಲಿಸುತ್ತಾನೆ.” info
التفاسير: