ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

លេខ​ទំព័រ:close

external-link copy
14 : 45

قُلْ لِّلَّذِیْنَ اٰمَنُوْا یَغْفِرُوْا لِلَّذِیْنَ لَا یَرْجُوْنَ اَیَّامَ اللّٰهِ لِیَجْزِیَ قَوْمًا بِمَا كَانُوْا یَكْسِبُوْنَ ۟

ಅಲ್ಲಾಹನ ದಿನಗಳನ್ನು ನಿರೀಕ್ಷಿಸದ ಸತ್ಯನಿಷೇಧಿಗಳಿಗೆ ಅವರು ಕ್ಷಮಿಸಿ ಬಿಡಲಿ ಎಂದು ಸತ್ಯವಿಶ್ವಾಸಿಗಳೊಡನೆ ಹೇಳಿರಿ. ಇದು ಅಲ್ಲಾಹು ಆ ಜನರಿಗೆ ಅವರು ಮಾಡಿದ ಕರ್ಮಗಳ ಫಲವನ್ನು ನೀಡುವುದಕ್ಕಾಗಿ. info
التفاسير:

external-link copy
15 : 45

مَنْ عَمِلَ صَالِحًا فَلِنَفْسِهٖ ۚ— وَمَنْ اَسَآءَ فَعَلَیْهَا ؗ— ثُمَّ اِلٰی رَبِّكُمْ تُرْجَعُوْنَ ۟

ಯಾರಾದರೂ ಒಳಿತು ಮಾಡಿದರೆ ಅದು ಅವನ ಒಳಿತಿಗೇ ಆಗಿದೆ. ಯಾರಾದರೂ ಕೆಡುಕು ಮಾಡಿದರೆ ಅದರ ಕೆಡುಕು ಅವನಿಗೇ ಆಗಿದೆ. ನಂತರ ನಿಮ್ಮ ಪರಿಪಾಲಕನ (ಅಲ್ಲಾಹನ) ಬಳಿಗೆ ನಿಮ್ಮನ್ನು ಮರಳಿಸಲಾಗುವುದು. info
التفاسير:

external-link copy
16 : 45

وَلَقَدْ اٰتَیْنَا بَنِیْۤ اِسْرَآءِیْلَ الْكِتٰبَ وَالْحُكْمَ وَالنُّبُوَّةَ وَرَزَقْنٰهُمْ مِّنَ الطَّیِّبٰتِ وَفَضَّلْنٰهُمْ عَلَی الْعٰلَمِیْنَ ۟ۚ

ನಾವು ಇಸ್ರಾಯೇಲ್ ಮಕ್ಕಳಿಗೆ ಗ್ರಂಥ, ಜ್ಞಾನ ಮತ್ತು ಪ್ರವಾದಿತ್ವವನ್ನು ನೀಡಿದೆವು, ಶುದ್ಧ ವಸ್ತುಗಳಿಂದ ಅವರಿಗೆ ಆಹಾರವನ್ನು ಒದಗಿಸಿದೆವು ಮತ್ತು ಜಗತ್ತಿನ ಎಲ್ಲಾ (ಸಮಕಾಲೀನ) ಜನರಿಗಿಂತ ನಾವು ಅವರಿಗೆ ಶ್ರೇಷ್ಠತೆಯನ್ನು ನೀಡಿದೆವು. info
التفاسير:

external-link copy
17 : 45

وَاٰتَیْنٰهُمْ بَیِّنٰتٍ مِّنَ الْاَمْرِ ۚ— فَمَا اخْتَلَفُوْۤا اِلَّا مِنْ بَعْدِ مَا جَآءَهُمُ الْعِلْمُ ۙ— بَغْیًا بَیْنَهُمْ ؕ— اِنَّ رَبَّكَ یَقْضِیْ بَیْنَهُمْ یَوْمَ الْقِیٰمَةِ فِیْمَا كَانُوْا فِیْهِ یَخْتَلِفُوْنَ ۟

ನಾವು ಅವರಿಗೆ (ಧಾರ್ಮಿಕ) ವಿಷಯಗಳ ಬಗ್ಗೆ ಸ್ಪಷ್ಟ ಪುರಾವೆಗಳನ್ನು ನೀಡಿದೆವು. ಆದರೆ ಅವರಿಗೆ ಜ್ಞಾನವು ಬಂದ ಬಳಿಕವೇ ಹೊರತು ಅವರು ಭಿನ್ನಮತ ತಳೆಯಲಿಲ್ಲ. ಅವರು ಪರಸ್ಪರ ಹೊಂದಿದ್ದ ದ್ವೇಷವೇ ಅದಕ್ಕೆ ಕಾರಣವಾಗಿತ್ತು. ನಿಶ್ಚಯವಾಗಿಯೂ ಯಾವ ವಿಷಯದಲ್ಲಿ ಅವರು ಭಿನ್ನಮತ ತಳೆದರೋ ಆ ವಿಷಯದಲ್ಲಿ ಪುನರುತ್ಥಾನ ದಿನದಂದು ನಿಮ್ಮ ಪರಿಪಾಲಕನು (ಅಲ್ಲಾಹು) ಅವರ ನಡುವೆ ತೀರ್ಪು ನೀಡುವನು. info
التفاسير:

external-link copy
18 : 45

ثُمَّ جَعَلْنٰكَ عَلٰی شَرِیْعَةٍ مِّنَ الْاَمْرِ فَاتَّبِعْهَا وَلَا تَتَّبِعْ اَهْوَآءَ الَّذِیْنَ لَا یَعْلَمُوْنَ ۟

ನಂತರ ನಾವು ನಿಮ್ಮನ್ನು ಧರ್ಮದ ಸ್ಪಷ್ಟ ಮಾರ್ಗದಲ್ಲಿ ನಿಲ್ಲಿಸಿದೆವು. ಆದ್ದರಿಂದ ನೀವು ಅದನ್ನು ಅನುಸರಿಸಿರಿ. ತಿಳುವಳಿಕೆಯಿಲ್ಲದ ಜನರ ಸ್ವೇಚ್ಛೆಗಳನ್ನು ಅನುಸರಿಸಬೇಡಿ. info
التفاسير:

external-link copy
19 : 45

اِنَّهُمْ لَنْ یُّغْنُوْا عَنْكَ مِنَ اللّٰهِ شَیْـًٔا ؕ— وَاِنَّ الظّٰلِمِیْنَ بَعْضُهُمْ اَوْلِیَآءُ بَعْضٍ ۚ— وَاللّٰهُ وَلِیُّ الْمُتَّقِیْنَ ۟

ಅಲ್ಲಾಹನ ಮುಂದೆ ಇವರು ಯಾವ ರೀತಿಯಲ್ಲೂ ನಿಮಗೆ ಉಪಕಾರ ಮಾಡುವುದಿಲ್ಲ. ನಿಶ್ಚಯವಾಗಿಯೂ ಅಕ್ರಮಿಗಳು ಪರಸ್ಪರ ಮಿತ್ರರಾಗಿದ್ದಾರೆ. ಅಲ್ಲಾಹು ದೇವಭಯವುಳ್ಳವರ ರಕ್ಷಕನಾಗಿದ್ದಾನೆ. info
التفاسير:

external-link copy
20 : 45

هٰذَا بَصَآىِٕرُ لِلنَّاسِ وَهُدًی وَّرَحْمَةٌ لِّقَوْمٍ یُّوْقِنُوْنَ ۟

ಇದು (ಕುರ್‌ಆನ್) ಮನುಷ್ಯರಿಗೆ ಒಳದೃಷ್ಟಿಯಾಗಿದೆ ಮತ್ತು ದೃಢವಿಶ್ವಾಸವಿಡುವ ಜನರಿಗೆ ಸನ್ಮಾರ್ಗ ಹಾಗೂ ದಯೆಯಾಗಿದೆ. info
التفاسير:

external-link copy
21 : 45

اَمْ حَسِبَ الَّذِیْنَ اجْتَرَحُوا السَّیِّاٰتِ اَنْ نَّجْعَلَهُمْ كَالَّذِیْنَ اٰمَنُوْا وَعَمِلُوا الصّٰلِحٰتِ ۙ— سَوَآءً مَّحْیَاهُمْ وَمَمَاتُهُمْ ؕ— سَآءَ مَا یَحْكُمُوْنَ ۟۠

ಕೆಡುಕು ಮಾಡಿದವರು ಯಾರೋ ಅವರನ್ನು ನಾವು ಸತ್ಯವಿಶ್ವಾಸಿಗಳಾಗಿದ್ದು ಸತ್ಕರ್ಮವೆಸಗುವವರಂತೆ—ಅವರಿಬ್ಬರ ಜೀವನ ಮತ್ತು ಮರಣಗಳು ಸಮಾನವಾಗುವ ರೀತಿಯಲ್ಲಿ—ಮಾಡುವೆವೆಂದು ಭಾವಿಸಿದ್ದಾರೆಯೇ? ಅವರು ನೀಡುವ ತೀರ್ಪು ಬಹಳ ನಿಕೃಷ್ಟವಾಗಿದೆ. info
التفاسير:

external-link copy
22 : 45

وَخَلَقَ اللّٰهُ السَّمٰوٰتِ وَالْاَرْضَ بِالْحَقِّ وَلِتُجْزٰی كُلُّ نَفْسٍ بِمَا كَسَبَتْ وَهُمْ لَا یُظْلَمُوْنَ ۟

ಅಲ್ಲಾಹು ಭೂಮ್ಯಾಕಾಶಗಳನ್ನು ಸತ್ಯ ಸಮೇತ ಸೃಷ್ಟಿಸಿದ್ದಾನೆ. ಪ್ರತಿಯೊಬ್ಬನಿಗೂ ಅವನು ಮಾಡಿದ ಕರ್ಮಗಳ ಪ್ರತಿಫಲವನ್ನು ನೀಡುವುದಕ್ಕಾಗಿ. ಅವರಿಗೆ ಯಾವುದೇ ಅನ್ಯಾಯವಾಗುವುದಿಲ್ಲ. info
التفاسير: