ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

លេខ​ទំព័រ:close

external-link copy
11 : 70

یُّبَصَّرُوْنَهُمْ ؕ— یَوَدُّ الْمُجْرِمُ لَوْ یَفْتَدِیْ مِنْ عَذَابِ یَوْمِىِٕذٍ بِبَنِیْهِ ۟ۙ

ವಾಸ್ತವವಾಗಿ ಅವರನ್ನು ಪರಸ್ಪರ ತೋರಿಸಲಾಗುವುದು. ಅಪರಾಧಿಯು ಆಶಿಸುವನು—ಅಂದಿನ ಶಿಕ್ಷೆಗೆ ಬದಲಿಯಾಗಿ ತನ್ನ ಗಂಡುಮಕ್ಕಳನ್ನು, info
التفاسير:

external-link copy
12 : 70

وَصَاحِبَتِهٖ وَاَخِیْهِ ۟ۙ

ತನ್ನ ಪತ್ನಿಯನ್ನು ಮತ್ತು ಸಹೋದರನನ್ನು, info
التفاسير:

external-link copy
13 : 70

وَفَصِیْلَتِهِ الَّتِیْ تُـْٔوِیْهِ ۟ۙ

ತನಗೆ ಆಶ್ರಯ ನೀಡಿದ ತನ್ನ ಕುಟುಂಬವನ್ನು, info
التفاسير:

external-link copy
14 : 70

وَمَنْ فِی الْاَرْضِ جَمِیْعًا ۙ— ثُمَّ یُنْجِیْهِ ۟ۙ

ಮತ್ತು ಭೂಮಿಯಲ್ಲಿರುವ ಎಲ್ಲರನ್ನೂ ಪರಿಹಾರವಾಗಿ ನೀಡಿ ಅದು ತನ್ನನ್ನು ಪಾರು ಮಾಡುತ್ತಿದ್ದರೆ (ಎಷ್ಟು ಚೆನ್ನಾಗಿತ್ತು)! info
التفاسير:

external-link copy
15 : 70

كَلَّا ؕ— اِنَّهَا لَظٰی ۟ۙ

ಎಂದಿಗೂ ಇಲ್ಲ! ನಿಶ್ಚಯವಾಗಿಯೂ ಅದು ಧಗಧಗಿಸುವ ಬೆಂಕಿಯಾಗಿದೆ. info
التفاسير:

external-link copy
16 : 70

نَزَّاعَةً لِّلشَّوٰی ۟ۚۖ

ತಲೆಯ ಚರ್ಮವನ್ನು ಸುಲಿಯುವಂತಹ ಬೆಂಕಿ. info
التفاسير:

external-link copy
17 : 70

تَدْعُوْا مَنْ اَدْبَرَ وَتَوَلّٰی ۟ۙ

ಹಿಂದಕ್ಕೆ ಸರಿದ ಮತ್ತು ಮುಖ ತಿರುಗಿಸಿ ನಡೆದ ಎಲ್ಲರನ್ನೂ ಅದು ಕರೆಯುತ್ತದೆ. info
التفاسير:

external-link copy
18 : 70

وَجَمَعَ فَاَوْعٰی ۟

(ಆಸ್ತಿಯನ್ನು) ಕೂಡಿಟ್ಟು ಜೋಪಾನವಾಗಿಟ್ಟವನನ್ನೂ (ಕರೆಯುತ್ತದೆ). info
التفاسير:

external-link copy
19 : 70

اِنَّ الْاِنْسَانَ خُلِقَ هَلُوْعًا ۟ۙ

ನಿಶ್ಚಯವಾಗಿಯೂ ಮನುಷ್ಯನನ್ನು ಚಿಂತಾಕ್ರಾಂತನಾಗಿ ಸೃಷ್ಟಿಸಲಾಗಿದೆ. info
التفاسير:

external-link copy
20 : 70

اِذَا مَسَّهُ الشَّرُّ جَزُوْعًا ۟ۙ

ಅವನಿಗೆ ವಿಪತ್ತು ಸಂಭವಿಸಿದರೆ ತಾಳ್ಮೆಗೆಡುತ್ತಾನೆ. info
التفاسير:

external-link copy
21 : 70

وَّاِذَا مَسَّهُ الْخَیْرُ مَنُوْعًا ۟ۙ

ಅವನಿಗೆ ಆರಾಮ ದೊರೆತರೆ ಜಿಪುಣನಾಗುತ್ತಾನೆ. info
التفاسير:

external-link copy
22 : 70

اِلَّا الْمُصَلِّیْنَ ۟ۙ

ಆದರೆ ನಮಾಝ್ ನಿರ್ವಹಿಸುವವರು ಇದಕ್ಕೆ ಹೊರತಾಗಿದ್ದಾರೆ. info
التفاسير:

external-link copy
23 : 70

الَّذِیْنَ هُمْ عَلٰی صَلَاتِهِمْ دَآىِٕمُوْنَ ۟

ಅವರು ಯಾರೆಂದರೆ ತಮ್ಮ ನಮಾಝ್‌ನಲ್ಲಿ ಸ್ಥಿರವಾಗಿರುವವರು. info
التفاسير:

external-link copy
24 : 70

وَالَّذِیْنَ فِیْۤ اَمْوَالِهِمْ حَقٌّ مَّعْلُوْمٌ ۟

ತಮ್ಮ ಸಂಪತ್ತಿನಲ್ಲಿ ಒಂದು ನಿಶ್ಚಿತ ಹಕ್ಕು ಇರುವವರು. info
التفاسير:

external-link copy
25 : 70

لِّلسَّآىِٕلِ وَالْمَحْرُوْمِ ۟

ಬೇಡುವವನಿಗೆ ಮತ್ತು (ಉಪಜೀವನ) ತಡೆಯಲ್ಪಟ್ಟವನಿಗೆ. info
التفاسير:

external-link copy
26 : 70

وَالَّذِیْنَ یُصَدِّقُوْنَ بِیَوْمِ الدِّیْنِ ۟

ಅವರು ಪ್ರತಿಫಲದ ದಿನವನ್ನು ಸತ್ಯವೆಂದು ದೃಢೀಕರಿಸುವವರು. info
التفاسير:

external-link copy
27 : 70

وَالَّذِیْنَ هُمْ مِّنْ عَذَابِ رَبِّهِمْ مُّشْفِقُوْنَ ۟ۚ

ಅವರು ತಮ್ಮ ಪರಿಪಾಲಕನ (ಅಲ್ಲಾಹನ) ಶಿಕ್ಷೆಯ ಬಗ್ಗೆ ಭಯಪಡುವವರು. info
التفاسير:

external-link copy
28 : 70

اِنَّ عَذَابَ رَبِّهِمْ غَیْرُ مَاْمُوْنٍ ۪۟

ನಿಶ್ಚಯವಾಗಿಯೂ ಅವರ ಪರಿಪಾಲಕನ (ಅಲ್ಲಾಹನ) ಶಿಕ್ಷೆಯು ಭಯಪಡದೇ ಇರುವಂತದ್ದಲ್ಲ. info
التفاسير:

external-link copy
29 : 70

وَالَّذِیْنَ هُمْ لِفُرُوْجِهِمْ حٰفِظُوْنَ ۟ۙ

ಅವರು ತಮ್ಮ ಗುಹ್ಯಾಂಗಗಳನ್ನು ಕಾಪಾಡಿಕೊಳ್ಳುವವರು. info
التفاسير:

external-link copy
30 : 70

اِلَّا عَلٰۤی اَزْوَاجِهِمْ اَوْ مَا مَلَكَتْ اَیْمَانُهُمْ فَاِنَّهُمْ غَیْرُ مَلُوْمِیْنَ ۟ۚ

ಅವರ ಪತ್ನಿಯರು ಅಥವಾ ಅವರ ಬಲಗೈಗಳು ಅಧೀನದಲ್ಲಿರಿಸಿದವರನ್ನು ಬಿಟ್ಟು. ನಿಶ್ಚಯವಾಗಿಯೂ ಅವರು ಆಕ್ಷೇಪಾರ್ಹರಲ್ಲ. info
التفاسير:

external-link copy
31 : 70

فَمَنِ ابْتَغٰی وَرَآءَ ذٰلِكَ فَاُولٰٓىِٕكَ هُمُ الْعٰدُوْنَ ۟ۚ

ಆದರೆ ಯಾರು ಅದಕ್ಕಿಂತ ಆಚೆಗಿರುವುದನ್ನು ಹುಡುಕುತ್ತಾರೋ ಅವರೇ ಎಲ್ಲೆ ಮೀರಿದವರು. info
التفاسير:

external-link copy
32 : 70

وَالَّذِیْنَ هُمْ لِاَمٰنٰتِهِمْ وَعَهْدِهِمْ رٰعُوْنَ ۟

ಅವರು ತಮ್ಮ ವಿಶ್ವಾಸಾರ್ಹತೆಗಳನ್ನು ಮತ್ತು ಕರಾರುಗಳನ್ನು ಪಾಲಿಸುವವರು. info
التفاسير:

external-link copy
33 : 70

وَالَّذِیْنَ هُمْ بِشَهٰدٰتِهِمْ قَآىِٕمُوْنَ ۟

ಅವರು ತಮ್ಮ ಸಾಕ್ಷಿಗಳಲ್ಲಿ ನೇರವಾಗಿ ನಿಲ್ಲುವವರು. info
التفاسير:

external-link copy
34 : 70

وَالَّذِیْنَ هُمْ عَلٰی صَلَاتِهِمْ یُحَافِظُوْنَ ۟ؕ

ಅವರು ತಮ್ಮ ನಮಾಝ್‌ಗಳನ್ನು ಸಂರಕ್ಷಿಸುವವರು. info
التفاسير:

external-link copy
35 : 70

اُولٰٓىِٕكَ فِیْ جَنّٰتٍ مُّكْرَمُوْنَ ۟ؕ۠

ಅವರು ಸ್ವರ್ಗಗಳಲ್ಲಿ ಗೌರವಿಸಲ್ಪಡುವರು. info
التفاسير:

external-link copy
36 : 70

فَمَالِ الَّذِیْنَ كَفَرُوْا قِبَلَكَ مُهْطِعِیْنَ ۟ۙ

ಸತ್ಯನಿಷೇಧಿಗಳಿಗೇನಾಗಿದೆ? ಅವರೇಕೆ ನಿಮ್ಮ ಕಡೆಗೆ ಅವಸರದಿಂದ ಬರುತ್ತಿದ್ದಾರೆ? info
التفاسير:

external-link copy
37 : 70

عَنِ الْیَمِیْنِ وَعَنِ الشِّمَالِ عِزِیْنَ ۟

ಗುಂಪು ಗುಂಪಾಗಿ ಬಲಭಾಗದಿಂದ ಮತ್ತು ಎಡಭಾಗದಿಂದ?[1] info

[1] ಮಕ್ಕಾದ ಸತ್ಯನಿಷೇಧಿಗಳು ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಸಭೆಗೆ ಓಡೋಡಿ ಬಂದು ಕೂರುತ್ತಿದ್ದರು. ಆದರೆ ಪ್ರವಾದಿಯ ಮಾತುಗಳನ್ನು ಕೇಳಿ ಅದರ ಪ್ರಕಾರ ನಡೆಯುವ ಬದಲು ಅವರು ತಮಾಷೆ ಮಾಡಿ ನಗುತ್ತಿದ್ದರು. ಅವರು ಗುಂಪು ಗುಂಪಾಗಿ ಇರುತ್ತಿದ್ದರು. ಮುಸ್ಲಿಮರು ಸ್ವರ್ಗಕ್ಕೆ ಹೋಗುವುದಾದರೆ ನಾವು ಅದಕ್ಕಿಂತಲೂ ಮೊದಲು ಸ್ವರ್ಗ ಪ್ರವೇಶ ಮಾಡುತ್ತೇವೆ ಎಂದು ಅವರು ಹೇಳುತ್ತಿದ್ದರು.

التفاسير:

external-link copy
38 : 70

اَیَطْمَعُ كُلُّ امْرِئٍ مِّنْهُمْ اَنْ یُّدْخَلَ جَنَّةَ نَعِیْمٍ ۟ۙ

ತನ್ನನ್ನು ಸುಖಸಮೃದ್ಧವಾದ ಸ್ವರ್ಗಕ್ಕೆ ಪ್ರವೇಶ ಮಾಡಿಸಬೇಕೆಂದು ಅವರಲ್ಲಿ ಪ್ರತಿಯೊಬ್ಬನೂ ಹಾರೈಸುತ್ತಾನೆಯೇ? info
التفاسير:

external-link copy
39 : 70

كَلَّا ؕ— اِنَّا خَلَقْنٰهُمْ مِّمَّا یَعْلَمُوْنَ ۟

ಎಂದಿಗೂ ಇಲ್ಲ; ನಾವು ಅವರನ್ನು ಅವರು ತಿಳಿದಿರುವ ವಸ್ತುವಿನಿಂದಲೇ ಸೃಷ್ಟಿಸಿದ್ದೇವೆ. info
التفاسير:

external-link copy
40 : 70

فَلَاۤ اُقْسِمُ بِرَبِّ الْمَشٰرِقِ وَالْمَغٰرِبِ اِنَّا لَقٰدِرُوْنَ ۟ۙ

ಆದ್ದರಿಂದ ನಾನು ಪೂರ್ವಗಳ ಮತ್ತು ಪಶ್ಚಿಮಗಳ ಪರಿಪಾಲಕನ (ಅಲ್ಲಾಹನ) ಮೇಲೆ ಆಣೆ ಮಾಡುತ್ತೇನೆ. ನಿಶ್ಚಯವಾಗಿಯೂ ನಮಗೆ ಸಾಮರ್ಥ್ಯವಿದೆ. info
التفاسير: