Kilniojo Korano reikšmių vertimas - Vertimas į kanadiečių k. - Hamza Batūr

Puslapio numeris:close

external-link copy
58 : 5

وَاِذَا نَادَیْتُمْ اِلَی الصَّلٰوةِ اتَّخَذُوْهَا هُزُوًا وَّلَعِبًا ؕ— ذٰلِكَ بِاَنَّهُمْ قَوْمٌ لَّا یَعْقِلُوْنَ ۟

ನೀವು ನಮಾಝ್‍ಗಾಗಿ ಕರೆ ನೀಡಿದರೆ, ಅವರು ಅದನ್ನು ತಮಾಷೆ ಮತ್ತು ಆಟದ ವಸ್ತುವಾಗಿ ಸ್ವೀಕರಿಸುತ್ತಾರೆ. ಅದೇಕೆಂದರೆ ಅವರು ಬುದ್ಧಿಯಿಲ್ಲದ ಜನರಾಗಿದ್ದಾರೆ. info
التفاسير:

external-link copy
59 : 5

قُلْ یٰۤاَهْلَ الْكِتٰبِ هَلْ تَنْقِمُوْنَ مِنَّاۤ اِلَّاۤ اَنْ اٰمَنَّا بِاللّٰهِ وَمَاۤ اُنْزِلَ اِلَیْنَا وَمَاۤ اُنْزِلَ مِنْ قَبْلُ ۙ— وَاَنَّ اَكْثَرَكُمْ فٰسِقُوْنَ ۟

ಹೇಳಿರಿ: “ಓ ಗ್ರಂಥದವರೇ! ನಾವು ಅಲ್ಲಾಹನಲ್ಲಿ, ನಮಗೆ ಅವತೀರ್ಣವಾದ ಗ್ರಂಥದಲ್ಲಿ ಮತ್ತು ನಮಗಿಂತ ಮೊದಲು ಅವತೀರ್ಣವಾದ ಗ್ರಂಥದಲ್ಲಿ ವಿಶ್ವಾಸವಿಟ್ಟಿದ್ದೇವೆಂಬ ಕಾರಣದಿಂದ ಮತ್ತು ನಿಮ್ಮಲ್ಲಿ ಹೆಚ್ಚಿನವರೂ ದುಷ್ಕರ್ಮಿಗಳಾಗಿರುವ ಕಾರಣದಿಂದ ನೀವು ನಮ್ಮನ್ನು ದ್ವೇಷಿಸುತ್ತೀರಾ?” info
التفاسير:

external-link copy
60 : 5

قُلْ هَلْ اُنَبِّئُكُمْ بِشَرٍّ مِّنْ ذٰلِكَ مَثُوْبَةً عِنْدَ اللّٰهِ ؕ— مَنْ لَّعَنَهُ اللّٰهُ وَغَضِبَ عَلَیْهِ وَجَعَلَ مِنْهُمُ الْقِرَدَةَ وَالْخَنَازِیْرَ وَعَبَدَ الطَّاغُوْتَ ؕ— اُولٰٓىِٕكَ شَرٌّ مَّكَانًا وَّاَضَلُّ عَنْ سَوَآءِ السَّبِیْلِ ۟

ಹೇಳಿರಿ: “ಅಲ್ಲಾಹನ ಬಳಿ ಅದಕ್ಕಿಂತಲೂ ಕೆಟ್ಟ ಪ್ರತಿಫಲವನ್ನು ಹೊಂದಿರುವವರ ಬಗ್ಗೆ ನಾನು ನಿಮಗೆ ತಿಳಿಸಿಕೊಡಲೇ? ಯಾರನ್ನು ಅಲ್ಲಾಹು ಶಪಿಸಿದನೋ, ಯಾರ ಮೇಲೆ ಅವನು ಸಿಟ್ಟಾದನೋ, ಯಾವ ಗುಂಪಿಗೆ ಸೇರಿದವರನ್ನು ಅವನು ಕಪಿಗಳನ್ನಾಗಿ ಮತ್ತು ಹಂದಿಗಳನ್ನಾಗಿ ಮಾಡಿದನೋ, ಯಾರು ಮಿಥ್ಯ ದೇವರುಗಳನ್ನು ಆರಾಧಿಸಿದರೋ, ಅವರೇ ಅತ್ಯಂತ ತುಚ್ಛ ಸ್ಥಾನದಲ್ಲಿರುವವರು ಮತ್ತು ನೇರಮಾರ್ಗದಿಂದ ಅತಿಯಾಗಿ ತಪ್ಪಿಹೋದವರು.” info
التفاسير:

external-link copy
61 : 5

وَاِذَا جَآءُوْكُمْ قَالُوْۤا اٰمَنَّا وَقَدْ دَّخَلُوْا بِالْكُفْرِ وَهُمْ قَدْ خَرَجُوْا بِهٖ ؕ— وَاللّٰهُ اَعْلَمُ بِمَا كَانُوْا یَكْتُمُوْنَ ۟

ನಿಮ್ಮ ಬಳಿ ಬಂದಾಗ, ಅವರು ಹೇಳುತ್ತಾರೆ: “ನಾವು ವಿಶ್ವಾಸವಿಟ್ಟಿದ್ದೇವೆ.” ವಾಸ್ತವವಾಗಿ ಅವರು ಸತ್ಯನಿಷೇಧದೊಂದಿಗೇ ಬಂದಿದ್ದರು ಮತ್ತು ಅವರು ಸತ್ಯನಿಷೇಧದೊಂದಿಗೇ ಹೊರಟುಹೋದರು. ಅವರು ಅಡಗಿಸಿಡುವ ವಿಷಯಗಳನ್ನು ಅಲ್ಲಾಹು ಬಹಳ ಚೆನ್ನಾಗಿ ತಿಳಿದಿದ್ದಾನೆ. info
التفاسير:

external-link copy
62 : 5

وَتَرٰی كَثِیْرًا مِّنْهُمْ یُسَارِعُوْنَ فِی الْاِثْمِ وَالْعُدْوَانِ وَاَكْلِهِمُ السُّحْتَ ؕ— لَبِئْسَ مَا كَانُوْا یَعْمَلُوْنَ ۟

ಅವರಲ್ಲಿ ಹೆಚ್ಚಿನವರೂ ಪಾಪಗಳಲ್ಲಿ, ಅತಿಕ್ರಮಗಳಲ್ಲಿ ಮತ್ತು ನಿಷಿದ್ಧ ಧನವನ್ನು ತಿನ್ನುವುದರಲ್ಲಿ ತ್ವರೆ ಮಾಡುವುದನ್ನು ನೀವು ಕಾಣುವಿರಿ. ಅವರು ಮಾಡುವ ಕರ್ಮಗಳು ಬಹಳ ನಿಕೃಷ್ಟವಾಗಿವೆ! info
التفاسير:

external-link copy
63 : 5

لَوْلَا یَنْهٰىهُمُ الرَّبّٰنِیُّوْنَ وَالْاَحْبَارُ عَنْ قَوْلِهِمُ الْاِثْمَ وَاَكْلِهِمُ السُّحْتَ ؕ— لَبِئْسَ مَا كَانُوْا یَصْنَعُوْنَ ۟

ಅವರು ಕೆಟ್ಟ ಮಾತುಗಳನ್ನು ಹೇಳುವುದನ್ನು ಮತ್ತು ನಿಷಿದ್ಧ ಧನ ತಿನ್ನುವುದನ್ನು ಅವರಲ್ಲಿರುವ ದೇವನಿಷ್ಠರು ಮತ್ತು ವಿದ್ವಾಂಸರು ಏಕೆ ವಿರೋಧಿಸುವುದಿಲ್ಲ? ಅವರು ಮಾಡುವ ಕೆಲಸಗಳು ಬಹಳ ನಿಕೃಷ್ಟವಾಗಿವೆ. info
التفاسير:

external-link copy
64 : 5

وَقَالَتِ الْیَهُوْدُ یَدُ اللّٰهِ مَغْلُوْلَةٌ ؕ— غُلَّتْ اَیْدِیْهِمْ وَلُعِنُوْا بِمَا قَالُوْا ۘ— بَلْ یَدٰهُ مَبْسُوْطَتٰنِ ۙ— یُنْفِقُ كَیْفَ یَشَآءُ ؕ— وَلَیَزِیْدَنَّ كَثِیْرًا مِّنْهُمْ مَّاۤ اُنْزِلَ اِلَیْكَ مِنْ رَّبِّكَ طُغْیَانًا وَّكُفْرًا ؕ— وَاَلْقَیْنَا بَیْنَهُمُ الْعَدَاوَةَ وَالْبَغْضَآءَ اِلٰی یَوْمِ الْقِیٰمَةِ ؕ— كُلَّمَاۤ اَوْقَدُوْا نَارًا لِّلْحَرْبِ اَطْفَاَهَا اللّٰهُ ۙ— وَیَسْعَوْنَ فِی الْاَرْضِ فَسَادًا ؕ— وَاللّٰهُ لَا یُحِبُّ الْمُفْسِدِیْنَ ۟

“ಅಲ್ಲಾಹನ ಕೈಗಳನ್ನು ಸಂಕೋಲೆಯಿಂದ ಬಂಧಿಸಲಾಗಿದೆ” ಎಂದು ಯಹೂದಿಗಳು ಹೇಳಿದರು.[1] ಅವರ ಕೈಗಳನ್ನೇ ಸಂಕೋಲೆಯಿಂದ ಬಂಧಿಸಲಾಗಿದೆ ಮತ್ತು ಅವರ ಈ ಮಾತಿನಿಂದಾಗಿ ಅವರು ಅಲ್ಲಾಹನ ಶಾಪಕ್ಕೆ ಗುರಿಯಾಗಿದ್ದಾರೆ. ಅಲ್ಲ, ವಾಸ್ತವವಾಗಿ ಅಲ್ಲಾಹನ ಎರಡು ಕೈಗಳೂ ಚಾಚಿಕೊಂಡಿವೆ. ಅವನು ಇಚ್ಛಿಸುವಂತೆ ಅವನು ಖರ್ಚು ಮಾಡುತ್ತಾನೆ. ನಿಮಗೆ ನಿಮ್ಮ ಪರಿಪಾಲಕನಿಂದ (ಅಲ್ಲಾಹನಿಂದ) ಅವತೀರ್ಣವಾದ ಸಂದೇಶವು ಅವರಲ್ಲಿ ಹೆಚ್ಚಿನವರಿಗೆ ಅತಿರೇಕ ಮತ್ತು ಸತ್ಯನಿಷೇಧವನ್ನು ಹೆಚ್ಚಿಸುತ್ತಿದೆ. ಪುನರುತ್ಥಾನದ ದಿನದ ತನಕ ನಾವು ಅವರ ನಡುವೆ ವೈರ ಮತ್ತು ದ್ವೇಷವನ್ನು ಉಂಟು ಮಾಡಿದ್ದೇವೆ. ಅವರು ಯುದ್ಧಕ್ಕೆ ಬೆಂಕಿ ಉರಿಸಿದಾಗಲೆಲ್ಲಾ ಅಲ್ಲಾಹು ಅದನ್ನು ನಂದಿಸುತ್ತಾನೆ. ಅವರು ಭೂಮಿಯಲ್ಲಿ ಕಿಡಿಗೇಡಿತನ ಮಾಡಲು ಪರಿಶ್ರಮಿಸುತ್ತಾರೆ. ಆದರೆ ಅಲ್ಲಾಹು ಕಿಡಿಗೇಡಿಗಳನ್ನು ಇಷ್ಟಪಡುವುದಿಲ್ಲ. info

[1] ಬರಗಾಲ ಮತ್ತು ಸಂಕಷ್ಟಗಳು ಸಂಭವಿಸಿದಾಗ, ಅಲ್ಲಾಹನ ಕೈಗಳನ್ನು ಸಂಕೋಲೆಯಿಂದ ಬಂಧಿಸಲಾಗಿದೆಯೆಂದು ಯಹೂದಿಗಳು ಹೇಳುತ್ತಿದ್ದರು.

التفاسير: