Kilniojo Korano reikšmių vertimas - Vertimas į kanadiečių k. - Hamza Batūr

Puslapio numeris:close

external-link copy
114 : 5

قَالَ عِیْسَی ابْنُ مَرْیَمَ اللّٰهُمَّ رَبَّنَاۤ اَنْزِلْ عَلَیْنَا مَآىِٕدَةً مِّنَ السَّمَآءِ تَكُوْنُ لَنَا عِیْدًا لِّاَوَّلِنَا وَاٰخِرِنَا وَاٰیَةً مِّنْكَ ۚ— وَارْزُقْنَا وَاَنْتَ خَیْرُ الرّٰزِقِیْنَ ۟

ಮರ್ಯಮರ ಮಗ ಈಸಾ ಹೇಳಿದರು: “ಓ ನಮ್ಮ ಪರಿಪಾಲಕನಾದ ಅಲ್ಲಾಹನೇ! ನಮಗೆ ಆಕಾಶದಿಂದ ಒಂದು ಆಹಾರದ ತಟ್ಟೆಯನ್ನು ಇಳಿಸಿಕೊಡು. ಅದು ನಮ್ಮಲ್ಲಿ ಮೊದಲಿನವರಿಗೆ ಮತ್ತು ಕೊನೆಯವರಿಗೆ ಒಂದು ಹಬ್ಬವಾಗಲಿ ಮತ್ತು ನಿನ್ನ ಕಡೆಯ ಒಂದು ದೃಷ್ಟಾಂತವಾಗಲಿ. ನಮಗೆ ಆಹಾರವನ್ನು ನೀಡು. ಆಹಾರ ನೀಡುವವರಲ್ಲಿ ನೀನು ಅತ್ಯುತ್ತಮನಾಗಿರುವೆ.” info
التفاسير:

external-link copy
115 : 5

قَالَ اللّٰهُ اِنِّیْ مُنَزِّلُهَا عَلَیْكُمْ ۚ— فَمَنْ یَّكْفُرْ بَعْدُ مِنْكُمْ فَاِنِّیْۤ اُعَذِّبُهٗ عَذَابًا لَّاۤ اُعَذِّبُهٗۤ اَحَدًا مِّنَ الْعٰلَمِیْنَ ۟۠

ಅಲ್ಲಾಹು ಹೇಳಿದನು: “ನಿಶ್ಚಯವಾಗಿಯೂ ನಾನು ನಿಮಗೆ ಅದನ್ನು ಇಳಿಸಿಕೊಡುವೆನು. ಆದರೆ, ಅದರ ನಂತರವೂ ನಿಮ್ಮಲ್ಲಿ ಯಾರಾದರೂ ಸತ್ಯನಿಷೇಧಿಯಾದರೆ, ಸರ್ವಲೋಕದವರಲ್ಲಿ ಯಾರಿಗೂ ನೀಡದ ಕಠೋರ ಶಿಕ್ಷೆಯನ್ನು ನಾನು ಅವನಿಗೆ ನೀಡುವೆನು.” info
التفاسير:

external-link copy
116 : 5

وَاِذْ قَالَ اللّٰهُ یٰعِیْسَی ابْنَ مَرْیَمَ ءَاَنْتَ قُلْتَ لِلنَّاسِ اتَّخِذُوْنِیْ وَاُمِّیَ اِلٰهَیْنِ مِنْ دُوْنِ اللّٰهِ ؕ— قَالَ سُبْحٰنَكَ مَا یَكُوْنُ لِیْۤ اَنْ اَقُوْلَ مَا لَیْسَ لِیْ ۗ— بِحَقٍّ ؔؕ— اِنْ كُنْتُ قُلْتُهٗ فَقَدْ عَلِمْتَهٗ ؕ— تَعْلَمُ مَا فِیْ نَفْسِیْ وَلَاۤ اَعْلَمُ مَا فِیْ نَفْسِكَ ؕ— اِنَّكَ اَنْتَ عَلَّامُ الْغُیُوْبِ ۟

ಅಲ್ಲಾಹು ಹೇಳುವ ಸಂದರ್ಭ: “ಓ ಮರ್ಯಮರ ಮಗ ಈಸಾ! ಅಲ್ಲಾಹನನ್ನು ಬಿಟ್ಟು ನನ್ನನ್ನು ಮತ್ತು ನನ್ನ ತಾಯಿಯನ್ನು ದೇವರಾಗಿ ಸ್ವೀಕರಿಸಿರಿ ಎಂದು ನೀವು ಜನರಿಗೆ ಹೇಳಿದ್ದೀರಾ?” ಈಸಾ ಹೇಳುವರು: “ನೀನು ಮಹಾ ಪರಿಶುದ್ಧನು. ನನಗೆ ಹೇಳಲು ಹಕ್ಕಿಲ್ಲದ ಒಂದು ಮಾತನ್ನು ನಾನು ಹೇಗೆ ಹೇಳುವೆನು? ನಾನು ಹಾಗೆ ಹೇಳಿದ್ದರೆ ನಿಶ್ಚಯವಾಗಿಯೂ ನಿನಗೆ ಅದು ತಿಳಿದಿರುತ್ತಿತ್ತು. ನನ್ನ ಮನಸ್ಸಿನಲ್ಲಿರುವುದು ನಿನಗೆ ತಿಳಿಯುತ್ತದೆ. ಆದರೆ ನಿನ್ನ ಮನಸ್ಸಿನಲ್ಲಿರುವುದು ನನಗೆ ತಿಳಿಯುವುದಿಲ್ಲ. ನಿಶ್ಚಯವಾಗಿಯೂ ನೀನು ಅದೃಶ್ಯ ವಿಷಯಗಳನ್ನು ತಿಳಿದವನಾಗಿರುವೆ. info
التفاسير:

external-link copy
117 : 5

مَا قُلْتُ لَهُمْ اِلَّا مَاۤ اَمَرْتَنِیْ بِهٖۤ اَنِ اعْبُدُوا اللّٰهَ رَبِّیْ وَرَبَّكُمْ ۚ— وَكُنْتُ عَلَیْهِمْ شَهِیْدًا مَّا دُمْتُ فِیْهِمْ ۚ— فَلَمَّا تَوَفَّیْتَنِیْ كُنْتَ اَنْتَ الرَّقِیْبَ عَلَیْهِمْ ؕ— وَاَنْتَ عَلٰی كُلِّ شَیْءٍ شَهِیْدٌ ۟

ನೀನು ನನಗೆ ಆದೇಶಿಸಿದ್ದನ್ನು—ಅಂದರೆ ನನ್ನ ಮತ್ತು ನಿಮ್ಮ ಪರಿಪಾಲಕನಾದ ಅಲ್ಲಾಹನನ್ನು ಮಾತ್ರ ಆರಾಧಿಸಿರಿ ಎಂಬುದನ್ನು ಬಿಟ್ಟು ಬೇರೇನನ್ನೂ ನಾನು ಅವರಿಗೆ ಹೇಳಿಲ್ಲ. ನಾನು ಎಲ್ಲಿಯ ತನಕ ಅವರೊಂದಿಗೆ ಇದ್ದೆನೋ ಅಲ್ಲಿಯ ತನಕ ನಾನು ಅವರ ಮೇಲೆ ಸಾಕ್ಷಿಯಾಗಿದ್ದೆ. ನಂತರ ನೀನು ನನ್ನನ್ನು ಎತ್ತಿಕೊಂಡ ಬಳಿಕ ನೀನೇ ಅವರ ವೀಕ್ಷಕನಾಗಿದ್ದೆ. ನೀನು ಎಲ್ಲಾ ವಿಷಯಗಳಿಗೂ ಸಾಕ್ಷಿಯಾಗಿರುವೆ. info
التفاسير:

external-link copy
118 : 5

اِنْ تُعَذِّبْهُمْ فَاِنَّهُمْ عِبَادُكَ ۚ— وَاِنْ تَغْفِرْ لَهُمْ فَاِنَّكَ اَنْتَ الْعَزِیْزُ الْحَكِیْمُ ۟

ನೀನು ಅವರನ್ನು ಶಿಕ್ಷಿಸುವುದಾದರೆ ನಿಶ್ಚಯವಾಗಿಯೂ ಅವರು ನಿನ್ನ ದಾಸರಾಗಿದ್ದಾರೆ. ಆದರೆ ನೀನು ಅವರನ್ನು ಕ್ಷಮಿಸುವುದಾದರೆ, ನಿಶ್ಚಯವಾಗಿಯೂ ನೀನು ಪ್ರಬಲನು ಮತ್ತು ವಿವೇಕಪೂರ್ಣನಾಗಿರುವೆ.” info
التفاسير:

external-link copy
119 : 5

قَالَ اللّٰهُ هٰذَا یَوْمُ یَنْفَعُ الصّٰدِقِیْنَ صِدْقُهُمْ ؕ— لَهُمْ جَنّٰتٌ تَجْرِیْ مِنْ تَحْتِهَا الْاَنْهٰرُ خٰلِدِیْنَ فِیْهَاۤ اَبَدًا ؕ— رَضِیَ اللّٰهُ عَنْهُمْ وَرَضُوْا عَنْهُ ؕ— ذٰلِكَ الْفَوْزُ الْعَظِیْمُ ۟

ಅಲ್ಲಾಹು ಹೇಳುವನು: “ಇದು ಸತ್ಯವಂತರಿಗೆ ಅವರ ಸತ್ಯವು ಪ್ರಯೋಜನ ನೀಡುವ ದಿನವಾಗಿದೆ. ಅವರಿಗೆ ತಳಭಾಗದಿಂದ ನದಿಗಳು ಹರಿಯುವ ಸ್ವರ್ಗೋದ್ಯಾನಗಳಿವೆ. ಅವರು ಅದರಲ್ಲಿ ಶಾಶ್ವತವಾಗಿ ವಾಸಿಸುವರು. ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಿದ್ದಾನೆ ಮತ್ತು ಅವರು ಅಲ್ಲಾಹನ ಬಗ್ಗೆ ಸಂಪ್ರೀತರಾಗಿದ್ದಾರೆ. ಅದೇ ಮಹಾ ವಿಜಯ.” info
التفاسير:

external-link copy
120 : 5

لِلّٰهِ مُلْكُ السَّمٰوٰتِ وَالْاَرْضِ وَمَا فِیْهِنَّ ؕ— وَهُوَ عَلٰی كُلِّ شَیْءٍ قَدِیْرٌ ۟۠

ಭೂಮ್ಯಾಕಾಶಗಳ ಮತ್ತು ಅವುಗಳ ನಡುವೆಯಿರುವ ಎಲ್ಲಾ ವಸ್ತುಗಳ ಆಧಿಪತ್ಯವು ಅಲ್ಲಾಹನಿಗೆ ಸೇರಿದ್ದು. ಅಲ್ಲಾಹು ಎಲ್ಲ ವಿಷಯಗಳಲ್ಲೂ ಸಾಮರ್ಥ್ಯವುಳ್ಳವನಾಗಿದ್ದಾನೆ. info
التفاسير: