വിശുദ്ധ ഖുർആൻ പരിഭാഷ - കന്നഡ വിവർത്തനം - ബഷീർ മൈസൂരി

external-link copy
61 : 11

وَاِلٰی ثَمُوْدَ اَخَاهُمْ صٰلِحًا ۘ— قَالَ یٰقَوْمِ اعْبُدُوا اللّٰهَ مَا لَكُمْ مِّنْ اِلٰهٍ غَیْرُهٗ ؕ— هُوَ اَنْشَاَكُمْ مِّنَ الْاَرْضِ وَاسْتَعْمَرَكُمْ فِیْهَا فَاسْتَغْفِرُوْهُ ثُمَّ تُوْبُوْۤا اِلَیْهِ ؕ— اِنَّ رَبِّیْ قَرِیْبٌ مُّجِیْبٌ ۟

ಸಮೂದ್ ಜನಾಂಗದೆಡೆಗೆ ನಾವು ಅವರ ಸಹೋದರ ಸ್ವಾಲಿಹ್‌ರವರನ್ನು ಕಳುಹಿಸಿದೆವು. ಅವರು ಹೇಳಿದರು. ಓ ನನ್ನ ಜನಾಂಗದವರೇ, ನೀವು ಅಲ್ಲಾಹನನ್ನು ಆರಾಧಿಸಿರಿ. ಅವನ ಹೊರತು ನಿಮಗೆ ಬೇರಾವ ಆರಾಧ್ಯ ದೇವನಿಲ್ಲ. ಅವನೇ ನಿಮ್ಮನ್ನು ಭೂಮಿಯಿಂದ ಸೃಷ್ಟಿಸಿದನು ಮತ್ತು ಅವನೇ ಅದರಲ್ಲಿ ನಿಮ್ಮನ್ನು ನೆಲಗೊಳಿಸಿದನು ಆದ್ದರಿಂದ ನೀವು ಅವನಲ್ಲಿ ಕ್ಷಮೆಯಾಚಿಸಿರಿ. ಮತ್ತು ಅವನೆಡೆಗೆ ಪಶ್ಚಾತ್ತಾಪ ಪಟ್ಟು ಮರಳಿರಿ. ನಿಸ್ಸಂಶಯವಾಗಿಯೂ ನನ್ನ ಪ್ರಭುವು ಸಾಮಿಪ್ಯಸ್ಥನೂ ಕರೆಗೆ ಓಗೊಡುವವನೂ ಆಗಿದ್ದಾನೆ. info
التفاسير: