വിശുദ്ധ ഖുർആൻ പരിഭാഷ - കന്നഡ പരിഭാഷ - ബഷീർ മൈസൂരി

external-link copy
73 : 7

وَاِلٰی ثَمُوْدَ اَخَاهُمْ صٰلِحًا ۘ— قَالَ یٰقَوْمِ اعْبُدُوا اللّٰهَ مَا لَكُمْ مِّنْ اِلٰهٍ غَیْرُهٗ ؕ— قَدْ جَآءَتْكُمْ بَیِّنَةٌ مِّنْ رَّبِّكُمْ ؕ— هٰذِهٖ نَاقَةُ اللّٰهِ لَكُمْ اٰیَةً فَذَرُوْهَا تَاْكُلْ فِیْۤ اَرْضِ اللّٰهِ وَلَا تَمَسُّوْهَا بِسُوْٓءٍ فَیَاْخُذَكُمْ عَذَابٌ اَلِیْمٌ ۟

ಮತ್ತು ನಾವು ಸಮೂದ್ ಜನಾಂಗದೆಡೆಗೆ ಅವರ ಸಹೋದರ ಸ್ವಾಲಿಹ್‌ರವರನ್ನು ಕಳುಹಿಸಿದೆವು. ಅವರು ಹೇಳಿದರು: ಓ ನನ್ನ ಜನತೆಯೇ, ನೀವು ಅಲ್ಲಾಹನನ್ನು ಆರಾಧಿಸಿರಿ. ಅವನ ಹೊರತು ನಿಮಗೆ ಅನ್ಯ ಆರಾಧ್ಯನಿಲ್ಲ. ನಿಮ್ಮ ಬಳಿಗೆ ನಿಮ್ಮ ಪ್ರಭುವಿನ ಕಡೆಯಿಂದ ಸ್ಪಷ್ಟವಾದ ಒಂದು ಪುರಾವೆಯು ಬಂದಿರುತ್ತದೆ. ಇದು ನಿಮಗೆ ದೃಷ್ಟಾಂತವಾಗಿರುವ ಅಲ್ಲಾಹನ ಒಂಟೆಯಾಗಿದೆ. ಅದ್ದರಿಂದ ನೀವಿದನ್ನು ಅಲ್ಲಾಹನ ಭೂಮಿಯಲ್ಲಿ ಮೇಯುತ್ತಿರಲು ಬಿಟ್ಟು ಬಿಡಿರಿ. ನೀವು ಇದರ ಮೇಲೆ ಕೆಟ್ಟ ಉದ್ದೇಶದಿಂದ ಕೈಹಾಕಬೇಡಿರಿ. ಅನ್ಯಥಾ ವೇದನಾಜನಕವಾದ ಶಿಕ್ಷೆಯು ನಿಮ್ಮನ್ನು ಹಿಡಿದುಕೊಳ್ಳುವುದು. info
التفاسير: