വിശുദ്ധ ഖുർആൻ പരിഭാഷ - കന്നഡ പരിഭാഷ - ഹംസ പുത്തൂർ

ಅಲ್- ಅಹ್ ಝಾಬ್

external-link copy
1 : 33

یٰۤاَیُّهَا النَّبِیُّ اتَّقِ اللّٰهَ وَلَا تُطِعِ الْكٰفِرِیْنَ وَالْمُنٰفِقِیْنَ ؕ— اِنَّ اللّٰهَ كَانَ عَلِیْمًا حَكِیْمًا ۟ۙ

ಓ ಪ್ರವಾದಿಯವರೇ! ಅಲ್ಲಾಹನನ್ನು ಭಯಪಡಿರಿ. ಸತ್ಯನಿಷೇಧಿಗಳನ್ನು ಮತ್ತು ಕಪಟವಿಶ್ವಾಸಿಗಳನ್ನು ಅನುಸರಿಸಬೇಡಿ. ನಿಶ್ಚಯವಾಗಿಯೂ ಅಲ್ಲಾಹು ಸರ್ವಜ್ಞನು ಮತ್ತು ವಿವೇಕಪೂರ್ಣನಾಗಿದ್ದಾನೆ. info
التفاسير:

external-link copy
2 : 33

وَّاتَّبِعْ مَا یُوْحٰۤی اِلَیْكَ مِنْ رَّبِّكَ ؕ— اِنَّ اللّٰهَ كَانَ بِمَا تَعْمَلُوْنَ خَبِیْرًا ۟ۙ

ನಿಮಗೆ ನಿಮ್ಮ ಪರಿಪಾಲಕನ (ಅಲ್ಲಾಹನ) ಕಡೆಯಿಂದ ನೀಡಲಾಗುವ ದೇವವಾಣಿಗಳನ್ನು ಅನುಸರಿಸಿರಿ. ನಿಶ್ಚಯವಾಗಿಯೂ ಅಲ್ಲಾಹು ನೀವು ಮಾಡುತ್ತಿರುವ ಕರ್ಮಗಳನ್ನು ಸೂಕ್ಷ್ಮವಾಗಿ ತಿಳಿಯುತ್ತಾನೆ. info
التفاسير:

external-link copy
3 : 33

وَّتَوَكَّلْ عَلَی اللّٰهِ ؕ— وَكَفٰی بِاللّٰهِ وَكِیْلًا ۟

ಅಲ್ಲಾಹನಲ್ಲಿ ಭರವಸೆಯಿಡಿ. ಕಾರ್ಯನಿರ್ವಾಹಕನಾಗಿ ಅಲ್ಲಾಹು ಸಾಕು. info
التفاسير:

external-link copy
4 : 33

مَا جَعَلَ اللّٰهُ لِرَجُلٍ مِّنْ قَلْبَیْنِ فِیْ جَوْفِهٖ ۚ— وَمَا جَعَلَ اَزْوَاجَكُمُ الّٰٓـِٔیْ تُظٰهِرُوْنَ مِنْهُنَّ اُمَّهٰتِكُمْ ۚ— وَمَا جَعَلَ اَدْعِیَآءَكُمْ اَبْنَآءَكُمْ ؕ— ذٰلِكُمْ قَوْلُكُمْ بِاَفْوَاهِكُمْ ؕ— وَاللّٰهُ یَقُوْلُ الْحَقَّ وَهُوَ یَهْدِی السَّبِیْلَ ۟

ಅಲ್ಲಾಹು ಯಾವುದೇ ವ್ಯಕ್ತಿಗೂ ಅವನ ದೇಹದೊಳಗೆ ಎರಡು ಹೃದಯಗಳನ್ನು ಉಂಟುಮಾಡಿಲ್ಲ.[1] ನೀವು ಝಿಹಾರ್ ಮಾಡುವ ನಿಮ್ಮ ಪತ್ನಿಯರನ್ನು ಅವನು ನಿಮಗೆ ತಾಯಿಯಾಗಿ ಮಾಡಿಲ್ಲ.[2] ನಿಮ್ಮ ದತ್ತುಪುತ್ರರನ್ನು ಅವನು ನಿಮಗೆ ಪುತ್ರರಾಗಿ ಮಾಡಿಲ್ಲ.[3] ಇವೆಲ್ಲವೂ ನೀವು ನಿಮ್ಮ ಬಾಯಿಯಿಂದ ಹೇಳುವ ಮಾತುಗಳಾಗಿವೆ. ಅಲ್ಲಾಹು ಸತ್ಯವನ್ನೇ ಹೇಳುತ್ತಾನೆ. ಅವನು ಸನ್ಮಾರ್ಗವನ್ನು ತೋರಿಸಿಕೊಡುತ್ತಾನೆ. info

[1] ಕಪಟವಿಶ್ವಾಸಿಗಳಲ್ಲಿ ಕೆಲವರು ಹೇಳುತ್ತಿದ್ದರು: “ನಮಗೆ ಎರಡು ಹೃದಯಗಳಿವೆ. ಒಂದು ಹೃದಯದಲ್ಲಿ ಮುಸಲ್ಮಾನರ ಬಗ್ಗೆ ಪ್ರೀತಿಯಿದೆ ಮತ್ತು ಇನ್ನೊಂದು ಹೃದಯದಲ್ಲಿ ಸತ್ಯನಿಷೇಧಿಗಳ ಬಗ್ಗೆ ಪ್ರೀತಿಯಿದೆ.” ಆದರೆ ಅಲ್ಲಾಹು ಇದನ್ನು ನಿರಾಕರಿಸಿ, ಮನುಷ್ಯನಿಗೆ ಇರುವುದು ಒಂದೇ ಹೃದಯ. ಆ ಹೃದಯದಲ್ಲಿ ಅಲ್ಲಾಹನಲ್ಲಿರುವ ಪ್ರೀತಿ ಮತ್ತು ಅಲ್ಲಾಹನ ವೈರಿಗಳಲ್ಲಿರುವ ಪ್ರೀತಿ ಒಟ್ಟಿಗೆ ಇರಲು ಸಾಧ್ಯವಿಲ್ಲ ಎಂದು ಹೇಳುತ್ತಿದ್ದಾನೆ. [2] ಝಿಹಾರ್ ಎಂದರೆ ಹೆಂಡತಿಯನ್ನು “ನೀನು ನನಗೆ ನನ್ನ ತಾಯಿ ಸಮಾನ” ಎಂದು ಹೇಳಿ ಆಕೆಯೊಂದಿಗೆ ಲೈಂಗಿಕ ಸಂಬಂಧವನ್ನು ಕಡಿದುಕೊಳ್ಳುವುದು. ಆದರೆ ಇದು ವಿಚ್ಛೇದನವಲ್ಲ. ಆದ್ದರಿಂದ ಹೆಂಡತಿಗೆ ಅತ್ತ ಗಂಡನೊಂದಿಗೆ ಬದುಕಲೂ ಆಗದೆ ಇತ್ತ ಬೇರೊಬ್ಬನನ್ನು ವಿವಾಹವಾಗಲೂ ಆಗದೆ ಅಡಕತ್ತರಿಯಲ್ಲಿ ಸಿಲುಕಿದ ಪರಿಸ್ಥಿತಿಯನ್ನು ಅನುಭವಿಸಬೇಕಾಗಿ ಬರುತ್ತಿತ್ತು. ಇಸ್ಲಾಮಿ ಪೂರ್ವ ಕಾಲದಲ್ಲಿ ವ್ಯಾಪಕವಾಗಿದ್ದ ಇಂತಹ ಅನೇಕ ಮಹಿಳಾ ವಿರೋಧಿ ಸಂಪ್ರದಾಯಗಳನ್ನು ಇಸ್ಲಾಂ ಕೊನೆಗೊಳಿಸಿತು. [3] ಮಕ್ಕಳನ್ನು ದತ್ತು ಪಡೆಯುವುದನ್ನು ಇಸ್ಲಾಂ ವಿರೋಧಿಸುವುದಿಲ್ಲ. ಆದರೆ ದತ್ತು ಪಡೆದ ಮಕ್ಕಳು ದತ್ತು ಪುತ್ರರಾಗಿರುತ್ತಾರೆಯೇ ವಿನಾ ದತ್ತು ಪಡೆದವನ ಸ್ವಂತ ಮಕ್ಕಳ ಸ್ಥಾನಮಾನಕ್ಕೇರುವುದಿಲ್ಲ. ದತ್ತು ಪಡೆದ ವ್ಯಕ್ತಿ ಕೇವಲ ಸಂರಕ್ಷಕನಾಗುತ್ತಾನೆಯೇ ಹೊರತು ನೈಜ ತಂದೆಯಾಗುವುದಿಲ್ಲ.

التفاسير:

external-link copy
5 : 33

اُدْعُوْهُمْ لِاٰبَآىِٕهِمْ هُوَ اَقْسَطُ عِنْدَ اللّٰهِ ۚ— فَاِنْ لَّمْ تَعْلَمُوْۤا اٰبَآءَهُمْ فَاِخْوَانُكُمْ فِی الدِّیْنِ وَمَوَالِیْكُمْ ؕ— وَلَیْسَ عَلَیْكُمْ جُنَاحٌ فِیْمَاۤ اَخْطَاْتُمْ بِهٖ وَلٰكِنْ مَّا تَعَمَّدَتْ قُلُوْبُكُمْ ؕ— وَكَانَ اللّٰهُ غَفُوْرًا رَّحِیْمًا ۟

ನೀವು ಅವರನ್ನು (ದತ್ತುಪುತ್ರರನ್ನು) ಅವರ ತಂದೆಯ ಹೆಸರಿಗೆ ಸೇರಿಸಿ ಕರೆಯಿರಿ. ಅದು ಅಲ್ಲಾಹನ ಬಳಿ ಅತ್ಯಂತ ನ್ಯಾಯಯುತವಾಗಿದೆ. ನಿಮಗೆ ಅವರ ತಂದೆ ಯಾರೆಂದು ಗೊತ್ತಿಲ್ಲದಿದ್ದರೆ ಅವರು ನಿಮ್ಮ ಧಾರ್ಮಿಕ ಸಹೋದರರು ಮತ್ತು ಮಿತ್ರರಾಗಿದ್ದಾರೆ. ನೀವು ಪ್ರಮಾದದಿಂದ ಏನಾದರೂ ತಪ್ಪುಗಳನ್ನು ಮಾಡಿದರೆ ಅದರಿಂದ ನಿಮಗೆ ದೋಷವಿಲ್ಲ. ಆದರೆ ನೀವು ಉದ್ದೇಶಪೂರ್ವಕ ಮಾಡುವ ತಪ್ಪುಗಳಿಗೆ ಶಿಕ್ಷೆಯಿದೆ. ಅಲ್ಲಾಹು ಕ್ಷಮಿಸುವವನು ಮತ್ತು ದಯೆ ತೋರುವವನಾಗಿದ್ದಾನೆ. info
التفاسير:

external-link copy
6 : 33

اَلنَّبِیُّ اَوْلٰی بِالْمُؤْمِنِیْنَ مِنْ اَنْفُسِهِمْ وَاَزْوَاجُهٗۤ اُمَّهٰتُهُمْ ؕ— وَاُولُوا الْاَرْحَامِ بَعْضُهُمْ اَوْلٰی بِبَعْضٍ فِیْ كِتٰبِ اللّٰهِ مِنَ الْمُؤْمِنِیْنَ وَالْمُهٰجِرِیْنَ اِلَّاۤ اَنْ تَفْعَلُوْۤا اِلٰۤی اَوْلِیٰٓىِٕكُمْ مَّعْرُوْفًا ؕ— كَانَ ذٰلِكَ فِی الْكِتٰبِ مَسْطُوْرًا ۟

ಸತ್ಯವಿಶ್ವಾಸಿಗಳಿಗೆ ಸ್ವಯಂ ಅವರಿಗಿಂತಲೂ ಹೆಚ್ಚು ಪ್ರವಾದಿಯವರು ಆಪ್ತರಾಗಿದ್ದಾರೆ.[1] ಅವರ ಪತ್ನಿಯರು ಸತ್ಯವಿಶ್ವಾಸಿಗಳ ಮಾತೆಯರಾಗಿದ್ದಾರೆ.[2] ಅಲ್ಲಾಹನ ಗ್ರಂಥದಲ್ಲಿ ಇತರ ಸತ್ಯವಿಶ್ವಾಸಿಗಳು ಮತ್ತು ಮುಹಾಜಿರರಿಗಿಂತಲೂ ಹೆಚ್ಚು ರಕ್ತ ಸಂಬಂಧಿಗಳು ಪರಸ್ಪರ ಆಪ್ತರಾಗಿದ್ದಾರೆ.[3] ಆದರೆ ನೀವು ನಿಮ್ಮ ಮಿತ್ರರೊಡನೆ ಉತ್ತಮವಾಗಿ ವರ್ತಿಸುವುದು ಇದರಿಂದ ಹೊರತಾಗಿದೆ. ಅದು ಗ್ರಂಥದಲ್ಲಿ ದಾಖಲಿಸಲಾದ ನಿಯಮವಾಗಿದೆ. info

[1] ಪ್ರವಾದಿ ಮುಹಮ್ಮದ್ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ರವರು ಸತ್ಯವಿಶ್ವಾಸಿಗಳ ಹಿತಚಿಂತಕರಾಗಿದ್ದಾರೆ. ಸತ್ಯವಿಶ್ವಾಸಿಗಳು ಅಭ್ಯುದಯ ಹೊಂದಬೇಕು ಮತ್ತು ಸ್ವರ್ಗ ಪ್ರವೇಶ ಮಾಡಬೇಕು ಎಂಬುದೇ ಅವರ ಪರಮೋಚ್ಛ ಗುರಿಯಾಗಿದೆ. ಅದಕ್ಕಾಗಿ ಅವರು ಆಹೋರಾತ್ರಿ ನಿರಂತರ ಪರಿಶ್ರಮಿಸುತ್ತಾರೆ. ಆದ್ದರಿಂದ ಸತ್ಯವಿಶ್ವಾಸಿಗಳು ಕೂಡ ಅವರನ್ನು ಅತಿಯಾಗಿ ಪ್ರೀತಿಸಬೇಕು. ಅವರಿಗಾಗಿ ಯಾವುದೇ ತ್ಯಾಗವನ್ನು ಮಾಡಲು ಸಿದ್ಧರಾಗಬೇಕು. ಇತರೆಲ್ಲರಿಗಿಂತ ಹೆಚ್ಚು ಅವರನ್ನು ಪ್ರೀತಿಸಬೇಕು. ಅವರ ಆಜ್ಞೆಗಳನ್ನು ಪಾಲಿಸುವುದರಲ್ಲಿ ಸ್ವಲ್ಪವೂ ಹಿಂಜರಿಯಬಾರದು. [2] ಅಂದರೆ ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ನಂತರ ಅವರ ಪತ್ನಿಯರನ್ನು ವಿವಾಹವಾಗುವ ಅನುಮತಿ ಯಾರಿಗೂ ಇಲ್ಲ. ಏಕೆಂದರೆ, ಅವರು ಗೌರವಾನ್ವಿತ ಸ್ಥಾನದಲ್ಲಿರುವವರು. ಅವರು ಸತ್ಯವಿಶ್ವಾಸಿ ಪುರುಷರಿಗೂ, ಮಹಿಳೆಯರಿಗೂ ತಾಯಂದಿರಾಗಿದ್ದಾರೆ. [3] ಮುಹಾಜಿರರು (ಮಕ್ಕಾದಿಂದ ಹಿಜ್ರ ಮಾಡಿದ ಮುಸ್ಲಿಮರು) ಮದೀನಕ್ಕೆ ವಲಸೆ ಬಂದ ಆರಂಭಕಾಲದಲ್ಲಿ ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಒಬ್ಬ ಮುಹಾಜಿರ್ ಮತ್ತು ಒಬ್ಬ ಅನ್ಸಾರ್ (ಮದೀನ ನಿವಾಸಿ ಮುಸ್ಲಿಂ) ನಡುವೆ ವಿಶೇಷ ಸಾಹೋದರತೆಯನ್ನು ಸ್ಥಾಪಿಸಿದ್ದರು. ಅನ್ಸಾರರು ತಮ್ಮ ಆಸ್ತಿಯಲ್ಲಿ ಮುಹಾಜಿರರಿಗೆ ಹಕ್ಕನ್ನು ನೀಡುತ್ತಿದ್ದರು. ಆದರೆ ವಾರಸು ನಿಯಮಗಳನ್ನು ವಿವರಿಸುವ ವಚನಗಳು ಅವತೀರ್ಣವಾದ ನಂತರ ವಾರೀಸು ಹಕ್ಕನ್ನು ಕೇವಲ ಸಂಬಂಧಿಕರಿಗೆ ಮಾತ್ರ ಸೀಮಿತಗೊಳಿಸಲಾಯಿತು.

التفاسير: