വിശുദ്ധ ഖുർആൻ പരിഭാഷ - കന്നഡ പരിഭാഷ - ഹംസ പുത്തൂർ

പേജ് നമ്പർ:close

external-link copy
31 : 33

وَمَنْ یَّقْنُتْ مِنْكُنَّ لِلّٰهِ وَرَسُوْلِهٖ وَتَعْمَلْ صَالِحًا نُّؤْتِهَاۤ اَجْرَهَا مَرَّتَیْنِ ۙ— وَاَعْتَدْنَا لَهَا رِزْقًا كَرِیْمًا ۟

ನಿಮ್ಮಲ್ಲಿ ಯಾರು ಅಲ್ಲಾಹನಿಗೆ ಮತ್ತು ಅವನ ಸಂದೇಶವಾಹಕರಿಗೆ ವಿನಮ್ರರಾಗಿರುತ್ತಾರೋ ಮತ್ತು ಸತ್ಕರ್ಮವೆಸಗುತ್ತಾರೋ ಅವರಿಗೆ ನಾವು ಇಮ್ಮಡಿ ಪ್ರತಿಫಲವನ್ನು ನೀಡುವೆವು. ಅವರಿಗೆ ನಾವು ಗೌರವಾನ್ವಿತ ಉಪಜೀವನವನ್ನು ಸಿದ್ಧಗೊಳಿಸಿದ್ದೇವೆ. info
التفاسير:

external-link copy
32 : 33

یٰنِسَآءَ النَّبِیِّ لَسْتُنَّ كَاَحَدٍ مِّنَ النِّسَآءِ اِنِ اتَّقَیْتُنَّ فَلَا تَخْضَعْنَ بِالْقَوْلِ فَیَطْمَعَ الَّذِیْ فِیْ قَلْبِهٖ مَرَضٌ وَّقُلْنَ قَوْلًا مَّعْرُوْفًا ۟ۚ

ಓ ಪ್ರವಾದಿಯ ಮಡದಿಯರೇ! ನೀವು ಇತರ ಮಹಿಳೆಯರಂತಲ್ಲ. ನೀವು ಅಲ್ಲಾಹನನ್ನು ಭಯಪಡುವುದಾದರೆ, ನೀವು ಮೃದುವಾಗಿ ಮಾತನಾಡಬೇಡಿ. ಏಕೆಂದರೆ ಅದರಿಂದ ಹೃದಯದಲ್ಲಿ ರೋಗವಿರುವವರು ನಿಮ್ಮ ಬಗ್ಗೆ ಕೆಟ್ಟ ಭಾವನೆಗಳನ್ನಿಟ್ಟುಕೊಳ್ಳಬಹುದು. ನೀವು ಯೋಗ್ಯವಾದ ಮಾತುಗಳನ್ನೇ ಆಡಿರಿ. info
التفاسير:

external-link copy
33 : 33

وَقَرْنَ فِیْ بُیُوْتِكُنَّ وَلَا تَبَرَّجْنَ تَبَرُّجَ الْجَاهِلِیَّةِ الْاُوْلٰی وَاَقِمْنَ الصَّلٰوةَ وَاٰتِیْنَ الزَّكٰوةَ وَاَطِعْنَ اللّٰهَ وَرَسُوْلَهٗ ؕ— اِنَّمَا یُرِیْدُ اللّٰهُ لِیُذْهِبَ عَنْكُمُ الرِّجْسَ اَهْلَ الْبَیْتِ وَیُطَهِّرَكُمْ تَطْهِیْرًا ۟ۚ

ನೀವು ನಿಮ್ಮ ಮನೆಗಳಲ್ಲೇ ಇರಿ. ಹಿಂದಿನ ಅಜ್ಞಾನಕಾಲದಂತೆ ನಿಮ್ಮ ಸೌಂದರ್ಯ ಪ್ರದರ್ಶನ ಮಾಡಬೇಡಿ. ನಮಾಝನ್ನು ಸಂಸ್ಥಾಪಿಸಿರಿ ಮತ್ತು ಝಕಾತ್ ನೀಡಿರಿ. ಅಲ್ಲಾಹು ಮತ್ತು ಅವನ ಸಂದೇಶವಾಹಕರ ಆಜ್ಞಾಪಾಲನೆ ಮಾಡಿರಿ. ಓ ಪ್ರವಾದಿಯ ಮನೆಯವರೇ! ಅಲ್ಲಾಹು ನಿಮ್ಮಿಂದ ಕೊಳೆಯನ್ನು ನಿವಾರಿಸಲು ಮತ್ತು ನಿಮ್ಮನ್ನು ಸಂಪೂರ್ಣ ಶುದ್ಧೀಕರಿಸಲು ಬಯಸುತ್ತಾನೆ. info
التفاسير:

external-link copy
34 : 33

وَاذْكُرْنَ مَا یُتْلٰی فِیْ بُیُوْتِكُنَّ مِنْ اٰیٰتِ اللّٰهِ وَالْحِكْمَةِ ؕ— اِنَّ اللّٰهَ كَانَ لَطِیْفًا خَبِیْرًا ۟۠

ನಿಮಗೆ ನಿಮ್ಮ ಮನೆಗಳಲ್ಲಿ ಓದಿಕೊಡಲಾಗುವ ಅಲ್ಲಾಹನ ವಚನಗಳನ್ನು ಮತ್ತು ವಿವೇಕವನ್ನು ಸ್ಮರಿಸಿರಿ. ನಿಶ್ಚಯವಾಗಿಯೂ ಅಲ್ಲಾಹು ಅನುಕಂಪವುಳ್ಳವನು ಮತ್ತು ಸೂಕ್ಷ್ಮಜ್ಞಾನಿಯಾಗಿದ್ದಾನೆ. info
التفاسير:

external-link copy
35 : 33

اِنَّ الْمُسْلِمِیْنَ وَالْمُسْلِمٰتِ وَالْمُؤْمِنِیْنَ وَالْمُؤْمِنٰتِ وَالْقٰنِتِیْنَ وَالْقٰنِتٰتِ وَالصّٰدِقِیْنَ وَالصّٰدِقٰتِ وَالصّٰبِرِیْنَ وَالصّٰبِرٰتِ وَالْخٰشِعِیْنَ وَالْخٰشِعٰتِ وَالْمُتَصَدِّقِیْنَ وَالْمُتَصَدِّقٰتِ وَالصَّآىِٕمِیْنَ وَالصّٰٓىِٕمٰتِ وَالْحٰفِظِیْنَ فُرُوْجَهُمْ وَالْحٰفِظٰتِ وَالذّٰكِرِیْنَ اللّٰهَ كَثِیْرًا وَّالذّٰكِرٰتِ ۙ— اَعَدَّ اللّٰهُ لَهُمْ مَّغْفِرَةً وَّاَجْرًا عَظِیْمًا ۟

ನಿಶ್ಚಯವಾಗಿಯೂ ಮುಸಲ್ಮಾನ ಪುರುಷರು ಮತ್ತು ಮಹಿಳೆಯರು, ಸತ್ಯವಿಶ್ವಾಸಿ ಪುರುಷರು ಮತ್ತು ಮಹಿಳೆಯರು, ದೇವಭಯವುಳ್ಳ ಪುರುಷರು ಮತ್ತು ಮಹಿಳೆಯರು, ಸತ್ಯವಂತ ಪುರುಷರು ಮತ್ತು ಮಹಿಳೆಯರು, ತಾಳ್ಮೆ ವಹಿಸುವ ಪುರುಷರು ಮತ್ತು ಮಹಿಳೆಯರು, ವಿನಮ್ರತೆ ತೋರುವ ಪುರುಷರು ಮತ್ತು ಮಹಿಳೆಯರು, ದಾನಧರ್ಮ ಮಾಡುವ ಪುರುಷರು ಮತ್ತು ಮಹಿಳೆಯರು, ಉಪವಾಸ ಆಚರಿಸುವ ಪುರುಷರು ಮತ್ತು ಮಹಿಳೆಯರು, ತಮ್ಮ ಗುಹ್ಯಭಾಗಗಳನ್ನು ಸಂರಕ್ಷಿಸುವ ಪುರುಷರು ಮತ್ತು ಮಹಿಳೆಯರು, ಅಲ್ಲಾಹನನ್ನು ಅತಿಯಾಗಿ ಸ್ಮರಿಸುವ ಪುರುಷರು ಮತ್ತು ಮಹಿಳೆಯರು—ಇವರಿಗೆ ಅಲ್ಲಾಹು ಕ್ಷಮೆ ಮತ್ತು ಮಹಾ ಪ್ರತಿಫಲವನ್ನು ಸಿದ್ಧಗೊಳಿಸಿದ್ದಾನೆ. info
التفاسير: