വിശുദ്ധ ഖുർആൻ പരിഭാഷ - കന്നഡ പരിഭാഷ - ഹംസ പുത്തൂർ

പേജ് നമ്പർ:close

external-link copy
12 : 4

وَلَكُمْ نِصْفُ مَا تَرَكَ اَزْوَاجُكُمْ اِنْ لَّمْ یَكُنْ لَّهُنَّ وَلَدٌ ۚ— فَاِنْ كَانَ لَهُنَّ وَلَدٌ فَلَكُمُ الرُّبُعُ مِمَّا تَرَكْنَ مِنْ بَعْدِ وَصِیَّةٍ یُّوْصِیْنَ بِهَاۤ اَوْ دَیْنٍ ؕ— وَلَهُنَّ الرُّبُعُ مِمَّا تَرَكْتُمْ اِنْ لَّمْ یَكُنْ لَّكُمْ وَلَدٌ ۚ— فَاِنْ كَانَ لَكُمْ وَلَدٌ فَلَهُنَّ الثُّمُنُ مِمَّا تَرَكْتُمْ مِّنْ بَعْدِ وَصِیَّةٍ تُوْصُوْنَ بِهَاۤ اَوْ دَیْنٍ ؕ— وَاِنْ كَانَ رَجُلٌ یُّوْرَثُ كَلٰلَةً اَوِ امْرَاَةٌ وَّلَهٗۤ اَخٌ اَوْ اُخْتٌ فَلِكُلِّ وَاحِدٍ مِّنْهُمَا السُّدُسُ ۚ— فَاِنْ كَانُوْۤا اَكْثَرَ مِنْ ذٰلِكَ فَهُمْ شُرَكَآءُ فِی الثُّلُثِ مِنْ بَعْدِ وَصِیَّةٍ یُّوْصٰی بِهَاۤ اَوْ دَیْنٍ ۙ— غَیْرَ مُضَآرٍّ ۚ— وَصِیَّةً مِّنَ اللّٰهِ ؕ— وَاللّٰهُ عَلِیْمٌ حَلِیْمٌ ۟ؕ

ನಿಮ್ಮ ಪತ್ನಿಯರಿಗೆ ಮಕ್ಕಳಿಲ್ಲದಿದ್ದರೆ, ಅವರು ಬಿಟ್ಟುಹೋದ ಆಸ್ತಿಯಲ್ಲಿ ಅರ್ಧ ಭಾಗವು ನಿಮಗೆ ದೊರೆಯುತ್ತದೆ. ಅವರಿಗೆ ಮಕ್ಕಳಿದ್ದರೆ ಅವರು ಬಿಟ್ಟು ಹೋದ ಆಸ್ತಿಯಲ್ಲಿ ನಾಲ್ಕನೇ ಒಂದು ಭಾಗವು ನಿಮಗೆ ದೊರೆಯುತ್ತದೆ. ಇದು ಅವರು ಮಾಡುವ ಉಯಿಲು ಮತ್ತು ಸಾಲವನ್ನು ತೀರಿಸಿದ ನಂತರ. ನಿಮಗೆ ಮಕ್ಕಳಿಲ್ಲದಿದ್ದರೆ, ನೀವು ಬಿಟ್ಟುಹೋದ ಆಸ್ತಿಯಲ್ಲಿ ನಾಲ್ಕನೇ ಒಂದು ಭಾಗವು ಅವರಿಗೆ (ಪತ್ನಿಯರಿಗೆ) ದೊರೆಯುತ್ತದೆ. ನಿಮಗೆ ಮಕ್ಕಳಿದ್ದರೆ, ನೀವು ಬಿಟ್ಟುಹೋದ ಆಸ್ತಿಯಲ್ಲಿ ಎಂಟನೇ ಒಂದು ಭಾಗವು ಅವರಿಗೆ ದೊರೆಯುತ್ತದೆ. ಇದು ನೀವು ಮಾಡುವ ಉಯಿಲು ಮತ್ತು ಸಾಲವನ್ನು ತೀರಿಸಿದ ನಂತರ. ವಾರಸು ಆಸ್ತಿಯನ್ನು ಬಿಟ್ಟು ಹೋಗುವ ಪುರುಷ ಅಥವಾ ಮಹಿಳೆಗೆ ತಂದೆ-ತಾಯಿ ಹಾಗೂ ಮಕ್ಕಳಿಲ್ಲದೆ, ಕೇವಲ ಸಹೋದರ ಅಥವಾ ಸಹೋದರಿಯಿದ್ದರೆ, ಆ ಇಬ್ಬರಲ್ಲಿ ಪ್ರತಿಯೊಬ್ಬರಿಗೂ ಆರನೇ ಒಂದು ಭಾಗವು ದೊರೆಯುತ್ತದೆ. ಅವರು ಇಬ್ಬರಿಗಿಂತ ಹೆಚ್ಚಿದ್ದರೆ, ಅವರು ಮೂರನೇ ಒಂದು ಭಾಗದಲ್ಲಿ ಸಮಾನ ಪಾಲುದಾರರಾಗುತ್ತಾರೆ. ಇದು ಹಾನಿಕರವಲ್ಲದ ಉಯಿಲು[1] ಮತ್ತು ಸಾಲವನ್ನು ತೀರಿಸಿದ ನಂತರ. ಅಲ್ಲಾಹು ಎಲ್ಲವನ್ನೂ ತಿಳಿದವನು ಮತ್ತು ಸಹಿಷ್ಣುತೆಯುಳ್ಳವನಾಗಿದ್ದಾನೆ. info

[1] ಒಟ್ಟು ಆಸ್ತಿಯ ಮೂರನೇ ಒಂದು ಭಾಗವನ್ನು ಮಾತ್ರ ಉಯಿಲು ಮಾಡಬಹುದು. ಅದಕ್ಕಿಂತ ಹೆಚ್ಚು ಉಯಿಲು ಮಾಡುವುದು ವಾರಸುದಾರರಿಗೆ ಮಾಡುವ ಅನ್ಯಾಯವಾಗಿದೆ. ಹಾನಿಕರ ಉಯಿಲು ಎಂದರೆ ವಾರಸುದಾರರಲ್ಲಿರುವ ದ್ವೇಷದಿಂದ ತನ್ನ ಆಸ್ತಿಯಲ್ಲಿ ಅವರಿಗೆ ಹಕ್ಕು ಸಿಗಬಾರದೆಂದು ತನ್ನ ಆಸ್ತಿಯನ್ನು ತನಗೆ ಇಷ್ಟವಾದ ಬೇರೊಬ್ಬ ವ್ಯಕ್ತಿಗೆ ಉಯಿಲು ಮಾಡುವುದು.

التفاسير:

external-link copy
13 : 4

تِلْكَ حُدُوْدُ اللّٰهِ ؕ— وَمَنْ یُّطِعِ اللّٰهَ وَرَسُوْلَهٗ یُدْخِلْهُ جَنّٰتٍ تَجْرِیْ مِنْ تَحْتِهَا الْاَنْهٰرُ خٰلِدِیْنَ فِیْهَا ؕ— وَذٰلِكَ الْفَوْزُ الْعَظِیْمُ ۟

ಇವು ಅಲ್ಲಾಹನ ಎಲ್ಲೆಗಳು. ಯಾರು ಅಲ್ಲಾಹನನ್ನು ಮತ್ತು ಅವನ ಸಂದೇಶವಾಹಕರನ್ನು ಅನುಸರಿಸುತ್ತಾನೋ—ಅವನನ್ನು ಅಲ್ಲಾಹು ತಳಭಾಗದಿಂದ ನದಿಗಳು ಹರಿಯುವ ಸ್ವರ್ಗೋದ್ಯಾನಗಳಿಗೆ ಪ್ರವೇಶ ಮಾಡಿಸುವನು. ಅವರು ಅದರಲ್ಲಿ ಶಾಶ್ವತವಾಗಿ ವಾಸಿಸುವರು. ಅದೇ ಮಹಾ ವಿಜಯ. info
التفاسير:

external-link copy
14 : 4

وَمَنْ یَّعْصِ اللّٰهَ وَرَسُوْلَهٗ وَیَتَعَدَّ حُدُوْدَهٗ یُدْخِلْهُ نَارًا خَالِدًا فِیْهَا ۪— وَلَهٗ عَذَابٌ مُّهِیْنٌ ۟۠

ಯಾರು ಅಲ್ಲಾಹನಿಗೆ ಮತ್ತು ಅವನ ಸಂದೇಶವಾಹಕರಿಗೆ ಅವಿಧೇಯತೆ ತೋರುತ್ತಾನೋ ಮತ್ತು ಅವನ ಎಲ್ಲೆಗಳನ್ನು ಮೀರುತ್ತಾನೋ—ಅವನನ್ನು ಅಲ್ಲಾಹು ನರಕಾಗ್ನಿಗೆ ಪ್ರವೇಶ ಮಾಡಿಸುವನು. ಅವನು ಅದರಲ್ಲಿ ಶಾಶ್ವತವಾಗಿ ವಾಸಿಸುವನು. ಅವನಿಗೆ ಅಪಮಾನಕರ ಶಿಕ್ಷೆಯಿದೆ. info
التفاسير: