Vertaling van de betekenissen Edele Qur'an - De Kannada vertaling - Hamza Batoer

Pagina nummer:close

external-link copy
16 : 30

وَاَمَّا الَّذِیْنَ كَفَرُوْا وَكَذَّبُوْا بِاٰیٰتِنَا وَلِقَآئِ الْاٰخِرَةِ فَاُولٰٓىِٕكَ فِی الْعَذَابِ مُحْضَرُوْنَ ۟

ಆದರೆ ಸತ್ಯನಿಷೇಧಿಗಳು ಮತ್ತು ನಮ್ಮ ವಚನಗಳನ್ನು ಹಾಗೂ ಪರಲೋಕದ ಭೇಟಿಯನ್ನು ನಿಷೇಧಿಸಿದವರು ಯಾರೋ ಅವರನ್ನು ಶಿಕ್ಷೆಗಾಗಿ ಹಾಜರುಪಡಿಸಲಾಗುವುದು. info
التفاسير:

external-link copy
17 : 30

فَسُبْحٰنَ اللّٰهِ حِیْنَ تُمْسُوْنَ وَحِیْنَ تُصْبِحُوْنَ ۟

ಸಂಜೆಯಾಗುವಾಗ ಮತ್ತು ಮುಂಜಾನೆಯಾಗುವಾಗ ಅಲ್ಲಾಹನ ಪರಿಶುದ್ಧಿಯನ್ನು ಕೊಂಡಾಡಿರಿ. info
التفاسير:

external-link copy
18 : 30

وَلَهُ الْحَمْدُ فِی السَّمٰوٰتِ وَالْاَرْضِ وَعَشِیًّا وَّحِیْنَ تُظْهِرُوْنَ ۟

ಭೂಮ್ಯಾಕಾಶಗಳಲ್ಲಿ ಸರ್ವಸ್ತುತಿಗಳು ಅವನಿಗೆ ಮಾತ್ರ ಮೀಸಲು. ರಾತ್ರಿ ಹಾಗೂ ಮಧ್ಯಾಹ್ನದಲ್ಲೂ ಅವನ್ನು ಕೊಂಡಾಡಿರಿ. info
التفاسير:

external-link copy
19 : 30

یُخْرِجُ الْحَیَّ مِنَ الْمَیِّتِ وَیُخْرِجُ الْمَیِّتَ مِنَ الْحَیِّ وَیُحْیِ الْاَرْضَ بَعْدَ مَوْتِهَا ؕ— وَكَذٰلِكَ تُخْرَجُوْنَ ۟۠

ಅವನು ನಿರ್ಜೀವಿಯಿಂದ ಜೀವಿಯನ್ನು ಹೊರತರುತ್ತಾನೆ ಮತ್ತು ಜೀವಿಯಿಂದ ನಿರ್ಜೀವಿಯನ್ನು ಹೊರತರುತ್ತಾನೆ. ಭೂಮಿಯು ನಿರ್ಜೀವವಾದ ಬಳಿಕ ಅವನು ಅದಕ್ಕೆ ಜೀವವನ್ನು ನೀಡುತ್ತಾನೆ. ಇದೇ ರೀತಿ ನಿಮ್ಮನ್ನು ಕೂಡ ಹೊರತರಲಾಗುವುದು. info
التفاسير:

external-link copy
20 : 30

وَمِنْ اٰیٰتِهٖۤ اَنْ خَلَقَكُمْ مِّنْ تُرَابٍ ثُمَّ اِذَاۤ اَنْتُمْ بَشَرٌ تَنْتَشِرُوْنَ ۟

ಅವನು ನಿಮ್ಮನ್ನು ಮಣ್ಣಿನಿಂದ ಸೃಷ್ಟಿಸಿದ್ದು ಅವನ ದೃಷ್ಟಾಂತಗಳಲ್ಲಿ ಒಂದಾಗಿದೆ. ನಂತರ ನೀವು (ಜಗತ್ತಿನಾದ್ಯಂತ) ಹಬ್ಬಿಕೊಂಡ ಮಾನುಕುಲವಾಗಿ ಮಾರ್ಪಟ್ಟಿರಿ. info
التفاسير:

external-link copy
21 : 30

وَمِنْ اٰیٰتِهٖۤ اَنْ خَلَقَ لَكُمْ مِّنْ اَنْفُسِكُمْ اَزْوَاجًا لِّتَسْكُنُوْۤا اِلَیْهَا وَجَعَلَ بَیْنَكُمْ مَّوَدَّةً وَّرَحْمَةً ؕ— اِنَّ فِیْ ذٰلِكَ لَاٰیٰتٍ لِّقَوْمٍ یَّتَفَكَّرُوْنَ ۟

ನಿಮಗೆ ನಿಮ್ಮಿಂದಲೇ ಪತ್ನಿಯರನ್ನು ಸೃಷ್ಟಿಸಿದ್ದು ಅವನ ದೃಷ್ಟಾಂತಗಳಲ್ಲಿ ಒಂದಾಗಿದೆ. ನೀವು ಅವಳಲ್ಲಿ ನೆಮ್ಮದಿಯನ್ನು ಪಡೆಯುವುದಕ್ಕಾಗಿ. ಅವನು ನಿಮ್ಮ ನಡುವೆ ಪ್ರೀತಿ ಮತ್ತು ಅನುಕಂಪವನ್ನು ಇಟ್ಟನು. ನಿಶ್ಚಯವಾಗಿಯೂ ಆಲೋಚಿಸುವ ಜನರಿಗೆ ಅದರಲ್ಲಿ ದೃಷ್ಟಾಂತಗಳಿವೆ. info
التفاسير:

external-link copy
22 : 30

وَمِنْ اٰیٰتِهٖ خَلْقُ السَّمٰوٰتِ وَالْاَرْضِ وَاخْتِلَافُ اَلْسِنَتِكُمْ وَاَلْوَانِكُمْ ؕ— اِنَّ فِیْ ذٰلِكَ لَاٰیٰتٍ لِّلْعٰلِمِیْنَ ۟

ಭೂಮ್ಯಾಕಾಶಗಳನ್ನು ಸೃಷ್ಟಿಸಿದ್ದು ಮತ್ತು ನಿಮ್ಮ ಭಾಷೆಗಳಲ್ಲಿ ಹಾಗೂ ವರ್ಣಗಳಲ್ಲಿ ವೈವಿಧ್ಯತೆಯನ್ನು ಮಾಡಿದ್ದು ಅವನ ದೃಷ್ಟಾಂತಗಳಲ್ಲಿ ಒಂದಾಗಿದೆ. ನಿಶ್ಚಯವಾಗಿಯೂ ಜ್ಞಾನವಂತರಿಗೆ ಅದರಲ್ಲಿ ದೃಷ್ಟಾಂತಗಳಿವೆ. info
التفاسير:

external-link copy
23 : 30

وَمِنْ اٰیٰتِهٖ مَنَامُكُمْ بِالَّیْلِ وَالنَّهَارِ وَابْتِغَآؤُكُمْ مِّنْ فَضْلِهٖ ؕ— اِنَّ فِیْ ذٰلِكَ لَاٰیٰتٍ لِّقَوْمٍ یَّسْمَعُوْنَ ۟

ನೀವು ರಾತ್ರಿಯಲ್ಲಿ ಮತ್ತು ಹಗಲಲ್ಲಿ ನಿದ್ದೆ ಮಾಡುವುದು ಹಾಗೂ ಅಲ್ಲಾಹನ ಔದಾರ್ಯದಿಂದ ನೀವು ಉಪಜೀವನವನ್ನು ಹುಡುಕುವುದು ಅವನ ದೃಷ್ಟಾಂತಗಳಲ್ಲಿ ಒಂದಾಗಿದೆ. ನಿಶ್ಚಯವಾಗಿಯೂ ಕಿವಿಗೊಡುವ ಜನರಿಗೆ ಅದರಲ್ಲಿ ದೃಷ್ಟಾಂತಗಳಿವೆ. info
التفاسير:

external-link copy
24 : 30

وَمِنْ اٰیٰتِهٖ یُرِیْكُمُ الْبَرْقَ خَوْفًا وَّطَمَعًا وَّیُنَزِّلُ مِنَ السَّمَآءِ مَآءً فَیُحْیٖ بِهِ الْاَرْضَ بَعْدَ مَوْتِهَا ؕ— اِنَّ فِیْ ذٰلِكَ لَاٰیٰتٍ لِّقَوْمٍ یَّعْقِلُوْنَ ۟

ನಿಮ್ಮಲ್ಲಿ ಭಯ ಮತ್ತು ನಿರೀಕ್ಷೆಯನ್ನು ಹುಟ್ಟಿಸುತ್ತಾ ಮಿಂಚನ್ನು ತೋರಿಸುವುದು ಹಾಗೂ ಆಕಾಶದಿಂದ ಮಳೆಯನ್ನು ಸುರಿಸಿ ತನ್ಮೂಲಕ ನಿರ್ಜೀವ ಭೂಮಿಗೆ ಜೀವವನ್ನು ನೀಡುವುದು ಅವನ ದೃಷ್ಟಾಂತಗಳಲ್ಲಿ ಒಂದಾಗಿದೆ. ನಿಶ್ಚಯವಾಗಿಯೂ ಅರ್ಥಮಾಡಿಕೊಳ್ಳುವ ಜನರಿಗೆ ಅದರಲ್ಲಿ ದೃಷ್ಟಾಂತಗಳಿವೆ. info
التفاسير: