Vertaling van de betekenissen Edele Qur'an - De Kannada vertaling - Hamza Batoer

external-link copy
72 : 5

لَقَدْ كَفَرَ الَّذِیْنَ قَالُوْۤا اِنَّ اللّٰهَ هُوَ الْمَسِیْحُ ابْنُ مَرْیَمَ ؕ— وَقَالَ الْمَسِیْحُ یٰبَنِیْۤ اِسْرَآءِیْلَ اعْبُدُوا اللّٰهَ رَبِّیْ وَرَبَّكُمْ ؕ— اِنَّهٗ مَنْ یُّشْرِكْ بِاللّٰهِ فَقَدْ حَرَّمَ اللّٰهُ عَلَیْهِ الْجَنَّةَ وَمَاْوٰىهُ النَّارُ ؕ— وَمَا لِلظّٰلِمِیْنَ مِنْ اَنْصَارٍ ۟

“ಮರ್ಯಮರ ಮಗ ಮಸೀಹನೇ ಅಲ್ಲಾಹು” ಎಂದು ಹೇಳಿದವರು ಖಂಡಿತವಾಗಿಯೂ ಸತ್ಯವನ್ನು ನಿಷೇಧಿಸಿದ್ದಾರೆ. ಆದರೆ ಮಸೀಹರು ಹೇಳಿದ್ದೇನೆಂದರೆ: “ಓ ಇಸ್ರಾಯೇಲ್ ಮಕ್ಕಳೇ! ನೀವು ನನ್ನ ಮತ್ತು ನಿಮ್ಮ ಪರಿಪಾಲಕನಾದ ಅಲ್ಲಾಹನನ್ನು ಆರಾಧಿಸಿರಿ.” ಯಾರು ಅಲ್ಲಾಹನೊಂದಿಗೆ ಸಹಭಾಗಿತ್ವ (ಶಿರ್ಕ್) ಮಾಡುತ್ತಾನೋ, ಅವನಿಗೆ ಅಲ್ಲಾಹು ಸ್ವರ್ಗವನ್ನು ಖಂಡಿತ ನಿಷೇಧಿಸಿದ್ದಾನೆ. ಅವನ ವಾಸಸ್ಥಳ ನರಕಾಗ್ನಿಯಾಗಿದೆ.[1] ಅಕ್ರಮಿಗಳಿಗೆ ಯಾವುದೇ ಸಹಾಯಕರಿಲ್ಲ. info

[1] ಅಲ್ಲಾಹನೊಂದಿಗೆ ಸಹಭಾಗಿತ್ವ (ಶಿರ್ಕ್) ಮಾಡುವುದು ಎಂದರೆ ಅಲ್ಲಾಹನ ಪ್ರಭುತ್ವ, ದೈವತ್ವ ಮತ್ತು ಹೆಸರು ಹಾಗೂ ಗುಣಲಕ್ಷಣಗಳಲ್ಲಿ ಇತರರನ್ನು ಸಹಭಾಗಿಯಾಗಿ ಮಾಡುವುದು. ಈಸಾರನ್ನು ಅಲ್ಲಾಹನ ಮಗ ಅಥವಾ ಅಲ್ಲಾಹು ಎಂದು ಕಲ್ಪಿಸುವುದು ಅಲ್ಲಾಹನೊಂದಿಗೆ ಮಾಡುವ ಸಹಭಾಗಿತ್ವವಾಗಿದೆ. ಅಲ್ಲಾಹನೊಂದಿಗೆ ಸಹಭಾಗಿತ್ವ ಮಾಡುವವರಿಗೆ ಸ್ವರ್ಗವನ್ನು ನಿಷೇಧಿಸಲಾಗಿದೆ. ಅವರು ಶಾಶ್ವತ ನರಕಶಿಕ್ಷೆಗೆ ಗುರಿಯಾಗುತ್ತಾರೆ.

التفاسير: