Vertaling van de betekenissen Edele Qur'an - De Kannada vertaling - Hamza Batoer

external-link copy
53 : 7

هَلْ یَنْظُرُوْنَ اِلَّا تَاْوِیْلَهٗ ؕ— یَوْمَ یَاْتِیْ تَاْوِیْلُهٗ یَقُوْلُ الَّذِیْنَ نَسُوْهُ مِنْ قَبْلُ قَدْ جَآءَتْ رُسُلُ رَبِّنَا بِالْحَقِّ ۚ— فَهَلْ لَّنَا مِنْ شُفَعَآءَ فَیَشْفَعُوْا لَنَاۤ اَوْ نُرَدُّ فَنَعْمَلَ غَیْرَ الَّذِیْ كُنَّا نَعْمَلُ ؕ— قَدْ خَسِرُوْۤا اَنْفُسَهُمْ وَضَلَّ عَنْهُمْ مَّا كَانُوْا یَفْتَرُوْنَ ۟۠

ಅವರು ಅದರ ಫಲಿತಾಂಶವನ್ನು ಕಾಯುತ್ತಿದ್ದಾರೆಯೇ?[1] ಅದರ ಫಲಿತಾಂಶವು ಬರುವ ದಿನದಂದು ಅದಕ್ಕೆ ಮುಂಚೆ ಅದನ್ನು ಮರೆತುಬಿಟ್ಟವರು ಹೇಳುವರು: “ನಿಶ್ಚಯವಾಗಿಯೂ ನಮ್ಮ ಪರಿಪಾಲಕನ (ಅಲ್ಲಾಹನ) ಸಂದೇಶವಾಹಕರುಗಳು ಸತ್ಯ ಸಹಿತ ಬಂದಿದ್ದರು. ನಮಗೆ ಶಿಫಾರಸು ಮಾಡುವ ಶಿಫಾರಸುಗಾರರು ಯಾರಾದರೂ ಇದ್ದಾರೆಯೇ? ಅಥವಾ ನಾವು ಈಗಾಗಲೇ ಮಾಡಿದ ಕರ್ಮಗಳಲ್ಲದ ಬೇರೆ ಕರ್ಮಗಳನ್ನು ಮಾಡಲು ನಮ್ಮನ್ನು ಪುನಃ ಇಹಲೋಕಕ್ಕೆ ಕಳುಹಿಸಲಾಗುವುದೇ?” ಅವರು ಸ್ವಯಂ ನಷ್ಟಹೊಂದಿದವರು. ಅವರು ಕಲ್ಪಿಸಿ ಹೇಳುತ್ತಿದ್ದ ವಿಷಯಗಳೆಲ್ಲವೂ ಅವರಿಂದ ಕಣ್ಮರೆಯಾಗಿ ಬಿಡುವುವು. info

[1] ಅಂದರೆ ಪವಿತ್ರ ಕುರ್‌ಆನಿನಲ್ಲಿ ನೀಡಲಾದ ಎಚ್ಚರಿಕೆಗಳು ಸತ್ಯವಾಗಿ ಪರಿಣಮಿಸುವುದನ್ನು ಅವರು ಕಾಯುತ್ತಿದ್ದಾರೆಯೇ?

التفاسير: