ߞߎ߬ߙߣߊ߬ ߞߟߊߒߞߋ ߞߘߐ ߟߎ߬ ߘߟߊߡߌߘߊ - ߞߌߣߊߘߌߞߊ߲ ߘߟߊߡߌߘߊ - ߤ߭ߊߡߑߗ߭ߊ߫ ߓߎߕߎߙ ߓߟߏ߫

ߞߐߜߍ ߝߙߍߕߍ:close

external-link copy
54 : 10

وَلَوْ اَنَّ لِكُلِّ نَفْسٍ ظَلَمَتْ مَا فِی الْاَرْضِ لَافْتَدَتْ بِهٖ ؕ— وَاَسَرُّوا النَّدَامَةَ لَمَّا رَاَوُا الْعَذَابَ ۚ— وَقُضِیَ بَیْنَهُمْ بِالْقِسْطِ وَهُمْ لَا یُظْلَمُوْنَ ۟

ಅಕ್ರಮವೆಸಗಿದ ಪ್ರತಿಯೊಬ್ಬ ವ್ಯಕ್ತಿಯ ಬಳಿ ಭೂಮಿಯಲ್ಲಿರುವುದೆಲ್ಲವೂ ಇದ್ದರೂ ಅವನು ಅವೆಲ್ಲವನ್ನೂ ಪರಿಹಾರವಾಗಿ ನೀಡಿಯಾದರೂ ಶಿಕ್ಷೆಯಿಂದ ಪಾರಾಗಲು ಬಯಸುತ್ತಿದ್ದನು. ಶಿಕ್ಷೆಯನ್ನು ಕಾಣುವಾಗ ಅವರು ತಮ್ಮ ವಿಷಾದವನ್ನು ಅಡಗಿಸುವರು. ಅವರ ನಡುವೆ ನ್ಯಾಯಯುತವಾಗಿ ತೀರ್ಪು ನೀಡಲಾಗುವುದು. ಅವರಿಗೆ ಸ್ವಲ್ಪವೂ ಅನ್ಯಾಯವಾಗುವುದಿಲ್ಲ. info
التفاسير:

external-link copy
55 : 10

اَلَاۤ اِنَّ لِلّٰهِ مَا فِی السَّمٰوٰتِ وَالْاَرْضِ ؕ— اَلَاۤ اِنَّ وَعْدَ اللّٰهِ حَقٌّ وَّلٰكِنَّ اَكْثَرَهُمْ لَا یَعْلَمُوْنَ ۟

ತಿಳಿಯಿರಿ! ನಿಶ್ಚಯವಾಗಿಯೂ ಭೂಮ್ಯಾಕಾಶಗಳಲ್ಲಿರುವುದೆಲ್ಲವೂ ಅಲ್ಲಾಹನಿಗೆ ಸೇರಿದ್ದು. ತಿಳಿಯಿರಿ! ನಿಶ್ಚಯವಾಗಿಯೂ ಅಲ್ಲಾಹನ ವಾಗ್ದಾನವು ಸತ್ಯವಾಗಿದೆ. ಆದರೆ ಅವರಲ್ಲಿ ಹೆಚ್ಚಿನವರು ತಿಳಿಯುವುದಿಲ್ಲ. info
التفاسير:

external-link copy
56 : 10

هُوَ یُحْیٖ وَیُمِیْتُ وَاِلَیْهِ تُرْجَعُوْنَ ۟

ಅವನು ಜೀವ ಮತ್ತು ಮರಣವನ್ನು ನೀಡುತ್ತಾನೆ. ನಿಮ್ಮನ್ನು ಅವನ ಬಳಿಗೇ ಮರಳಿಸಲಾಗುವುದು. info
التفاسير:

external-link copy
57 : 10

یٰۤاَیُّهَا النَّاسُ قَدْ جَآءَتْكُمْ مَّوْعِظَةٌ مِّنْ رَّبِّكُمْ وَشِفَآءٌ لِّمَا فِی الصُّدُوْرِ ۙ۬— وَهُدًی وَّرَحْمَةٌ لِّلْمُؤْمِنِیْنَ ۟

ಓ ಮನುಷ್ಯರೇ! ನಿಮಗೆ ನಿಮ್ಮ ಪರಿಪಾಲಕನಿಂದ (ಅಲ್ಲಾಹನಿಂದ) ಒಂದು ಉಪದೇಶವು ಬಂದಿದೆ. ಅದು ಹೃದಯಗಳಲ್ಲಿರುವ ರೋಗಕ್ಕೆ ಉಪಶಮನವಾಗಿದೆ ಮತ್ತು ಸತ್ಯವಿಶ್ವಾಸಿಗಳಿಗೆ ಸನ್ಮಾರ್ಗ ಹಾಗೂ ದಯೆಯಾಗಿದೆ. info
التفاسير:

external-link copy
58 : 10

قُلْ بِفَضْلِ اللّٰهِ وَبِرَحْمَتِهٖ فَبِذٰلِكَ فَلْیَفْرَحُوْا ؕ— هُوَ خَیْرٌ مِّمَّا یَجْمَعُوْنَ ۟

ಹೇಳಿರಿ: “ಅಲ್ಲಾಹನ ಈ ಔದಾರ್ಯ ಮತ್ತು ದಯೆಯಿಂದ ಅವರು (ಸತ್ಯವಿಶ್ವಾಸಿಗಳು) ಸಂತೋಷಪಡಲಿ. ಅವರು ಶೇಖರಿಸುವ ಎಲ್ಲಾ ವಸ್ತುಗಳಿಗಿಂತಲೂ ಇದು ಶ್ರೇಷ್ಠವಾಗಿದೆ.” info
التفاسير:

external-link copy
59 : 10

قُلْ اَرَءَیْتُمْ مَّاۤ اَنْزَلَ اللّٰهُ لَكُمْ مِّنْ رِّزْقٍ فَجَعَلْتُمْ مِّنْهُ حَرَامًا وَّحَلٰلًا ؕ— قُلْ آٰللّٰهُ اَذِنَ لَكُمْ اَمْ عَلَی اللّٰهِ تَفْتَرُوْنَ ۟

ಹೇಳಿರಿ: “ನೀವು ಆಲೋಚಿಸಿ ನೋಡಿದ್ದೀರಾ! ಅಲ್ಲಾಹು ನಿಮಗೆ ಏನೆಲ್ಲಾ ಆಹಾರಗಳನ್ನು ಒದಗಿಸಿದ್ದಾನೋ ಅವುಗಳಲ್ಲಿ ಕೆಲವನ್ನು ನೀವು ನಿಷೇಧಿಸಿದ್ದೀರಿ ಮತ್ತು ಕೆಲವನ್ನು ಅನುಮತಿಸಿದ್ದೀರಿ.” ಕೇಳಿರಿ: “ಹೀಗೆ ಮಾಡಲು ಅಲ್ಲಾಹು ನಿಮಗೆ ಆಜ್ಞಾಪಿಸಿದನೇ? ಅಥವಾ ನೀವು ಅಲ್ಲಾಹನ ಮೇಲೆ ಸುಳ್ಳು ಆರೋಪಿಸುತ್ತಿದ್ದೀರಾ?” info
التفاسير:

external-link copy
60 : 10

وَمَا ظَنُّ الَّذِیْنَ یَفْتَرُوْنَ عَلَی اللّٰهِ الْكَذِبَ یَوْمَ الْقِیٰمَةِ ؕ— اِنَّ اللّٰهَ لَذُوْ فَضْلٍ عَلَی النَّاسِ وَلٰكِنَّ اَكْثَرَهُمْ لَا یَشْكُرُوْنَ ۟۠

ಪುನರುತ್ಥಾನದ ದಿನದಂದು ಅಲ್ಲಾಹನ ಮೇಲೆ ಸುಳ್ಳು ಆರೋಪಿಸುವವರ ಭಾವನೆ ಏನಿರಬಹುದು? ನಿಶ್ಚಯವಾಗಿಯೂ ಅಲ್ಲಾಹನಿಗೆ ಜನರ ಮೇಲೆ ಮಹಾ ಔದಾರ್ಯವಿದೆ. ಆದರೆ ಅವರಲ್ಲಿ ಹೆಚ್ಚಿನವರೂ ಕೃತಜ್ಞರಾಗುವುದಿಲ್ಲ. info
التفاسير:

external-link copy
61 : 10

وَمَا تَكُوْنُ فِیْ شَاْنٍ وَّمَا تَتْلُوْا مِنْهُ مِنْ قُرْاٰنٍ وَّلَا تَعْمَلُوْنَ مِنْ عَمَلٍ اِلَّا كُنَّا عَلَیْكُمْ شُهُوْدًا اِذْ تُفِیْضُوْنَ فِیْهِ ؕ— وَمَا یَعْزُبُ عَنْ رَّبِّكَ مِنْ مِّثْقَالِ ذَرَّةٍ فِی الْاَرْضِ وَلَا فِی السَّمَآءِ وَلَاۤ اَصْغَرَ مِنْ ذٰلِكَ وَلَاۤ اَكْبَرَ اِلَّا فِیْ كِتٰبٍ مُّبِیْنٍ ۟

ನೀವು ಯಾವುದೇ ಕೆಲಸದಲ್ಲಿ ನಿರತರಾಗಿದ್ದರೂ, ನೀವು ಕುರ್‌ಆನಿನ ಯಾವುದೇ ಭಾಗವನ್ನು ಪಠಿಸುತ್ತಿದ್ದರೂ, ಮತ್ತು ನೀವು (ಜನರು) ಯಾವುದೇ ಕೆಲಸವನ್ನು ಮಾಡುತ್ತಿದ್ದರೂ, ನೀವು ಅದರಲ್ಲಿ ಮುಳುಗಿರುವಾಗ ನಾವು ನಿಮ್ಮ ಮೇಲೆ ಸಂಪೂರ್ಣ ಸಾಕ್ಷಿಯಾಗಿರುತ್ತೇವೆ. ಭೂಮಿಯಲ್ಲಿ ಅಥವಾ ಆಕಾಶದಲ್ಲಿರುವ ಒಂದು ಅಣುವಿನ ತೂಕದಷ್ಟಿರುವ—ಅಥವಾ ಅದಕ್ಕಿಂತ ಚಿಕ್ಕ ಅಥವಾ ಅದಕ್ಕಿಂತ ದೊಡ್ಡ—ಯಾವುದೇ ಒಂದು ವಸ್ತುವೂ ನಿಮ್ಮ ಪರಿಪಾಲಕನ (ಅಲ್ಲಾಹನ) ದೃಷ್ಟಿಯಿಂದ ಮರೆಯಾಗಿಲ್ಲ. ಎಲ್ಲವನ್ನೂ ಒಂದು ಸ್ಪಷ್ಟ ದಾಖಲೆಯಲ್ಲಿ ನಮೂದಿಸಿಡಲಾಗಿದೆ. info
التفاسير: