ߞߎ߬ߙߣߊ߬ ߞߟߊߒߞߋ ߞߘߐ ߟߎ߬ ߘߟߊߡߌߘߊ - ߞߌߣߊߘߌߞߊ߲ ߘߟߊߡߌߘߊ - ߤ߭ߊߡߑߗ߭ߊ߫ ߓߎߕߎߙ ߓߟߏ߫

ߞߐߜߍ ߝߙߍߕߍ:close

external-link copy
70 : 12

فَلَمَّا جَهَّزَهُمْ بِجَهَازِهِمْ جَعَلَ السِّقَایَةَ فِیْ رَحْلِ اَخِیْهِ ثُمَّ اَذَّنَ مُؤَذِّنٌ اَیَّتُهَا الْعِیْرُ اِنَّكُمْ لَسٰرِقُوْنَ ۟

ನಂತರ ಅವರಿಗೆ ಬೇಕಾದ ಆಹಾರ ಸಾಮಗ್ರಿಗಳನ್ನು ಸಜ್ಜುಗೊಳಿಸಿದಾಗ ಯೂಸುಫ್ ತಮ್ಮನ ಹಸುಬೆಯಲ್ಲಿ ಪಾನಪಾತ್ರೆಯನ್ನು (ಧಾನ್ಯಗಳನ್ನು ಅಳೆಯುವ ಪಾತ್ರೆ) ಹಾಕಿದರು. ನಂತರ ಒಬ್ಬ ಉದ್ಘೋಷಕ ಕೂಗಿ ಹೇಳಿದನು: “ಓ ದಾರಿಗ ತಂಡದವರೇ! ನಿಜಕ್ಕೂ ನೀವು ಕಳ್ಳರೇ ಆಗಿದ್ದೀರಿ!” info
التفاسير:

external-link copy
71 : 12

قَالُوْا وَاَقْبَلُوْا عَلَیْهِمْ مَّاذَا تَفْقِدُوْنَ ۟

ಅವರು ಆತನ ಕಡೆಗೆ ತಿರುಗಿ ಕೇಳಿದರು: “ನಿಮ್ಮಲ್ಲಿ ಏನು ಕಾಣೆಯಾಗಿದೆ?” info
التفاسير:

external-link copy
72 : 12

قَالُوْا نَفْقِدُ صُوَاعَ الْمَلِكِ وَلِمَنْ جَآءَ بِهٖ حِمْلُ بَعِیْرٍ وَّاَنَا بِهٖ زَعِیْمٌ ۟

ಅವರು ಹೇಳಿದರು: “ಅರಸನ ಪಾನಪಾತ್ರೆ ಕಾಣೆಯಾಗಿದೆ. ಯಾರು ಅದನ್ನು ತಂದು ಕೊಡುತ್ತಾರೋ ಅವನಿಗೆ ಒಂದು ಒಂಟೆ ಹೊರುವಷ್ಟು ಧಾನ್ಯವನ್ನು ನೀಡಲಾಗುವುದು. ಅದರ ಹೊಣೆಯನ್ನು ನಾನು ವಹಿಸಿಕೊಂಡಿದ್ದೇನೆ.” info
التفاسير:

external-link copy
73 : 12

قَالُوْا تَاللّٰهِ لَقَدْ عَلِمْتُمْ مَّا جِئْنَا لِنُفْسِدَ فِی الْاَرْضِ وَمَا كُنَّا سٰرِقِیْنَ ۟

ಅವರು ಹೇಳಿದರು: “ಅಲ್ಲಾಹನಾಣೆ! ನಾವು ರಾಜ್ಯದಲ್ಲಿ ಕಿಡಿಗೇಡಿತನ ಮಾಡಲು ಬಂದವರಲ್ಲ ಮತ್ತು ನಾವು ಕಳ್ಳರೂ ಅಲ್ಲ ಎಂದು ನಿಮಗೆ ಚೆನ್ನಾಗಿ ತಿಳಿದಿದೆ.” info
التفاسير:

external-link copy
74 : 12

قَالُوْا فَمَا جَزَآؤُهٗۤ اِنْ كُنْتُمْ كٰذِبِیْنَ ۟

ಅವರು ಕೇಳಿದರು: “ನೀವು ಹೇಳುವ ಮಾತು ಸುಳ್ಳಾಗಿ (ನೀವೇ ಕಳ್ಳರಾಗಿದ್ದರೆ) ಅದಕ್ಕೆ ನೀಡಲಾಗುವ ಶಿಕ್ಷೆಯೇನು?” info
التفاسير:

external-link copy
75 : 12

قَالُوْا جَزَآؤُهٗ مَنْ وُّجِدَ فِیْ رَحْلِهٖ فَهُوَ جَزَآؤُهٗ ؕ— كَذٰلِكَ نَجْزِی الظّٰلِمِیْنَ ۟

ಅವರು ಉತ್ತರಿಸಿದರು: “ಅದಕ್ಕಿರುವ ಶಿಕ್ಷೆಯೇನೆಂದರೆ ಯಾರ ಹಸುಬೆಯಲ್ಲಿ ಅದು ಪತ್ತೆಯಾಗುವುದೋ ಅವನನ್ನೇ ಅದಕ್ಕೆ ಬದಲಿಯಾಗಿ ಹಿಡಿಯಬೇಕು. ಅಕ್ರಮಿಗಳಿಗೆ ನಾವು ಹೀಗೆಯೇ ಶಿಕ್ಷೆ ನೀಡುತ್ತೇವೆ.”[1] info

[1] ಅಂದರೆ ಕಳ್ಳನನ್ನು ಅವನು ಯಾರಿಂದ ಕಳ್ಳತನ ಮಾಡಿದನೋ ಅವನ ಸುಪರ್ದಿಗೆ ಬಿಡಲಾಗುತ್ತದೆ. ಇದು ಯಾಕೂಬ್ (ಅವರ ಮೇಲೆ ಶಾಂತಿಯಿರಲಿ) ರವರ ಶರಿಯತ್‌ನಲ್ಲಿರುವ (ಧರ್ಮಸಂಹಿತೆಯಲ್ಲಿರುವ) ಶಿಕ್ಷೆಯಾಗಿದೆ.

التفاسير:

external-link copy
76 : 12

فَبَدَاَ بِاَوْعِیَتِهِمْ قَبْلَ وِعَآءِ اَخِیْهِ ثُمَّ اسْتَخْرَجَهَا مِنْ وِّعَآءِ اَخِیْهِ ؕ— كَذٰلِكَ كِدْنَا لِیُوْسُفَ ؕ— مَا كَانَ لِیَاْخُذَ اَخَاهُ فِیْ دِیْنِ الْمَلِكِ اِلَّاۤ اَنْ یَّشَآءَ اللّٰهُ ؕ— نَرْفَعُ دَرَجٰتٍ مَّنْ نَّشَآءُ ؕ— وَفَوْقَ كُلِّ ذِیْ عِلْمٍ عَلِیْمٌ ۟

ತಮ್ಮನ ಚೀಲವನ್ನು ತಪಾಸಣೆ ಮಾಡುವುದಕ್ಕೆ ಮುನ್ನ ಯೂಸುಫ್ ಅವರ (ಸಹೋದರರ) ಚೀಲಗಳನ್ನು ತಪಾಸಣೆ ಮಾಡಲು ಆರಂಭಿಸಿದರು. ನಂತರ ಅದನ್ನು ತಮ್ಮನ ಚೀಲದಿಂದ ಹೊರತೆಗೆದರು. ನಾವು ಯೂಸುಫರಿಗಾಗಿ ಈ ರೀತಿಯಲ್ಲಿ ತಂತ್ರಗಾರಿಕೆ ಮಾಡಿದೆವು. ಏಕೆಂದರೆ, ಅರಸನ ಕಾನೂನಿನ ಪ್ರಕಾರ ಅವರಿಗೆ ತಮ್ಮನನ್ನು ವಶಕ್ಕೆ ಪಡೆಯಲಾಗುತ್ತಿರಲಿಲ್ಲ[1]—ಅಲ್ಲಾಹು ಇಚ್ಛಿಸಿದರೆ ಹೊರತು. ನಾವು ಇಚ್ಛಿಸುವವರ ಸ್ಥಾನಮಾನಗಳನ್ನು ನಾವು ಎತ್ತರಕ್ಕೇರಿಸುತ್ತೇವೆ. ಪ್ರತಿಯೊಬ್ಬ ಜ್ಞಾನಿಯ ಮೇಲೆ ಇನ್ನೊಬ್ಬ ಮಹಾಜ್ಞಾನಿಯಿದ್ದಾನೆ. info

[1] ಅಂದರೆ ಈಜಿಪ್ಟ್ ದೇಶದ ಕಾನೂನು ಪ್ರಕಾರ ಈ ರೀತಿಯಲ್ಲಿ ತಮ್ಮನನ್ನು ವಶಕ್ಕೆ ಪಡೆಯಲು ಸಾಧ್ಯವಾಗುತ್ತಿರಲಿಲ್ಲ. ಆದ್ದರಿಂದ ಯೂಸುಫ್ (ಅವರ ಮೇಲ ಶಾಂತಿಯಿರಲಿ) ಅವರಲ್ಲಿ ಅವರ ಕಾನೂನಿನ ಬಗ್ಗೆ ಕೇಳಿ ಅದರಂತೆಯೇ ತೀರ್ಪು ನೀಡಿದರು.

التفاسير:

external-link copy
77 : 12

قَالُوْۤا اِنْ یَّسْرِقْ فَقَدْ سَرَقَ اَخٌ لَّهٗ مِنْ قَبْلُ ۚ— فَاَسَرَّهَا یُوْسُفُ فِیْ نَفْسِهٖ وَلَمْ یُبْدِهَا لَهُمْ ۚ— قَالَ اَنْتُمْ شَرٌّ مَّكَانًا ۚ— وَاللّٰهُ اَعْلَمُ بِمَا تَصِفُوْنَ ۟

ಸಹೋದರರು ಹೇಳಿದರು: “ಈತ ಕಳ್ಳತನ ಮಾಡಿದ್ದರೆ (ಅದರಲ್ಲಿ ಅಚ್ಚರಿಪಡುವಂತದ್ದೇನೂ ಇಲ್ಲ). ಏಕೆಂದರೆ ಇದಕ್ಕೆ ಮೊದಲು ಈತನ ಅಣ್ಣನೂ ಕಳ್ಳತನ ಮಾಡಿದ್ದ.” ಯೂಸುಫ್ ಅದನ್ನು ಮನಸ್ಸಿನಲ್ಲೇ ಬಚ್ಚಿಟ್ಟುಕೊಂಡರು. ಅದನ್ನು ಅವರ ಮುಂದೆ ಬಹಿರಂಗಪಡಿಸಲಿಲ್ಲ. ಯೂಸುಫ್ (ಸ್ವಗತವಾಗಿ) ಹೇಳಿದರು: “ನೀವು ನಿಕೃಷ್ಟ ಸ್ಥಾನದಲ್ಲಿದ್ದೀರಿ. ನೀವು ವರ್ಣಿಸುವ ಈ ವಿಷಯದ ಬಗ್ಗೆ ಅಲ್ಲಾಹು ಬಹಳ ಚೆನ್ನಾಗಿ ತಿಳಿದಿದ್ದಾನೆ.” info
التفاسير:

external-link copy
78 : 12

قَالُوْا یٰۤاَیُّهَا الْعَزِیْزُ اِنَّ لَهٗۤ اَبًا شَیْخًا كَبِیْرًا فَخُذْ اَحَدَنَا مَكَانَهٗ ۚ— اِنَّا نَرٰىكَ مِنَ الْمُحْسِنِیْنَ ۟

ಅವರು ಹೇಳಿದರು: “ಓ ಅಝೀಝರೇ! ಅವನಿಗೆ ಒಬ್ಬ ವಯೋವೃದ್ಧ ತಂದೆಯಿದ್ದಾರೆ. ಆದ್ದರಿಂದ ಅವನ ಸ್ಥಾನದಲ್ಲಿ ನಮ್ಮಲ್ಲೊಬ್ಬನನ್ನು ಹಿಡಿಯಿರಿ. ನಿಜಕ್ಕೂ ನಿಮ್ಮನ್ನು ನಾವು ನೀತಿವಂತರಂತೆ ಕಾಣುತ್ತಿದ್ದೇವೆ.” info
التفاسير: