د قرآن کریم د معناګانو ژباړه - کنادي ژباړه - حمزه بتور

د مخ نمبر:close

external-link copy
15 : 29

فَاَنْجَیْنٰهُ وَاَصْحٰبَ السَّفِیْنَةِ وَجَعَلْنٰهَاۤ اٰیَةً لِّلْعٰلَمِیْنَ ۟

ಆದರೆ ನಾವು ನೂಹರನ್ನು ಮತ್ತು ನಾವೆಯಲ್ಲಿದ್ದವರನ್ನು ರಕ್ಷಿಸಿದೆವು. ಅದನ್ನು ಸರ್ವಲೋಕದವರಿಗೆ ಒಂದು ದೃಷ್ಟಾಂತವನ್ನಾಗಿ ಮಾಡಿದೆವು. info
التفاسير:

external-link copy
16 : 29

وَاِبْرٰهِیْمَ اِذْ قَالَ لِقَوْمِهِ اعْبُدُوا اللّٰهَ وَاتَّقُوْهُ ؕ— ذٰلِكُمْ خَیْرٌ لَّكُمْ اِنْ كُنْتُمْ تَعْلَمُوْنَ ۟

ಇಬ್ರಾಹೀಮರನ್ನು ನೆನಪಿಸಿಕೊಳ್ಳಿ. ಅವರು ತಮ್ಮ ಜನರೊಂದಿಗೆ ಹೇಳಿದ ಸಂದರ್ಭ: “ನೀವು ಅಲ್ಲಾಹನನ್ನು ಆರಾಧಿಸಿರಿ ಮತ್ತು ಅವನನ್ನು ಮಾತ್ರ ಭಯಪಡಿರಿ. ನಿಮಗೆ ತಿಳುವಳಿಕೆಯಿದ್ದರೆ ಅದೇ ನಿಮಗೆ ಉತ್ತಮವಾಗಿದೆ. info
التفاسير:

external-link copy
17 : 29

اِنَّمَا تَعْبُدُوْنَ مِنْ دُوْنِ اللّٰهِ اَوْثَانًا وَّتَخْلُقُوْنَ اِفْكًا ؕ— اِنَّ الَّذِیْنَ تَعْبُدُوْنَ مِنْ دُوْنِ اللّٰهِ لَا یَمْلِكُوْنَ لَكُمْ رِزْقًا فَابْتَغُوْا عِنْدَ اللّٰهِ الرِّزْقَ وَاعْبُدُوْهُ وَاشْكُرُوْا لَهٗ ؕ— اِلَیْهِ تُرْجَعُوْنَ ۟

ನೀವು ಅಲ್ಲಾಹನನ್ನು ಬಿಟ್ಟು ಕೆಲವು ವಿಗ್ರಹಗಳನ್ನು ಆರಾಧಿಸುತ್ತಿದ್ದೀರಿ ಮತ್ತು ಸುಳ್ಳನ್ನು ಸೃಷ್ಟಿಸುತ್ತಿದ್ದೀರಿ. ನೀವು ಅಲ್ಲಾಹನನ್ನು ಬಿಟ್ಟು ಯಾರನ್ನು ಆರಾಧಿಸುತ್ತಿದ್ದೀರೋ ಅವರು ನಿಮ್ಮ ಉಪಜೀವನವನ್ನು ವಶದಲ್ಲಿಟ್ಟುಕೊಂಡಿಲ್ಲ. ಆದ್ದರಿಂದ ನೀವು ಅಲ್ಲಾಹನಲ್ಲಿ ಉಪಜೀವನವನ್ನು ಬೇಡಿರಿ. ಅವನನ್ನು ಮಾತ್ರ ಆರಾಧಿಸಿರಿ ಮತ್ತು ಅವನಿಗೆ ಕೃತಜ್ಞರಾಗಿರಿ. ನಿಮ್ಮನ್ನು ಅವನ ಬಳಿಗೇ ಮರಳಿಸಲಾಗುವುದು.” info
التفاسير:

external-link copy
18 : 29

وَاِنْ تُكَذِّبُوْا فَقَدْ كَذَّبَ اُمَمٌ مِّنْ قَبْلِكُمْ ؕ— وَمَا عَلَی الرَّسُوْلِ اِلَّا الْبَلٰغُ الْمُبِیْنُ ۟

ನೀವು ನಿಷೇಧಿಸುವುದಾದರೆ (ಅದರಲ್ಲಿ ಆಶ್ಚರ್ಯವಿಲ್ಲ). ನಿಮಗಿಂತ ಮೊದಲು ಹಲವಾರು ಸಮುದಾಯಗಳ ಜನರು ನಿಷೇಧಿಸಿದ್ದಾರೆ. ಸಂದೇಶವಾಹಕರ ಕರ್ತವ್ಯವು ಸ್ಪಷ್ಟವಾದ ರೀತಿಯಲ್ಲಿ ಸಂದೇಶವನ್ನು ತಲುಪಿಸುವುದು ಮಾತ್ರವಾಗಿದೆ. info
التفاسير:

external-link copy
19 : 29

اَوَلَمْ یَرَوْا كَیْفَ یُبْدِئُ اللّٰهُ الْخَلْقَ ثُمَّ یُعِیْدُهٗ ؕ— اِنَّ ذٰلِكَ عَلَی اللّٰهِ یَسِیْرٌ ۟

ಅಲ್ಲಾಹು ಪ್ರಥಮ ಬಾರಿಗೆ ಹೇಗೆ ಸೃಷ್ಟಿಸಿದನೆಂದು ಅವರು ನೋಡಿಲ್ಲವೇ? ನಂತರ ಅವನು ಅದನ್ನು ಪುನರಾವರ್ತಿಸುವನು. ನಿಶ್ಚಯವಾಗಿಯೂ ಅದು ಅಲ್ಲಾಹನ ಮಟ್ಟಿಗೆ ಬಹಳ ಸುಲಭವಾಗಿದೆ. info
التفاسير:

external-link copy
20 : 29

قُلْ سِیْرُوْا فِی الْاَرْضِ فَانْظُرُوْا كَیْفَ بَدَاَ الْخَلْقَ ثُمَّ اللّٰهُ یُنْشِئُ النَّشْاَةَ الْاٰخِرَةَ ؕ— اِنَّ اللّٰهَ عَلٰى كُلِّ شَیْءٍ قَدِیْرٌ ۟ۚ

ಹೇಳಿರಿ: “ನೀವು ಭೂಮಿಯಲ್ಲಿ ಸಂಚರಿಸಿರಿ. ನಂತರ ಅವನು ಪ್ರಥಮ ಬಾರಿಗೆ ಹೇಗೆ ಸೃಷ್ಟಿಸಿದನೆಂದು ನೋಡಿರಿ. ನಂತರ ಅಲ್ಲಾಹು ಇನ್ನೊಮ್ಮೆ ಸೃಷ್ಟಿಸುವನು. ನಿಶ್ಚಯವಾಗಿಯೂ ಅಲ್ಲಾಹು ಎಲ್ಲಾ ವಿಷಯಗಳಲ್ಲೂ ಸಾಮರ್ಥ್ಯವುಳ್ಳವನಾಗಿದ್ದಾನೆ.” info
التفاسير:

external-link copy
21 : 29

یُعَذِّبُ مَنْ یَّشَآءُ وَیَرْحَمُ مَنْ یَّشَآءُ ۚ— وَاِلَیْهِ تُقْلَبُوْنَ ۟

ಅವನು ಇಚ್ಛಿಸುವವರನ್ನು ಅವನು ಶಿಕ್ಷಿಸುತ್ತಾನೆ ಮತ್ತು ಅವನು ಇಚ್ಛಿಸುವವರಿಗೆ ಕರುಣೆ ತೋರುತ್ತಾನೆ. ನಿಮ್ಮನ್ನು ಅವನ ಬಳಿಗೇ ಮರಳಿಸಲಾಗುವುದು. info
التفاسير:

external-link copy
22 : 29

وَمَاۤ اَنْتُمْ بِمُعْجِزِیْنَ فِی الْاَرْضِ وَلَا فِی السَّمَآءِ ؗ— وَمَا لَكُمْ مِّنْ دُوْنِ اللّٰهِ مِنْ وَّلِیٍّ وَّلَا نَصِیْرٍ ۟۠

ಭೂಮಿಯಲ್ಲಿ ಅಥವಾ ಆಕಾಶದಲ್ಲಿ ಅಲ್ಲಾಹನನ್ನು ಸೋಲಿಸಲು ನಿಮಗೆ ಸಾಧ್ಯವಿಲ್ಲ. ಅಲ್ಲಾಹನ ಹೊರತು ನಿಮಗೆ ಬೇರೆ ರಕ್ಷಕರೋ ಸಹಾಯಕರೋ ಇಲ್ಲ. info
التفاسير:

external-link copy
23 : 29

وَالَّذِیْنَ كَفَرُوْا بِاٰیٰتِ اللّٰهِ وَلِقَآىِٕهٖۤ اُولٰٓىِٕكَ یَىِٕسُوْا مِنْ رَّحْمَتِیْ وَاُولٰٓىِٕكَ لَهُمْ عَذَابٌ اَلِیْمٌ ۟

ಅಲ್ಲಾಹನ ವಚನಗಳನ್ನು ಮತ್ತು ಅವನನ್ನು ಭೇಟಿಯಾಗುವುದನ್ನು ನಿಷೇಧಿಸಿದವರು ಯಾರೋ ಅವರು ನನ್ನ ದಯೆಯ ಬಗ್ಗೆ ನಿರಾಶರಾಗಿದ್ದಾರೆ. ಅವರಿಗೆ ಯಾತನಾಮಯ ಶಿಕ್ಷೆಯಿದೆ. info
التفاسير: