Tradução dos significados do Nobre Qur’an. - Tradução canarim - Hamza Bator

ಅಲ್ -ಫುರ್ಕಾನ್

external-link copy
1 : 25

تَبٰرَكَ الَّذِیْ نَزَّلَ الْفُرْقَانَ عَلٰی عَبْدِهٖ لِیَكُوْنَ لِلْعٰلَمِیْنَ نَذِیْرَا ۟ۙ

ಸತ್ಯಾಸತ್ಯ ವಿವೇಚಕ ಗ್ರಂಥವನ್ನು (ಕುರ್‌ಆನನ್ನು) ತನ್ನ ದಾಸನಿಗೆ (ಪ್ರವಾದಿಗೆ)—ಅವರು ಸರ್ವಲೋಕದವರಿಗೆ ಒಬ್ಬ ಮುನ್ನೆಚ್ಚರಿಕೆಗಾರನಾಗಲೆಂದು—ಅವತೀರ್ಣಗೊಳಿಸಿದ ಅಲ್ಲಾಹು ಸಮೃದ್ಧಪೂರ್ಣನಾಗಿದ್ದಾನೆ. info
التفاسير:

external-link copy
2 : 25

١لَّذِیْ لَهٗ مُلْكُ السَّمٰوٰتِ وَالْاَرْضِ وَلَمْ یَتَّخِذْ وَلَدًا وَّلَمْ یَكُنْ لَّهٗ شَرِیْكٌ فِی الْمُلْكِ وَخَلَقَ كُلَّ شَیْءٍ فَقَدَّرَهٗ تَقْدِیْرًا ۟

ಅಂದರೆ ಭೂಮ್ಯಾಕಾಶಗಳ ಸಾರ್ವಭೌಮತ್ವವು ಯಾರಿಗೆ ಸೇರಿದೆಯೋ ಅವನು. ಅವನಿಗೆ ಯಾವುದೇ ಮಕ್ಕಳಿಲ್ಲ. ಸಾರ್ವಭೌಮತ್ವದಲ್ಲಿ ಅವನೊಂದಿಗೆ ಯಾವುದೇ ಸಹಭಾಗಿಗಳಿಲ್ಲ. ಅವನು ಎಲ್ಲಾ ವಸ್ತುಗಳನ್ನೂ ಸೃಷ್ಟಿಸಿ ಅದಕ್ಕೆ ನಿಖರವಾದ ನಿರ್ಣಯವನ್ನು ನಿಶ್ಚಯಿಸಿದ್ದಾನೆ. info
التفاسير: