Tradução dos significados do Nobre Qur’an. - Tradução canarim - Hamza Bator

Número de página:close

external-link copy
32 : 39

فَمَنْ اَظْلَمُ مِمَّنْ كَذَبَ عَلَی اللّٰهِ وَكَذَّبَ بِالصِّدْقِ اِذْ جَآءَهٗ ؕ— اَلَیْسَ فِیْ جَهَنَّمَ مَثْوًی لِّلْكٰفِرِیْنَ ۟

ಅಲ್ಲಾಹನ ಮೇಲೆ ಸುಳ್ಳು ಹೇಳಿದವನಿಗಿಂತ ಮತ್ತು ಸತ್ಯವು ತನ್ನ ಬಳಿಗೆ ಬಂದಾಗ ಅದನ್ನು ನಿಷೇಧಿಸಿದವನಿಗಿಂತ ದೊಡ್ಡ ಅಕ್ರಮಿ ಯಾರು? ನರಕದಲ್ಲಿ ಸತ್ಯನಿಷೇಧಿಗಳಿಗೆ ಸ್ಥಳವಿಲ್ಲವೇ? info
التفاسير:

external-link copy
33 : 39

وَالَّذِیْ جَآءَ بِالصِّدْقِ وَصَدَّقَ بِهٖۤ اُولٰٓىِٕكَ هُمُ الْمُتَّقُوْنَ ۟

ಸತ್ಯಧರ್ಮವನ್ನು ತಂದವರು ಮತ್ತು ಅದರಲ್ಲಿ ವಿಶ್ವಾಸವಿಟ್ಟವರು ಯಾರೋ ಅವರೇ ದೇವಭಯವುಳ್ಳವರು. info
التفاسير:

external-link copy
34 : 39

لَهُمْ مَّا یَشَآءُوْنَ عِنْدَ رَبِّهِمْ ؕ— ذٰلِكَ جَزٰٓؤُا الْمُحْسِنِیْنَ ۟ۚۖ

ಅವರಿಗೆ ಅವರು ಇಚ್ಛಿಸುವುದೆಲ್ಲವೂ ಅವರ ಪರಿಪಾಲಕನ (ಅಲ್ಲಾಹನ) ಬಳಿಯಿದೆ. ಅದು ಸಜ್ಜನರಿಗೆ ದೊರೆಯುವ ಪ್ರತಿಫಲವಾಗಿದೆ. info
التفاسير:

external-link copy
35 : 39

لِیُكَفِّرَ اللّٰهُ عَنْهُمْ اَسْوَاَ الَّذِیْ عَمِلُوْا وَیَجْزِیَهُمْ اَجْرَهُمْ بِاَحْسَنِ الَّذِیْ كَانُوْا یَعْمَلُوْنَ ۟

ಅಲ್ಲಾಹು ಅವರು ಮಾಡಿರುವ ಕೆಟ್ಟ ಕರ್ಮಗಳನ್ನು ಅಳಿಸುವುದಕ್ಕಾಗಿ ಮತ್ತು ಅವರು ಮಾಡಿರುವ ಉತ್ತಮ ಕರ್ಮಗಳಿಗೆ ಅತ್ಯುತ್ತಮ ಪ್ರತಿಫಲವನ್ನು ನೀಡುವುದಕ್ಕಾಗಿ. info
التفاسير:

external-link copy
36 : 39

اَلَیْسَ اللّٰهُ بِكَافٍ عَبْدَهٗ ؕ— وَیُخَوِّفُوْنَكَ بِالَّذِیْنَ مِنْ دُوْنِهٖ ؕ— وَمَنْ یُّضْلِلِ اللّٰهُ فَمَا لَهٗ مِنْ هَادٍ ۟ۚ

ಅಲ್ಲಾಹು ಅವನ ದಾಸನಿಗೆ ಸಾಕಾಗುವುದಿಲ್ಲವೇ? ಅವರು ಅಲ್ಲಾಹನಲ್ಲದವರ ಬಗ್ಗೆ ಹೇಳಿ ನಿಮ್ಮನ್ನು ಹೆದರಿಸುತ್ತಾರೆ. ಅಲ್ಲಾಹು ಯಾರನ್ನು ದಾರಿತಪ್ಪಿಸುತ್ತಾನೋ ಅವನಿಗೆ ಸನ್ಮಾರ್ಗ ತೋರಿಸುವವರು ಯಾರೂ ಇಲ್ಲ. info
التفاسير:

external-link copy
37 : 39

وَمَنْ یَّهْدِ اللّٰهُ فَمَا لَهٗ مِنْ مُّضِلٍّ ؕ— اَلَیْسَ اللّٰهُ بِعَزِیْزٍ ذِی انْتِقَامٍ ۟

ಅಲ್ಲಾಹು ಯಾರನ್ನು ಸನ್ಮಾರ್ಗದಲ್ಲಿ ಸೇರಿಸುತ್ತಾನೋ ಅವನನ್ನು ದಾರಿತಪ್ಪಿಸಲು ಯಾರಿಗೂ ಸಾಧ್ಯವಿಲ್ಲ. ಅಲ್ಲಾಹು ಪ್ರಬಲನು ಮತ್ತು ಪ್ರತೀಕಾರ ಪಡೆಯುವವನಲ್ಲವೇ? info
التفاسير:

external-link copy
38 : 39

وَلَىِٕنْ سَاَلْتَهُمْ مَّنْ خَلَقَ السَّمٰوٰتِ وَالْاَرْضَ لَیَقُوْلُنَّ اللّٰهُ ؕ— قُلْ اَفَرَءَیْتُمْ مَّا تَدْعُوْنَ مِنْ دُوْنِ اللّٰهِ اِنْ اَرَادَنِیَ اللّٰهُ بِضُرٍّ هَلْ هُنَّ كٰشِفٰتُ ضُرِّهٖۤ اَوْ اَرَادَنِیْ بِرَحْمَةٍ هَلْ هُنَّ مُمْسِكٰتُ رَحْمَتِهٖ ؕ— قُلْ حَسْبِیَ اللّٰهُ ؕ— عَلَیْهِ یَتَوَكَّلُ الْمُتَوَكِّلُوْنَ ۟

“ಭೂಮ್ಯಾಕಾಶಗಳನ್ನು ಸೃಷ್ಟಿಸಿದ್ದು ಯಾರು?” ಎಂದು ನೀವು ಅವರೊಡನೆ ಕೇಳಿದರೆ ಅವರು ಖಂಡಿತವಾಗಿಯೂ “ಅಲ್ಲಾಹು” ಎಂದು ಹೇಳುತ್ತಾರೆ. ಕೇಳಿರಿ: “ಹಾಗಾದರೆ ಅಲ್ಲಾಹನನ್ನು ಬಿಟ್ಟು ನೀವು ಕರೆದು ಪ್ರಾರ್ಥಿಸುತ್ತಿರುವ ದೇವರುಗಳ ಬಗ್ಗೆ ನೀವು ಯೋಚಿಸಿದ್ದೀರಾ? ಅಲ್ಲಾಹು ನನಗೆ ಏನಾದರೂ ತೊಂದರೆ ನೀಡಲು ಬಯಸಿದರೆ ಆ ತೊಂದರೆಯನ್ನು ನಿವಾರಿಸಲು ಅವರಿಗೆ ಸಾಧ್ಯವೇ? ಅಥವಾ ಅವನು ನನಗೆ ದಯೆ ತೋರಲು ಬಯಸಿದರೆ ಅವನ ದಯೆಯನ್ನು ತಡೆಯಲು ಅವರಿಗೆ ಸಾಧ್ಯವೇ?” ಹೇಳಿರಿ: “ನನಗೆ ಅಲ್ಲಾಹು ಸಾಕು. ಭರವಸೆಯಿಡುವವರು ಅವನಲ್ಲಿಯೇ ಭರವಸೆಯಿಡಲಿ.” info
التفاسير:

external-link copy
39 : 39

قُلْ یٰقَوْمِ اعْمَلُوْا عَلٰی مَكَانَتِكُمْ اِنِّیْ عَامِلٌ ۚ— فَسَوْفَ تَعْلَمُوْنَ ۟ۙ

ಹೇಳಿರಿ: “ಓ ನನ್ನ ಜನರೇ! ನೀವು ನಿಮ್ಮ ಸ್ಥಾನದಲ್ಲಿ ಕಾರ್ಯ ನಿರ್ವಹಿಸಿರಿ. ನಿಶ್ಚಯವಾಗಿಯೂ ನಾನೂ ಕಾರ್ಯ ನಿರ್ವಹಿಸುತ್ತೇನೆ. ನೀವು ಸದ್ಯವೇ ತಿಳಿಯುವಿರಿ. info
التفاسير:

external-link copy
40 : 39

مَنْ یَّاْتِیْهِ عَذَابٌ یُّخْزِیْهِ وَیَحِلُّ عَلَیْهِ عَذَابٌ مُّقِیْمٌ ۟

ಯಾರಿಗೆ ಅವಮಾನಗೊಳಿಸುವಂತಹ ಶಿಕ್ಷೆಯು ಬರಲಿದೆ ಮತ್ತು ಯಾರ ಮೇಲೆ ಶಾಶ್ವತ (ಪರಲೋಕದ) ಶಿಕ್ಷೆ ಎರಗಲಿದೆಯೆಂದು.” info
التفاسير: