Tradução dos significados do Nobre Qur’an. - Tradução canarim - Hamza Bator

Número de página:close

external-link copy
68 : 39

وَنُفِخَ فِی الصُّوْرِ فَصَعِقَ مَنْ فِی السَّمٰوٰتِ وَمَنْ فِی الْاَرْضِ اِلَّا مَنْ شَآءَ اللّٰهُ ؕ— ثُمَّ نُفِخَ فِیْهِ اُخْرٰی فَاِذَا هُمْ قِیَامٌ یَّنْظُرُوْنَ ۟

ಕಹಳೆಯಲ್ಲಿ ಊದಲಾಗುವಾಗ ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿರುವ ಎಲ್ಲರೂ ಸ್ಮೃತಿ ತಪ್ಪಿ ಬೀಳುವರು. ಅಲ್ಲಾಹು ಇಚ್ಛಿಸಿದವರ ಹೊರತು. ನಂತರ ಅದರಲ್ಲಿ (ಕಹಳೆಯಲ್ಲಿ) ಇನ್ನೊಮ್ಮೆ ಊದಲಾಗುವಾಗ ಅಗೋ! ಅವರು ಎದ್ದು ನಿಂತು ನೋಡುತ್ತಿರುವರು. info
التفاسير:

external-link copy
69 : 39

وَاَشْرَقَتِ الْاَرْضُ بِنُوْرِ رَبِّهَا وَوُضِعَ الْكِتٰبُ وَجِایْٓءَ بِالنَّبِیّٖنَ وَالشُّهَدَآءِ وَقُضِیَ بَیْنَهُمْ بِالْحَقِّ وَهُمْ لَا یُظْلَمُوْنَ ۟

ಭೂಮಿಯು ಅದರ ಪರಿಪಾಲಕನ (ಅಲ್ಲಾಹನ) ಪ್ರಭೆಯಿಂದ ಬೆಳಗುವುದು. ಕರ್ಮಪುಸ್ತಕಗಳನ್ನು ಇಡಲಾಗುವುದು, ಪ್ರವಾದಿಗಳನ್ನು ಹಾಗೂ ಸಾಕ್ಷಿಗಳನ್ನು ಕರೆ ತರಲಾಗುವುದು. ನಂತರ ಜನರ ಮಧ್ಯೆ ನ್ಯಾಯಯುತವಾಗಿ ತೀರ್ಪು ನೀಡಲಾಗುವುದು. ಅವರಿಗೆ ಯಾವುದೇ ಅನ್ಯಾಯವಾಗುವುದಿಲ್ಲ. info
التفاسير:

external-link copy
70 : 39

وَوُفِّیَتْ كُلُّ نَفْسٍ مَّا عَمِلَتْ وَهُوَ اَعْلَمُ بِمَا یَفْعَلُوْنَ ۟۠

ಪ್ರತಿಯೊಬ್ಬ ವ್ಯಕ್ತಿಗೂ ಅವನು ಮಾಡಿದ ಕರ್ಮಗಳ ಪ್ರತಿಫಲವನ್ನು ಪೂರ್ಣವಾಗಿ ನೀಡಲಾಗುವುದು. ಅವರು ಮಾಡುತ್ತಿದ್ದ ಕರ್ಮಗಳ ಬಗ್ಗೆ ಅವನು ಬಹಳ ಚೆನ್ನಾಗಿ ತಿಳಿದಿದ್ದಾನೆ. info
التفاسير:

external-link copy
71 : 39

وَسِیْقَ الَّذِیْنَ كَفَرُوْۤا اِلٰی جَهَنَّمَ زُمَرًا ؕ— حَتّٰۤی اِذَا جَآءُوْهَا فُتِحَتْ اَبْوَابُهَا وَقَالَ لَهُمْ خَزَنَتُهَاۤ اَلَمْ یَاْتِكُمْ رُسُلٌ مِّنْكُمْ یَتْلُوْنَ عَلَیْكُمْ اٰیٰتِ رَبِّكُمْ وَیُنْذِرُوْنَكُمْ لِقَآءَ یَوْمِكُمْ هٰذَا ؕ— قَالُوْا بَلٰی وَلٰكِنْ حَقَّتْ كَلِمَةُ الْعَذَابِ عَلَی الْكٰفِرِیْنَ ۟

ಸತ್ಯನಿಷೇಧಿಗಳನ್ನು ಗುಂಪು ಗುಂಪಾಗಿ ನರಕಕ್ಕೆ ಸಾಗಿಸಲಾಗುವುದು. ಎಲ್ಲಿಯವರೆಗೆಂದರೆ ಅವರು ಅದರ ಸಮೀಪಕ್ಕೆ ಬಂದಾಗ ಅದರ ಬಾಗಿಲುಗಳನ್ನು ತೆರೆಯಲಾಗುವುದು. ಅವುಗಳ ಕಾವಲುಗಾರರು ಕೇಳುವರು: “ನಿಮ್ಮ ಪರಿಪಾಲಕನ (ಅಲ್ಲಾಹನ) ವಚನಗಳನ್ನು ಓದಿಕೊಡುವ, ನಿಮ್ಮ ಈ ದಿನವನ್ನು ನೀವು ಸಂಧಿಸಲಿರುವಿರಿ ಎಂದು ನಿಮಗೆ ಎಚ್ಚರಿಕೆ ನೀಡುವ, ನಿಮ್ಮವರೇ ಆಗಿರುವ ಸಂದೇಶವಾಹಕರು ನಿಮ್ಮ ಬಳಿಗೆ ಬಂದಿರಲಿಲ್ಲವೇ?” ಅವರು ಹೇಳುವರು: “ಹೌದು! ಆದರೆ ಸತ್ಯನಿಷೇಧಿಗಳ ಮೇಲೆ ಶಿಕ್ಷೆಯ ವಚನವು ಖಾತ್ರಿಯಾಗಿ ಬಿಟ್ಟಿದೆ.” info
التفاسير:

external-link copy
72 : 39

قِیْلَ ادْخُلُوْۤا اَبْوَابَ جَهَنَّمَ خٰلِدِیْنَ فِیْهَا ۚ— فَبِئْسَ مَثْوَی الْمُتَكَبِّرِیْنَ ۟

ಅವರೊಂದಿಗೆ ಹೇಳಲಾಗುವುದು: “ನೀವು ನರಕದ ದ್ವಾರಗಳನ್ನು ಪ್ರವೇಶಿಸಿರಿ. ನೀವು ಅದರಲ್ಲಿ ಶಾಶ್ವತವಾಗಿ ವಾಸಿಸುವಿರಿ. ಅಹಂಕಾರಿಗಳ ವಾಸಸ್ಥಳವು ಬಹಳ ನಿಕೃಷ್ಟವಾಗಿದೆ!” info
التفاسير:

external-link copy
73 : 39

وَسِیْقَ الَّذِیْنَ اتَّقَوْا رَبَّهُمْ اِلَی الْجَنَّةِ زُمَرًا ؕ— حَتّٰۤی اِذَا جَآءُوْهَا وَفُتِحَتْ اَبْوَابُهَا وَقَالَ لَهُمْ خَزَنَتُهَا سَلٰمٌ عَلَیْكُمْ طِبْتُمْ فَادْخُلُوْهَا خٰلِدِیْنَ ۟

ತಮ್ಮ ಪರಿಪಾಲಕನನ್ನು (ಅಲ್ಲಾಹನನ್ನು) ಭಯಪಟ್ಟು ಜೀವಿಸಿದವರನ್ನು ಗುಂಪು ಗುಂಪಾಗಿ ಸ್ವರ್ಗಕ್ಕೆ ಸಾಗಿಸಲಾಗುವುದು. ಎಲ್ಲಿಯವರೆಗೆಂದರೆ ಅವರು ಅದರ ಸಮೀಪಕ್ಕೆ ಬಂದಾಗ ಅದರ ಬಾಗಿಲುಗಳನ್ನು ತೆರೆಯಲಾಗುವುದು. ಅವುಗಳ ಕಾವಲುಗಾರರು ಹೇಳುವರು: “ನಿಮ್ಮ ಮೇಲೆ ಶಾಂತಿಯಿರಲಿ! ನೀವು ಸಂತೋಷವಾಗಿರಿ. ನೀವು ಶಾಶ್ವತ ನಿವಾಸಿಗಳಾಗಿ ಇದನ್ನು ಪ್ರವೇಶಿಸಿರಿ.” info
التفاسير:

external-link copy
74 : 39

وَقَالُوا الْحَمْدُ لِلّٰهِ الَّذِیْ صَدَقَنَا وَعْدَهٗ وَاَوْرَثَنَا الْاَرْضَ نَتَبَوَّاُ مِنَ الْجَنَّةِ حَیْثُ نَشَآءُ ۚ— فَنِعْمَ اَجْرُ الْعٰمِلِیْنَ ۟

ಅವರು ಹೇಳುವರು: “ಅಲ್ಲಾಹನಿಗೆ ಸರ್ವಸ್ತುತಿ. ಅವನು ನಮಗೆ ನೀಡಿದ ವಾಗ್ದಾನವನ್ನು ಈಡೇರಿಸಿದ್ದಾನೆ ಮತ್ತು ಸ್ವರ್ಗದಲ್ಲಿ ನಾವು ಇಚ್ಛಿಸುವ ಕಡೆ ವಾಸಿಸಬಹುದಾದ ರೀತಿಯಲ್ಲಿ ಈ ಸ್ವರ್ಗಭೂಮಿಗೆ ನಮ್ಮನ್ನು ಉತ್ತರಾಧಿಕಾರಿಗಳನ್ನಾಗಿ ಮಾಡಿದ್ದಾನೆ. ಕರ್ಮವೆಸಗಿದವರಿಗೆ ದೊರೆಯುವ ಪ್ರತಿಫಲವು ಬಹಳ ಉತ್ತಮವಾಗಿದೆ! info
التفاسير: