Ibisobanuro bya qoran ntagatifu - Ibisobanuro bya Qur'an Ntagatifu mu rurimi rw'igikanada - Hamza Betur.

numero y'urupapuro:close

external-link copy
188 : 7

قُلْ لَّاۤ اَمْلِكُ لِنَفْسِیْ نَفْعًا وَّلَا ضَرًّا اِلَّا مَا شَآءَ اللّٰهُ ؕ— وَلَوْ كُنْتُ اَعْلَمُ الْغَیْبَ لَاسْتَكْثَرْتُ مِنَ الْخَیْرِ ۛۚ— وَمَا مَسَّنِیَ السُّوْٓءُ ۛۚ— اِنْ اَنَا اِلَّا نَذِیْرٌ وَّبَشِیْرٌ لِّقَوْمٍ یُّؤْمِنُوْنَ ۟۠

ಹೇಳಿರಿ: “ನಾನು ನನಗಾಗಿ ಯಾವುದೇ ಲಾಭ ಅಥವಾ ತೊಂದರೆ ಮಾಡುವ ಅಧಿಕಾರವನ್ನು ಹೊಂದಿಲ್ಲ—ಅಲ್ಲಾಹು ಏನು ಇಚ್ಛಿಸುತ್ತಾನೋ ಅದರ ಹೊರತು. ನನಗೆ ಅದೃಶ್ಯ ಜ್ಞಾನವಿರುತ್ತಿದ್ದರೆ, ನಾನು ಹೇರಳ ಒಳಿತುಗಳನ್ನು ಮಾಡುತ್ತಿದ್ದೆ. ಕೆಡುಕು ನನ್ನನ್ನು ಸ್ಪರ್ಶಿಸುತ್ತಲೇ ಇರಲಿಲ್ಲ. ವಿಶ್ವಾಸವಿಡುವ ಜನರಿಗೆ ನಾನೊಬ್ಬ ಮುನ್ನೆಚ್ಚರಿಕೆಗಾರ ಮತ್ತು ಸುವಾರ್ತೆ ನೀಡುವವ ಮಾತ್ರವಾಗಿದ್ದೇನೆ.” info
التفاسير:

external-link copy
189 : 7

هُوَ الَّذِیْ خَلَقَكُمْ مِّنْ نَّفْسٍ وَّاحِدَةٍ وَّجَعَلَ مِنْهَا زَوْجَهَا لِیَسْكُنَ اِلَیْهَا ۚ— فَلَمَّا تَغَشّٰىهَا حَمَلَتْ حَمْلًا خَفِیْفًا فَمَرَّتْ بِهٖ ۚ— فَلَمَّاۤ اَثْقَلَتْ دَّعَوَا اللّٰهَ رَبَّهُمَا لَىِٕنْ اٰتَیْتَنَا صَالِحًا لَّنَكُوْنَنَّ مِنَ الشّٰكِرِیْنَ ۟

ನಿಮ್ಮನ್ನು ಒಂದೇ ದೇಹದಿಂದ ಸೃಷ್ಟಿಸಿದವನು ಅವನೇ. ನಂತರ ಅವನಿಂದ ಅವನ ಪತ್ನಿಯನ್ನು ಸೃಷ್ಟಿಸಿದನು—ಅವನು ಅವಳಿಂದ ನೆಮ್ಮದಿ ಪಡೆಯುವುದಕ್ಕಾಗಿ. ನಂತರ ಅವನು ಅವಳೊಡನೆ ಸೇರಿದಾಗ ಅವಳು ಹಗುರವಾದ ಗರ್ಭ ಧರಿಸಿ, ನಂತರ ಅದರೊಂದಿಗೆ ಮುಂದುವರಿದಳು. ಅವಳ ಭಾರವು ಹೆಚ್ಚಾದಾಗ (ಹೆರಿಗೆ ನೋವು ಗೋಚರಿಸಿದಾಗ) ಅವರಿಬ್ಬರೂ ಅವರ ಪರಿಪಾಲಕನಾದ ಅಲ್ಲಾಹನನ್ನು ಕರೆದು ಪ್ರಾರ್ಥಿಸಿದರು: “ನೀನು ನಮಗೆ ನೀತಿವಂತ ಮಗುವನ್ನು ನೀಡಿದರೆ ನಾವು ಖಂಡಿತ ನಿನಗೆ ಆಭಾರಿಯಾಗುವೆವು.” info
التفاسير:

external-link copy
190 : 7

فَلَمَّاۤ اٰتٰىهُمَا صَالِحًا جَعَلَا لَهٗ شُرَكَآءَ فِیْمَاۤ اٰتٰىهُمَا ۚ— فَتَعٰلَی اللّٰهُ عَمَّا یُشْرِكُوْنَ ۟

ಅವನು ಅವರಿಗೆ ನೀತಿವಂತ ಮಗುವನ್ನು ನೀಡಿದಾಗ, ಅವನು ಅವರಿಗೆ ನೀಡಿದ್ದರಲ್ಲಿಯೇ ಅವರು ಅವನಿಗೆ ಸಹಭಾಗಿಗಳನ್ನು ನಿಶ್ಚಯಿಸಿದರು. ಅವರು ಮಾಡುವ ಸಹಭಾಗಿತ್ವದಿಂದ ಅಲ್ಲಾಹು ಎಷ್ಟೋ ಉನ್ನತನಾಗಿದ್ದಾನೆ. info
التفاسير:

external-link copy
191 : 7

اَیُشْرِكُوْنَ مَا لَا یَخْلُقُ شَیْـًٔا وَّهُمْ یُخْلَقُوْنَ ۟ۚ

ಯಾವುದೇ ವಸ್ತುವನ್ನು ಸೃಷ್ಟಿಸದವರನ್ನೋ ಅವರು ಅಲ್ಲಾಹನಿಗೆ ಸಹಭಾಗಿಯನ್ನಾಗಿ ಮಾಡುವುದು? (ವಾಸ್ತವವಾಗಿ) ಅವರೇ ಸೃಷ್ಟಿಗಳಾಗಿದ್ದಾರೆ. info
التفاسير:

external-link copy
192 : 7

وَلَا یَسْتَطِیْعُوْنَ لَهُمْ نَصْرًا وَّلَاۤ اَنْفُسَهُمْ یَنْصُرُوْنَ ۟

ಅವರಿಗೆ ಯಾವುದೇ ಸಹಾಯವನ್ನು ಮಾಡಲು ಆ ದೇವರುಗಳಿಗೆ ಸಾಧ್ಯವಿಲ್ಲ. ಸ್ವಯಂ ಅವರಿಗೂ ಅವರು ಸಹಾಯ ಮಾಡುವುದಿಲ್ಲ. info
التفاسير:

external-link copy
193 : 7

وَاِنْ تَدْعُوْهُمْ اِلَی الْهُدٰی لَا یَتَّبِعُوْكُمْ ؕ— سَوَآءٌ عَلَیْكُمْ اَدَعَوْتُمُوْهُمْ اَمْ اَنْتُمْ صَامِتُوْنَ ۟

ನೀವು ಅವರನ್ನು ಸನ್ಮಾರ್ಗಕ್ಕೆ ಕರೆದರೆ ಅವರು ನಿಮ್ಮನ್ನು ಅನುಸರಿಸುವುದಿಲ್ಲ. ನೀವು ಅವರನ್ನು ಕರೆದರೂ ಅಥವಾ ಕರೆಯದೆ ಮೌನವಾಗಿದ್ದರೂ ನಿಮಗೆ ಸಂಬಂಧಿಸಿದಂತೆ ಅವೆರಡೂ ಸಮಾನವಾಗಿವೆ. info
التفاسير:

external-link copy
194 : 7

اِنَّ الَّذِیْنَ تَدْعُوْنَ مِنْ دُوْنِ اللّٰهِ عِبَادٌ اَمْثَالُكُمْ فَادْعُوْهُمْ فَلْیَسْتَجِیْبُوْا لَكُمْ اِنْ كُنْتُمْ صٰدِقِیْنَ ۟

ನೀವು ಅಲ್ಲಾಹನನ್ನು ಬಿಟ್ಟು ಯಾರನ್ನು ಕರೆದು ಪ್ರಾರ್ಥಿಸುತ್ತೀರೋ ಅವರು (ಆ ದೇವರುಗಳು) ನಿಶ್ಚಯವಾಗಿಯೂ ನಿಮ್ಮಂತಹ ಸೃಷ್ಟಿಗಳಾಗಿದ್ದಾರೆ. ಅವರನ್ನು ಕರೆದು ಪ್ರಾರ್ಥಿಸಿರಿ; ಅವರು ನಿಮಗೆ ಉತ್ತರ ನೀಡುತ್ತಾರೋ ನೋಡೋಣ. ನೀವು ಸತ್ಯವಂತರಾಗಿದ್ದರೆ. info
التفاسير:

external-link copy
195 : 7

اَلَهُمْ اَرْجُلٌ یَّمْشُوْنَ بِهَاۤ ؗ— اَمْ لَهُمْ اَیْدٍ یَّبْطِشُوْنَ بِهَاۤ ؗ— اَمْ لَهُمْ اَعْیُنٌ یُّبْصِرُوْنَ بِهَاۤ ؗ— اَمْ لَهُمْ اٰذَانٌ یَّسْمَعُوْنَ بِهَا ؕ— قُلِ ادْعُوْا شُرَكَآءَكُمْ ثُمَّ كِیْدُوْنِ فَلَا تُنْظِرُوْنِ ۟

ಅವರಿಗೆ ನಡೆಯಲು ಸಾಧ್ಯವಾಗುವ ಕಾಲುಗಳಿವೆಯೇ? ಅವರಿಗೆ ಹಿಡಿಯಲು ಸಾಧ್ಯವಾಗುವ ಕೈಗಳಿವೆಯೇ? ಅವರಿಗೆ ನೋಡಲು ಸಾಧ್ಯವಾಗುವ ಕಣ್ಣುಗಳಿವೆಯೇ? ಅವರಿಗೆ ಕೇಳಲು ಸಾಧ್ಯವಾಗುವ ಕಿವಿಗಳಿವೆಯೇ? ಹೇಳಿರಿ: “ನೀವು ನಿಮ್ಮ ಸಹಭಾಗಿಗಳನ್ನು (ದೇವರುಗಳನ್ನು) ಕರೆಯಿರಿ. ನಂತರ ನನ್ನ ಮೇಲೆ ನಿಮ್ಮ ತಂತ್ರವನ್ನು ಪ್ರಯೋಗಿಸಿರಿ. ನನಗೆ ಕಾಲಾವಕಾಶ ನೀಡಬೇಡಿ.” info
التفاسير: