ශුද්ධවූ අල් කුර්ආන් අර්ථ කථනය - කැනඩියානු පරිවර්තනය - හම්සා බිතූන්

පිටු අංක:close

external-link copy
260 : 2

وَاِذْ قَالَ اِبْرٰهٖمُ رَبِّ اَرِنِیْ كَیْفَ تُحْیِ الْمَوْتٰی ؕ— قَالَ اَوَلَمْ تُؤْمِنْ ؕ— قَالَ بَلٰی وَلٰكِنْ لِّیَطْمَىِٕنَّ قَلْبِیْ ؕ— قَالَ فَخُذْ اَرْبَعَةً مِّنَ الطَّیْرِ فَصُرْهُنَّ اِلَیْكَ ثُمَّ اجْعَلْ عَلٰی كُلِّ جَبَلٍ مِّنْهُنَّ جُزْءًا ثُمَّ ادْعُهُنَّ یَاْتِیْنَكَ سَعْیًا ؕ— وَاعْلَمْ اَنَّ اللّٰهَ عَزِیْزٌ حَكِیْمٌ ۟۠

ಇಬ್ರಾಹೀಮ್ ಹೇಳಿದ ಸಂದರ್ಭ: "ಓ ನನ್ನ ಪರಿಪಾಲಕನೇ! ನೀನು ಸತ್ತವರಿಗೆ ಹೇಗೆ ಜೀವ ನೀಡುತ್ತೀ ಎಂದು ನನಗೆ ತೋರಿಸಿಕೊಡು." ಅಲ್ಲಾಹು ಕೇಳಿದನು: "ನಿಮಗೆ ನಂಬಿಕೆಯಿಲ್ಲವೇ?" ಅವರು ಹೇಳಿದರು: "ನಂಬಿಕೆಯಿದೆ. ಆದರೆ ನನ್ನ ಹೃದಯದ ಸಮಾಧಾನಕ್ಕಾಗಿ." ಅಲ್ಲಾಹು ಹೇಳಿದನು: "ನೀವು ನಾಲ್ಕು ಹಕ್ಕಿಗಳನ್ನು ಹಿಡಿದು ಅವುಗಳನ್ನು ನಿಮ್ಮ ಬಳಿಗೆ ಸೇರಿಸಿಕೊಳ್ಳಿ. ನಂತರ ಅವುಗಳನ್ನು (ತುಂಡುಗಳಾಗಿ ಕತ್ತರಿಸಿ) ಒಂದೊಂದು ಭಾಗವನ್ನು ಒಂದೊಂದು ಬೆಟ್ಟದ ಮೇಲಿಡಿ. ನಂತರ ಅವುಗಳನ್ನು ಕೂಗಿ ಕರೆಯಿರಿ. ಅವು ತಕ್ಷಣ ನಿಮ್ಮ ಬಳಿಗೆ ಓಡಿ ಬರುವುವು. ತಿಳಿಯಿರಿ! ನಿಶ್ಚಯವಾಗಿಯೂ ಅಲ್ಲಾಹು ಪ್ರಬಲನು ಮತ್ತು ವಿವೇಕಪೂರ್ಣನಾಗಿದ್ದಾನೆ. info
التفاسير:

external-link copy
261 : 2

مَثَلُ الَّذِیْنَ یُنْفِقُوْنَ اَمْوَالَهُمْ فِیْ سَبِیْلِ اللّٰهِ كَمَثَلِ حَبَّةٍ اَنْۢبَتَتْ سَبْعَ سَنَابِلَ فِیْ كُلِّ سُنْۢبُلَةٍ مِّائَةُ حَبَّةٍ ؕ— وَاللّٰهُ یُضٰعِفُ لِمَنْ یَّشَآءُ ؕ— وَاللّٰهُ وَاسِعٌ عَلِیْمٌ ۟

ಅಲ್ಲಾಹನ ಮಾರ್ಗದಲ್ಲಿ ತಮ್ಮ ಧನವನ್ನು ಖರ್ಚು ಮಾಡುವವರ ಉದಾಹರಣೆಯು ಒಂದು ಧಾನ್ಯದಂತೆ. ಅದು ಏಳು ತೆನೆಗಳನ್ನು ಉತ್ಪಾದಿಸಿತು. ಪ್ರತಿಯೊಂದು ತೆನೆಯಲ್ಲೂ ನೂರು ಧಾನ್ಯಗಳಿವೆ. ಅಲ್ಲಾಹು ಅವನು ಇಚ್ಛಿಸುವವರಿಗೆ ಇಮ್ಮಡಿಗೊಳಿಸಿಕೊಡುತ್ತಾನೆ. ಅಲ್ಲಾಹು ವಿಶಾಲನು ಮತ್ತು ಸರ್ವಜ್ಞನಾಗಿದ್ದಾನೆ. info
التفاسير:

external-link copy
262 : 2

اَلَّذِیْنَ یُنْفِقُوْنَ اَمْوَالَهُمْ فِیْ سَبِیْلِ اللّٰهِ ثُمَّ لَا یُتْبِعُوْنَ مَاۤ اَنْفَقُوْا مَنًّا وَّلَاۤ اَذًی ۙ— لَّهُمْ اَجْرُهُمْ عِنْدَ رَبِّهِمْ ۚ— وَلَا خَوْفٌ عَلَیْهِمْ وَلَا هُمْ یَحْزَنُوْنَ ۟

ಅಲ್ಲಾಹನ ಮಾರ್ಗದಲ್ಲಿ ತಮ್ಮ ಧನವನ್ನು ಖರ್ಚು ಮಾಡುವವರು ಮತ್ತು ನಂತರ ತಾವು ಖರ್ಚು ಮಾಡಿದ್ದಕ್ಕಾಗಿ ಉಪಕಾರ ಸ್ಮರಣೆ ಬಯಸದವರು ಮತ್ತು ತೊಂದರೆ ಕೊಡದವರು ಯಾರೋ—ಅವರಿಗೆ ಅವರ ಪರಿಪಾಲಕನ (ಅಲ್ಲಾಹನ) ಬಳಿ ಅವರ ಪ್ರತಿಫಲವಿದೆ. ಅವರಿಗೆ ಯಾವುದೇ ಭಯವಿಲ್ಲ; ಅವರು ದುಃಖಿಸುವುದೂ ಇಲ್ಲ. info
التفاسير:

external-link copy
263 : 2

قَوْلٌ مَّعْرُوْفٌ وَّمَغْفِرَةٌ خَیْرٌ مِّنْ صَدَقَةٍ یَّتْبَعُهَاۤ اَذًی ؕ— وَاللّٰهُ غَنِیٌّ حَلِیْمٌ ۟

ಕೊಟ್ಟ ನಂತರ ತೊಂದರೆ ನೀಡುವ ದಾನಕ್ಕಿಂತ ಉತ್ತಮವಾದ ಮಾತು ಮತ್ತು ಕ್ಷಮೆಯು ಶ್ರೇಷ್ಠವಾಗಿದೆ. ಅಲ್ಲಾಹು ನಿರಪೇಕ್ಷನು ಮತ್ತು ಸಹಿಷ್ಣುತೆಯುಳ್ಳವನಾಗಿದ್ದಾನೆ. info
التفاسير:

external-link copy
264 : 2

یٰۤاَیُّهَا الَّذِیْنَ اٰمَنُوْا لَا تُبْطِلُوْا صَدَقٰتِكُمْ بِالْمَنِّ وَالْاَذٰی ۙ— كَالَّذِیْ یُنْفِقُ مَالَهٗ رِئَآءَ النَّاسِ وَلَا یُؤْمِنُ بِاللّٰهِ وَالْیَوْمِ الْاٰخِرِ ؕ— فَمَثَلُهٗ كَمَثَلِ صَفْوَانٍ عَلَیْهِ تُرَابٌ فَاَصَابَهٗ وَابِلٌ فَتَرَكَهٗ صَلْدًا ؕ— لَا یَقْدِرُوْنَ عَلٰی شَیْءٍ مِّمَّا كَسَبُوْا ؕ— وَاللّٰهُ لَا یَهْدِی الْقَوْمَ الْكٰفِرِیْنَ ۟

ಓ ಸತ್ಯವಿಶ್ವಾಸಿಗಳೇ! ಉಪಕಾರ ಸ್ಮರಣೆ ಬಯಸುವ ಮೂಲಕ ಮತ್ತು ತೊಂದರೆ ಕೊಡುವ ಮೂಲಕ ನಿಮ್ಮ ದಾನಗಳನ್ನು ವ್ಯರ್ಥಗೊಳಿಸಬೇಡಿ. ಅಲ್ಲಾಹನಲ್ಲಿ ಮತ್ತು ಪರಲೋಕದಲ್ಲಿ ವಿಶ್ವಾಸವಿಡದೆ ಕೇವಲ ಜನರು ನೋಡುವುದಕ್ಕಾಗಿ ಖರ್ಚು ಮಾಡುವ ವ್ಯಕ್ತಿಯಂತೆ ನೀವಾಗಬೇಡಿ. ಅವನ ಉದಾಹರಣೆಯು ನುಣುಪಾದ ಒಂದು ಬಂಡೆಯಂತೆ. ಅದರ ಮೇಲೆ ಸ್ವಲ್ಪ ಮಣ್ಣಿದೆ. ಅದಕ್ಕೆ ಜಡಿಮಳೆ ಸುರಿದು ಅದು ಅದನ್ನು ಬೋಳು ಮಾಡಿಬಿಟ್ಟಿತು. ಅವರಿಗೆ ಅವರು ಸಂಪಾದಿಸಿದ ಯಾವುದನ್ನೂ ವಶದಲ್ಲಿಟ್ಟುಕೊಳ್ಳಲು ಸಾಧ್ಯವಾಗುವುದಿಲ್ಲ. ಸತ್ಯನಿಷೇಧಿಗಳಾದ ಜನರಿಗೆ ಅಲ್ಲಾಹು ಸನ್ಮಾರ್ಗವನ್ನು ತೋರಿಸುವುದಿಲ್ಲ. info
التفاسير: