ශුද්ධවූ අල් කුර්ආන් අර්ථ කථනය - කැනඩියානු පරිවර්තනය - හම්සා බිතූන්

පිටු අංක: 151:151 close

external-link copy
12 : 7

قَالَ مَا مَنَعَكَ اَلَّا تَسْجُدَ اِذْ اَمَرْتُكَ ؕ— قَالَ اَنَا خَیْرٌ مِّنْهُ ۚ— خَلَقْتَنِیْ مِنْ نَّارٍ وَّخَلَقْتَهٗ مِنْ طِیْنٍ ۟

ಅಲ್ಲಾಹು ಕೇಳಿದನು: “ನಾನು ಸಾಷ್ಟಾಂಗ ಮಾಡಲು ಆಜ್ಞಾಪಿಸಿದಾಗ ನೀನು ಅದನ್ನು ನಿರಾಕರಿಸಲು ಕಾರಣವೇನು?” ಇಬ್ಲೀಸ್ ಹೇಳಿದನು: “ನಾನು ಆದಮರಿಗಿಂತಲೂ ಶ್ರೇಷ್ಠನು. ನೀನು ನನ್ನನ್ನು ಸೃಷ್ಟಿಸಿದ್ದು ಅಗ್ನಿಯಿಂದ ಮತ್ತು ಅವರನ್ನು ಸೃಷ್ಟಿಸಿದ್ದು ಜೇಡಿಮಣ್ಣಿನಿಂದ.” info
التفاسير:

external-link copy
13 : 7

قَالَ فَاهْبِطْ مِنْهَا فَمَا یَكُوْنُ لَكَ اَنْ تَتَكَبَّرَ فِیْهَا فَاخْرُجْ اِنَّكَ مِنَ الصّٰغِرِیْنَ ۟

ಅಲ್ಲಾಹು ಹೇಳಿದನು: “ಇಲ್ಲಿಂದ ಇಳಿದುಹೋಗು. ಇಲ್ಲಿ ನಿನಗೆ ಅಹಂಕಾರದಿಂದ ವರ್ತಿಸಲು ಅಧಿಕಾರವಿಲ್ಲ. ಹೊರಡು! ನಿಶ್ಚಯವಾಗಿಯೂ ನೀನು ಅಪಮಾನಿತರಲ್ಲಿ ಸೇರಿದವನಾಗಿರುವೆ.” info
التفاسير:

external-link copy
14 : 7

قَالَ اَنْظِرْنِیْۤ اِلٰی یَوْمِ یُبْعَثُوْنَ ۟

ಅವನು ಹೇಳಿದನು: “ಅವರನ್ನು (ಮನುಷ್ಯರನ್ನು) ಜೀವ ನೀಡಿ ಎಬ್ಬಿಸುವ ದಿನದವರೆಗೆ ನನಗೆ ಕಾಲಾವಕಾಶ (ಆಯುಷ್ಯ) ನೀಡು.” info
التفاسير:

external-link copy
15 : 7

قَالَ اِنَّكَ مِنَ الْمُنْظَرِیْنَ ۟

ಅಲ್ಲಾಹು ಹೇಳಿದನು: “ನಿಶ್ಚಯವಾಗಿಯೂ ನೀನು ಕಾಲಾವಕಾಶ ನೀಡಲಾದವರಲ್ಲಿ ಸೇರಿರುವೆ.” info
التفاسير:

external-link copy
16 : 7

قَالَ فَبِمَاۤ اَغْوَیْتَنِیْ لَاَقْعُدَنَّ لَهُمْ صِرَاطَكَ الْمُسْتَقِیْمَ ۟ۙ

ಅವನು ಹೇಳಿದನು: “ನೀನು ನನ್ನನ್ನು ದಾರಿತಪ್ಪಿಸಿದ ಕಾರಣ ನಾನು ಖಂಡಿತ ನಿನ್ನ ನೇರಮಾರ್ಗದಲ್ಲಿ ಕುಳಿತು ಅವರಿಗಾಗಿ ಕಾಯುವೆನು. info
التفاسير:

external-link copy
17 : 7

ثُمَّ لَاٰتِیَنَّهُمْ مِّنْ بَیْنِ اَیْدِیْهِمْ وَمِنْ خَلْفِهِمْ وَعَنْ اَیْمَانِهِمْ وَعَنْ شَمَآىِٕلِهِمْ ؕ— وَلَا تَجِدُ اَكْثَرَهُمْ شٰكِرِیْنَ ۟

ನಂತರ ಅವರ ಮುಂಭಾಗದಿಂದ, ಅವರ ಹಿಂಭಾಗದಿಂದ, ಅವರ ಬಲಭಾಗದಿಂದ ಮತ್ತು ಅವರ ಎಡಭಾಗದಿಂದ ನಾನು ಖಂಡಿತ ಅವರ ಬಳಿಗೆ ಬರುವೆನು. ಅವರಲ್ಲಿ ಹೆಚ್ಚಿನವರನ್ನೂ ನೀನು ಕೃತಜ್ಞರಾಗಿ ಕಾಣಲಾರೆ.” info
التفاسير:

external-link copy
18 : 7

قَالَ اخْرُجْ مِنْهَا مَذْءُوْمًا مَّدْحُوْرًا ؕ— لَمَنْ تَبِعَكَ مِنْهُمْ لَاَمْلَـَٔنَّ جَهَنَّمَ مِنْكُمْ اَجْمَعِیْنَ ۟

ಅಲ್ಲಾಹು ಹೇಳಿದನು: “ಇಲ್ಲಿಂದ ಹೊರಡು! ನೀನು ಅಪಮಾನಿತನು ಮತ್ತು ತಿರಸ್ಕೃತನಾಗಿರುವೆ. ಅವರಲ್ಲಿ ಯಾರು ನಿನ್ನನ್ನು ಹಿಂಬಾಲಿಸುತ್ತಾರೋ, (ಅವರು ಸೇರಿದಂತೆ) ನಿಮ್ಮೆಲ್ಲರನ್ನೂ ನಾನು ನರಕದಲ್ಲಿ ತುಂಬಿಸುವೆನು.” info
التفاسير:

external-link copy
19 : 7

وَیٰۤاٰدَمُ اسْكُنْ اَنْتَ وَزَوْجُكَ الْجَنَّةَ فَكُلَا مِنْ حَیْثُ شِئْتُمَا وَلَا تَقْرَبَا هٰذِهِ الشَّجَرَةَ فَتَكُوْنَا مِنَ الظّٰلِمِیْنَ ۟

“ಓ ಆದಮ್! ನೀವು ಮತ್ತು ನಿಮ್ಮ ಪತ್ನಿ ಸ್ವರ್ಗದಲ್ಲಿ ವಾಸಿಸಿರಿ. ಅಲ್ಲಿ ನೀವುಇಚ್ಛಿಸುವ ಎಲ್ಲಾ ಕಡೆಗಳಿಂದಲೂ ತಿನ್ನಿರಿ. ಆದರೆ ಈ ಮರದ ಸಮೀಪಕ್ಕೆ ಹೋಗಬೇಡಿ. ಹೋದರೆ ನೀವು ಅಕ್ರಮಿಗಳಾಗಿ ಬಿಡುವಿರಿ.” info
التفاسير:

external-link copy
20 : 7

فَوَسْوَسَ لَهُمَا الشَّیْطٰنُ لِیُبْدِیَ لَهُمَا مَا وٗرِیَ عَنْهُمَا مِنْ سَوْاٰتِهِمَا وَقَالَ مَا نَهٰىكُمَا رَبُّكُمَا عَنْ هٰذِهِ الشَّجَرَةِ اِلَّاۤ اَنْ تَكُوْنَا مَلَكَیْنِ اَوْ تَكُوْنَا مِنَ الْخٰلِدِیْنَ ۟

(ಆಗ ಆ ಹಣ್ಣನ್ನು ತಿನ್ನುವ ಮೂಲಕ) ಅವರಿಂದ ಮರೆಯಾಗಿದ್ದ ಅವರ ಗುಹ್ಯಭಾಗಗಳನ್ನು ಬಹಿರಂಗಪಡಿಸುವುದಕ್ಕಾಗಿ ಶೈತಾನನು ಅವರಿಬ್ಬರಿಗೂ (ಆ ಹಣ್ಣು ತಿನ್ನುವಂತೆ) ದುಷ್ಪ್ರೇರಣೆ ಮಾಡಿದನು. ಅವನು ಹೇಳಿದನು: “ನೀವಿಬ್ಬರು ದೇವದೂತರಾಗುವಿರಿ ಅಥವಾ ಇಲ್ಲಿ (ಸ್ವರ್ಗದಲ್ಲಿ) ಶಾಶ್ವತವಾಗಿ ವಾಸಿಸುವಿರಿ ಎಂಬ ಕಾರಣದಿಂದಲೇ ನಿಮ್ಮ ಪರಿಪಾಲಕನು ನಿಮ್ಮನ್ನು ಈ ಮರದಿಂದ ತಡೆದಿದ್ದಾನೆ.” info
التفاسير:

external-link copy
21 : 7

وَقَاسَمَهُمَاۤ اِنِّیْ لَكُمَا لَمِنَ النّٰصِحِیْنَ ۟ۙ

“ನಿಶ್ಚಯವಾಗಿಯೂ ನಾನು ನಿಮ್ಮ ಹಿತೈಷಿಯಾಗಿದ್ದೇನೆ” ಎಂದು ಅವನು ಪ್ರತಿಜ್ಞೆ ಮಾಡಿ ಹೇಳಿದನು. info
التفاسير:

external-link copy
22 : 7

فَدَلّٰىهُمَا بِغُرُوْرٍ ۚ— فَلَمَّا ذَاقَا الشَّجَرَةَ بَدَتْ لَهُمَا سَوْاٰتُهُمَا وَطَفِقَا یَخْصِفٰنِ عَلَیْهِمَا مِنْ وَّرَقِ الْجَنَّةِ ؕ— وَنَادٰىهُمَا رَبُّهُمَاۤ اَلَمْ اَنْهَكُمَا عَنْ تِلْكُمَا الشَّجَرَةِ وَاَقُلْ لَّكُمَاۤ اِنَّ الشَّیْطٰنَ لَكُمَا عَدُوٌّ مُّبِیْنٌ ۟

ಹೀಗೆ ಅವನು ಮೋಸದಿಂದ ಅವರಿಬ್ಬರನ್ನು ಕೆಳಗಿಳಿಸಿದನು. ಅವರಿಬ್ಬರು ಆ ಮರದ ಹಣ್ಣಿನ ರುಚಿಯನ್ನು ಸವಿಯುತ್ತಿದ್ದಂತೆ ಅವರಿಗೆ ಅವರ ಗುಹ್ಯಭಾಗಗಳು ಬಹಿರಂಗವಾದವು. ಸ್ವರ್ಗದ ಎಲೆಗಳಿಂದ ಅವರಿಬ್ಬರೂ ತಮ್ಮ ದೇಹಗಳನ್ನು ಮುಚ್ಚತೊಡಗಿದರು. ಆಗ ಅವರನ್ನು ಕರೆದು ಅವರ ಪರಿಪಾಲಕ (ಅಲ್ಲಾಹು) ಹೇಳಿದನು: “ಆ ಮರದಿಂದ ನಾನು ನಿಮ್ಮನ್ನು ತಡೆಯಲಿಲ್ಲವೇ? ನಿಶ್ಚಯವಾಗಿಯೂ ಶೈತಾನನು ನಿಮ್ಮ ಪ್ರತ್ಯಕ್ಷ ಶತ್ರುವೆಂದು ನಾನು ನಿಮಗೆ ಹೇಳಲಿಲ್ಲವೇ?” info
التفاسير: