Përkthimi i kuptimeve të Kuranit Fisnik - Përkthimi kanadezisht - Hamza Betur

Numri i faqes:close

external-link copy
142 : 2

سَیَقُوْلُ السُّفَهَآءُ مِنَ النَّاسِ مَا وَلّٰىهُمْ عَنْ قِبْلَتِهِمُ الَّتِیْ كَانُوْا عَلَیْهَا ؕ— قُلْ لِّلّٰهِ الْمَشْرِقُ وَالْمَغْرِبُ ؕ— یَهْدِیْ مَنْ یَّشَآءُ اِلٰی صِرَاطٍ مُّسْتَقِیْمٍ ۟

“ಇವರು ಇದುವರೆಗೆ ಯಾವ ಕಿಬ್ಲದಲ್ಲಿದ್ದರೋ ಅದರಿಂದ ಇವರನ್ನು ತಿರುಗಿಸಿದ್ದೇನು?” ಎಂದು ಸದ್ಯವೇ ಜನರಲ್ಲಿರುವ ಕೆಲವು ತಿಳಿಗೇಡಿಗಳು ಕೇಳುವರು. ಹೇಳಿರಿ: “ಪೂರ್ವ ಮತ್ತು ಪಶ್ಚಿಮಗಳು ಅಲ್ಲಾಹನಿಗೆ ಸೇರಿದ್ದು. ಅವನು ಇಚ್ಛಿಸುವವರಿಗೆ ಅವನು ನೇರ ಮಾರ್ಗವನ್ನು ತೋರಿಸುತ್ತಾನೆ.” info
التفاسير:

external-link copy
143 : 2

وَكَذٰلِكَ جَعَلْنٰكُمْ اُمَّةً وَّسَطًا لِّتَكُوْنُوْا شُهَدَآءَ عَلَی النَّاسِ وَیَكُوْنَ الرَّسُوْلُ عَلَیْكُمْ شَهِیْدًا ؕ— وَمَا جَعَلْنَا الْقِبْلَةَ الَّتِیْ كُنْتَ عَلَیْهَاۤ اِلَّا لِنَعْلَمَ مَنْ یَّتَّبِعُ الرَّسُوْلَ مِمَّنْ یَّنْقَلِبُ عَلٰی عَقِبَیْهِ ؕ— وَاِنْ كَانَتْ لَكَبِیْرَةً اِلَّا عَلَی الَّذِیْنَ هَدَی اللّٰهُ ؕ— وَمَا كَانَ اللّٰهُ لِیُضِیْعَ اِیْمَانَكُمْ ؕ— اِنَّ اللّٰهَ بِالنَّاسِ لَرَءُوْفٌ رَّحِیْمٌ ۟

ಈ ರೀತಿ ನಾವು ನಿಮ್ಮನ್ನು ಒಂದು ಮಧ್ಯಮ ಸಮುದಾಯವನ್ನಾಗಿ ಮಾಡಿದೆವು; ನೀವು ಜನರಿಗೆ ಸಾಕ್ಷಿಗಳಾಗಲು ಮತ್ತು ಸಂದೇಶವಾಹಕರು ನಿಮಗೆ ಸಾಕ್ಷಿಯಾಗಲು. ನೀವು (ಮೊದಲು) ಯಾವ ಕಿಬ್ಲದಲ್ಲಿದ್ದಿರೋ ಅದನ್ನು ನಾವು ನಿಶ್ಚಯಿಸಿದ್ದು, ಸಂದೇಶವಾಹಕರನ್ನು ಹಿಂಬಾಲಿಸುವವರು ಯಾರು ಮತ್ತು ತಮ್ಮ ಹಿಮ್ಮಡಿಗಳಲ್ಲಿ ತಿರುಗಿ ನಡೆಯುವವರು ಯಾರು ಎಂದು ತಿಳಿಯುವುದಕ್ಕಾಗಿ ಮಾತ್ರ. ಅಲ್ಲಾಹು ಸನ್ಮಾರ್ಗದಲ್ಲಿ ಸೇರಿಸಿದವರ ಹೊರತು ಇತರೆಲ್ಲರಿಗೂ ಅದು ಬಹಳ ಕಷ್ಟದ ಕೆಲಸವಾಗಿದೆ. ಅಲ್ಲಾಹು ನಿಮ್ಮ ವಿಶ್ವಾಸವನ್ನು ವ್ಯರ್ಥಗೊಳಿಸುವುದಿಲ್ಲ. ನಿಶ್ಚಯವಾಗಿಯೂ ಅಲ್ಲಾಹು ಮನುಷ್ಯರೊಂದಿಗೆ ಅನುಕಂಪವುಳ್ಳವನು ಮತ್ತು ಕರುಣೆಯುಳ್ಳವನಾಗಿದ್ದಾನೆ. info
التفاسير:

external-link copy
144 : 2

قَدْ نَرٰی تَقَلُّبَ وَجْهِكَ فِی السَّمَآءِ ۚ— فَلَنُوَلِّیَنَّكَ قِبْلَةً تَرْضٰىهَا ۪— فَوَلِّ وَجْهَكَ شَطْرَ الْمَسْجِدِ الْحَرَامِ ؕ— وَحَیْثُ مَا كُنْتُمْ فَوَلُّوْا وُجُوْهَكُمْ شَطْرَهٗ ؕ— وَاِنَّ الَّذِیْنَ اُوْتُوا الْكِتٰبَ لَیَعْلَمُوْنَ اَنَّهُ الْحَقُّ مِنْ رَّبِّهِمْ ؕ— وَمَا اللّٰهُ بِغَافِلٍ عَمَّا یَعْمَلُوْنَ ۟

ನಿಮ್ಮ ಮುಖವು ಪದೇ ಪದೇ ಆಕಾಶದ ಕಡೆಗೆ ತಿರುಗುವುದನ್ನು ನಾವು ನೋಡುತ್ತಿದ್ದೇವೆ. ಆದ್ದರಿಂದ ಈಗ ನಾವು ನಿಮ್ಮನ್ನು ನೀವು ಇಷ್ಟಪಡುವ ಕಿಬ್ಲದ ಕಡೆಗೆ ತಿರುಗಿಸುತ್ತೇವೆ.[1] ನೀವು ನಿಮ್ಮ ಮುಖವನ್ನು ಮಸ್ಜಿದುಲ್ ಹರಾಮ್‍ನ ಕಡೆಗೆ ತಿರುಗಿಸಿರಿ; ಮತ್ತು ನೀವು (ಮುಸ್ಲಿಮರು) ಎಲ್ಲೇ ಇದ್ದರೂ ನಿಮ್ಮ ಮುಖಗಳನ್ನು ಕೂಡ ಅದರ ಕಡೆಗೆ ತಿರುಗಿಸಿರಿ. ನಿಶ್ಚಯವಾಗಿಯೂ, ಇದು ನಿಮ್ಮ ಪರಿಪಾಲಕನ (ಅಲ್ಲಾಹನ) ಕಡೆಯ ಸತ್ಯವೆಂದು ಗ್ರಂಥ ನೀಡಲಾದವರಿಗೆ ಚೆನ್ನಾಗಿ ತಿಳಿದಿದೆ.[2] ಅವರು ಮಾಡುತ್ತಿರುವ ಕರ್ಮಗಳ ಕುರಿತು ಅಲ್ಲಾಹು ತಿಳಿಯದವನಲ್ಲ. info

[1] ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಮಕ್ಕಾದಿಂದ ಮದೀನಕ್ಕೆ ವಲಸೆ ಬಂದಾಗ, ಸುಮಾರು ಒಂದು ತಿಂಗಳ ಕಾಲ ಬೈತುಲ್ ಮುಕದ್ದಿಸ್‌ಗೆ ಅಭಿಮುಖವಾಗಿ ನಿಂತು ನಮಾಝ್ ನಿರ್ವಹಿಸುವುದನ್ನು ಮುಂದುವರಿಸಿದರು. ಅವರು ಕಾಬಾಲಯಕ್ಕೆ ತಿರುಗಿ ನಿಂತು ನಮಾಝ್ ನಿರ್ವಹಿಸಲು ಬಯಸುತ್ತಿದ್ದರು. ಅದಕ್ಕಾಗಿ ಅವರು ಪ್ರಾರ್ಥಿಸುತ್ತಿದ್ದರು ಮತ್ತು ಯಾವುದಾದರೂ ಸಂದೇಶ ಬರಬಹುದೇ ಎಂದು ಪದೇ ಪದೇ ಆಕಾಶದ ಕಡೆಗೆ ನೋಡುತ್ತಿದ್ದರು. ಕೊನೆಗೆ ಅಲ್ಲಾಹು ಕಿಬ್ಲ ಬದಲಾವಣೆಯ ಬಗ್ಗೆ ವಚನವನ್ನು ಅವತೀರ್ಣಗೊಳಿಸಿದನು. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಕಿಬ್ಲ ಬದಲಾವಣೆ ಮಾಡಿದಾಗ ಯಹೂದಿಗಳು ಮತ್ತು ಕಪಟ ವಿಶ್ವಾಸಿಗಳು ಗದ್ದಲವೆಬ್ಬಿಸಿದರು. ನಮಾಝ್ ಅಲ್ಲಾಹನ ಆರಾಧನೆಯಾಗಿದೆ ಮತ್ತು ಅಲ್ಲಾಹು ನಿಶ್ಚಯಿಸಿದ ದಿಕ್ಕಿಗೆ ತಿರುಗಿ ಅದನ್ನು ನಿರ್ವಹಿಸಬೇಕಾಗಿದೆ. ಪೂರ್ವ ಮತ್ತು ಪಶ್ಚಿಮ ದಿಕ್ಕುಗಳು ಅಲ್ಲಾಹನಿಗೆ ಸೇರಿದ್ದು. ಅವನು ಯಾವ ದಿಕ್ಕಿಗೆ ತಿರುಗಬೇಕೆಂದು ಆದೇಶಿಸಿದನೋ ಆ ದಿಕ್ಕಿಗೆ ತಿರುಗಿ ನಮಾಝ್ ನಿರ್ವಹಿಸುವುದು ದಾಸನ ಕರ್ತವ್ಯ. ಕಿಬ್ಲ ಬದಲಾವಣೆಯ ಆದೇಶ ಅಸರ್ ನಮಾಝ್‌ನ ಸಂದರ್ಭದಲ್ಲಿ ಬಂದಿತ್ತು ಮತ್ತು ಕಾಬಾಲಯಕ್ಕೆ ತಿರುಗಿ ಅಸರ್ ನಮಾಝ್ ನಿರ್ವಹಿಸಲಾಯಿತು. [2] ಅಂತಿಮ ಪ್ರವಾದಿಯ ಕಿಬ್ಲ ಕಾಬಾ ಆಗಿದೆ ಎಂದು ಯಹೂದಿಗಳ ಗ್ರಂಥದಲ್ಲಿ ಸ್ಪಷ್ಟ ಸೂಚನೆಗಳಿದ್ದವು. ಅವರಿಗೆ ಇದು ಸ್ಪಷ್ಟವಾಗಿ ತಿಳಿದಿತ್ತು. ಆದರೂ ತಮ್ಮ ಅಹಂಕಾರ ಮತ್ತು ಅಸೂಯೆಯ ನಿಮಿತ್ತ ಅದನ್ನು ಸ್ವೀಕರಿಸಲು ಅವರು ಹಿಂದೇಟು ಹಾಕಿದರು.

التفاسير:

external-link copy
145 : 2

وَلَىِٕنْ اَتَیْتَ الَّذِیْنَ اُوْتُوا الْكِتٰبَ بِكُلِّ اٰیَةٍ مَّا تَبِعُوْا قِبْلَتَكَ ۚ— وَمَاۤ اَنْتَ بِتَابِعٍ قِبْلَتَهُمْ ۚ— وَمَا بَعْضُهُمْ بِتَابِعٍ قِبْلَةَ بَعْضٍ ؕ— وَلَىِٕنِ اتَّبَعْتَ اَهْوَآءَهُمْ مِّنْ بَعْدِ مَا جَآءَكَ مِنَ الْعِلْمِ ۙ— اِنَّكَ اِذًا لَّمِنَ الظّٰلِمِیْنَ ۟ۘ

ಗ್ರಂಥ ನೀಡಲಾದವರಿಗೆ ನೀವು ಎಲ್ಲಾ ರೀತಿಯ ಪುರಾವೆಗಳನ್ನು ತಂದು ತೋರಿಸಿದರೂ ಅವರು ನಿಮ್ಮ ಕಿಬ್ಲವನ್ನು ಹಿಂಬಾಲಿಸುವುದಿಲ್ಲ. ನೀವು ಕೂಡ ಅವರ ಕಿಬ್ಲವನ್ನು ಅಂಗೀಕರಿಸುವುದಿಲ್ಲ. ಅವರಲ್ಲಿ ಒಬ್ಬರು ಇನ್ನೊಬ್ಬರ ಕಿಬ್ಲವನ್ನು ಅಂಗೀಕರಿಸುವುದಿಲ್ಲ. ನಿಮಗೆ ಜ್ಞಾನವು ಬಂದ ಬಳಿಕ ನೀವೇನಾದರೂ ಅವರ ಸ್ವೇಚ್ಛೆಗಳನ್ನು ಹಿಂಬಾಲಿಸಿದರೆ, ನಿಶ್ಚಯವಾಗಿಯೂ ನೀವು ಅಕ್ರಮಿಗಳಲ್ಲಿ ಸೇರುವಿರಿ. info
التفاسير: