அல்குர்ஆன் மொழிபெயர்ப்பு - கன்னட மொழிபெயர்ப்பு - ஹம்ஸா பத்தூர்

external-link copy
4 : 60

قَدْ كَانَتْ لَكُمْ اُسْوَةٌ حَسَنَةٌ فِیْۤ اِبْرٰهِیْمَ وَالَّذِیْنَ مَعَهٗ ۚ— اِذْ قَالُوْا لِقَوْمِهِمْ اِنَّا بُرَءٰٓؤُا مِنْكُمْ وَمِمَّا تَعْبُدُوْنَ مِنْ دُوْنِ اللّٰهِ ؗ— كَفَرْنَا بِكُمْ وَبَدَا بَیْنَنَا وَبَیْنَكُمُ الْعَدَاوَةُ وَالْبَغْضَآءُ اَبَدًا حَتّٰی تُؤْمِنُوْا بِاللّٰهِ وَحْدَهٗۤ اِلَّا قَوْلَ اِبْرٰهِیْمَ لِاَبِیْهِ لَاَسْتَغْفِرَنَّ لَكَ وَمَاۤ اَمْلِكُ لَكَ مِنَ اللّٰهِ مِنْ شَیْءٍ ؕ— رَبَّنَا عَلَیْكَ تَوَكَّلْنَا وَاِلَیْكَ اَنَبْنَا وَاِلَیْكَ الْمَصِیْرُ ۟

ನಿಮಗೆ ಇಬ್ರಾಹೀಮ‌ರಲ್ಲಿ ಮತ್ತು ಅವರ ಸಂಗಡಿಗರಲ್ಲಿ ಅತ್ಯುತ್ತಮ ಮಾದರಿಯಿದೆ. ಅವರು ತಮ್ಮ ಜನರೊಂದಿಗೆ ಹೇಳಿದ ಸಂದರ್ಭ: “ನಿಶ್ಚಯವಾಗಿಯೂ ನಾವು ನಿಮ್ಮಿಂದ ಮತ್ತು ಅಲ್ಲಾಹನನ್ನು ಬಿಟ್ಟು ನೀವು ಆರಾಧಿಸುತ್ತಿರುವ ದೇವರುಗಳಿಂದ ಸಂಪೂರ್ಣ ದೂರವಾಗಿದ್ದೇವೆ. ನಾವು ನಿಮ್ಮ (ವಿಶ್ವಾಸ ನಂಬಿಕೆಗಳನ್ನು) ನಿಷೇಧಿಸಿದ್ದೇವೆ. ನೀವು ಅಲ್ಲಾಹನಲ್ಲಿ ಮಾತ್ರ ವಿಶ್ವಾಸವಿಡುವ ತನಕ ನಮ್ಮ ಮತ್ತು ನಿಮ್ಮ ನಡುವೆ ಶಾಶ್ವತ ವೈರ ಹಾಗೂ ವಿದ್ವೇಷವು ಬಹಿರಂಗವಾಗಿಬಿಟ್ಟಿದೆ.” ಆದರೆ ಇಬ್ರಾಹೀಮರು ತಮ್ಮ ತಂದೆಯೊಡನೆ ಹೇಳಿದ ಈ ಮಾತುಗಳು ಇದಕ್ಕೆ ಹೊರತಾಗಿವೆ:[1] “ನಾನು ನಿಮಗೋಸ್ಕರ ಅಲ್ಲಾಹನಲ್ಲಿ ಖಂಡಿತ ಕ್ಷಮೆಯಾಚಿಸುತ್ತೇನೆ. ಅಲ್ಲಾಹನ ಮುಂದೆ ನಿಮಗೋಸ್ಕರ ಏನೂ ಮಾಡಲು ನನಗೆ ಸಾಧ್ಯವಿಲ್ಲ.” ಓ ನಮ್ಮ ಪರಿಪಾಲಕನೇ! ನಾವು ನಿನ್ನಲ್ಲಿ ಭರವಸೆಯಿಟ್ಟಿದ್ದೇವೆ ಮತ್ತು ನಿನ್ನ ಕಡೆಗೆ ಮರಳಿದ್ದೇವೆ. ಮರಳಬೇಕಾದುದು ನಿನ್ನ ಕಡೆಗೇ ಆಗಿದೆ. info

[1] ಅಂದರೆ “ನಾನು ನಿಮಗೋಸ್ಕರ ಅಲ್ಲಾಹನಲ್ಲಿ ಖಂಡಿತ ಕ್ಷಮೆಯಾಚಿಸುತ್ತೇನೆ” ಎಂದು ಇಬ್ರಾಹೀಮರು (ಅವರ ಮೇಲೆ ಶಾಂತಿಯಿರಲಿ) ಹೇಳಿದ ಮಾತಿನಲ್ಲಿ ಸತ್ಯವಿಶ್ವಾಸಿಗಳಿಗೆ ಮಾದರಿಯಿಲ್ಲ.

التفاسير: