పవిత్ర ఖురాన్ యొక్క భావార్థాల అనువాదం - కన్నడ అనువాదం - హమ్జా బత్తూర్

పేజీ నెంబరు: 159:151 close

external-link copy
74 : 7

وَاذْكُرُوْۤا اِذْ جَعَلَكُمْ خُلَفَآءَ مِنْ بَعْدِ عَادٍ وَّبَوَّاَكُمْ فِی الْاَرْضِ تَتَّخِذُوْنَ مِنْ سُهُوْلِهَا قُصُوْرًا وَّتَنْحِتُوْنَ الْجِبَالَ بُیُوْتًا ۚ— فَاذْكُرُوْۤا اٰلَآءَ اللّٰهِ وَلَا تَعْثَوْا فِی الْاَرْضِ مُفْسِدِیْنَ ۟

ಆದ್ ಗೋತ್ರದವರ ಬಳಿಕ ಅವನು ನಿಮ್ಮನ್ನು ಉತ್ತರಾಧಿಕಾರಿಗಳನ್ನಾಗಿ ಮಾಡಿದ್ದನ್ನು ಸ್ಮರಿಸಿರಿ. ಅವನು ನಿಮಗೆ ಭೂಮಿಯಲ್ಲಿ ವಾಸ್ತವ್ಯವನ್ನು ಮಾಡಿಕೊಟ್ಟನು. ನೀವು ಭೂಮಿಯ ಸಮತಟ್ಟು ಪ್ರದೇಶಗಳಲ್ಲಿ ಸೌಧಗಳನ್ನು ನಿರ್ಮಿಸುತ್ತೀರಿ ಮತ್ತು ಬೆಟ್ಟಗಳಲ್ಲಿ ಮನೆಗಳನ್ನು ಕೊರೆಯುತ್ತೀರಿ. ಅಲ್ಲಾಹನ ಅನುಗ್ರಹಗಳನ್ನು ಸ್ಮರಿಸಿರಿ. ಭೂಮಿಯಲ್ಲಿ ಕಿಡಿಗೇಡಿತನ ಮಾಡುತ್ತಾ ಅಲ್ಲಾಹನ ಆಜ್ಞೋಲ್ಲಂಘನೆ ಮಾಡಬೇಡಿ.” info
التفاسير:

external-link copy
75 : 7

قَالَ الْمَلَاُ الَّذِیْنَ اسْتَكْبَرُوْا مِنْ قَوْمِهٖ لِلَّذِیْنَ اسْتُضْعِفُوْا لِمَنْ اٰمَنَ مِنْهُمْ اَتَعْلَمُوْنَ اَنَّ صٰلِحًا مُّرْسَلٌ مِّنْ رَّبِّهٖ ؕ— قَالُوْۤا اِنَّا بِمَاۤ اُرْسِلَ بِهٖ مُؤْمِنُوْنَ ۟

ಅವರ ಜನರಲ್ಲಿದ್ದ ಅಹಂಕಾರಿಗಳಾದ ಮುಖಂಡರು ಸ್ವಾಲಿಹರಲ್ಲಿ ವಿಶ್ವಾಸವಿಟ್ಟ ಬಲಹೀನರೊಡನೆ ಹೇಳಿದರು: “ಸ್ವಾಲಿಹರನ್ನು ಅವರ ಪರಿಪಾಲಕನ (ಅಲ್ಲಾಹನ) ಬಳಿಯಿಂದ ಕಳುಹಿಸಲಾಗಿದೆಯೆಂದು ನೀವು ನಿಜವಾಗಿಯೂ ನಂಬುತ್ತೀರಾ?” ಅವರು ಉತ್ತರಿಸಿದರು: “ಅವರೊಡನೆ ಏನು ಕಳುಹಿಸಲಾಗಿದೆಯೋ ಅದರಲ್ಲಿ ನಿಶ್ಚಯವಾಗಿಯೂ ನಾವು ವಿಶ್ವಾಸವಿಟ್ಟಿದ್ದೇವೆ.” info
التفاسير:

external-link copy
76 : 7

قَالَ الَّذِیْنَ اسْتَكْبَرُوْۤا اِنَّا بِالَّذِیْۤ اٰمَنْتُمْ بِهٖ كٰفِرُوْنَ ۟

ಅಹಂಕಾರಿಗಳು ಹೇಳಿದರು: “ನೀವು ಯಾವುದರಲ್ಲಿ ವಿಶ್ವಾಸವಿಟ್ಟಿದ್ದೀರೋ ಅದನ್ನು ನಾವು ಸಂಪೂರ್ಣವಾಗಿ ನಿಷೇಧಿಸಿದ್ದೇವೆ.” info
التفاسير:

external-link copy
77 : 7

فَعَقَرُوا النَّاقَةَ وَعَتَوْا عَنْ اَمْرِ رَبِّهِمْ وَقَالُوْا یٰصٰلِحُ ائْتِنَا بِمَا تَعِدُنَاۤ اِنْ كُنْتَ مِنَ الْمُرْسَلِیْنَ ۟

ನಂತರ ಅವರು ಆ ಒಂಟೆಯನ್ನು ಕೊಂದು ಅವರ ಪರಿಪಾಲಕನ (ಅಲ್ಲಾಹನ) ಆಜ್ಞೆಯನ್ನು ಉಲ್ಲಂಘಿಸಿದರು. ಅವರು ಹೇಳಿದರು: “ಓ ಸ್ವಾಲಿಹ್! ನೀನು ನಮ್ಮನ್ನು ಹೆದರಿಸುತ್ತಿದ್ದ ಆ ಶಿಕ್ಷೆಯನ್ನು ತಂದು ತೋರಿಸು. ನೀನು (ನಿಜವಾಗಿಯೂ) ಸಂದೇಶವಾಹಕನಾಗಿದ್ದರೆ.” info
التفاسير:

external-link copy
78 : 7

فَاَخَذَتْهُمُ الرَّجْفَةُ فَاَصْبَحُوْا فِیْ دَارِهِمْ جٰثِمِیْنَ ۟

ಆಗ ಭೂಕಂಪವು ಅವರನ್ನು ಹಿಡಿದುಕೊಂಡಿತು. ಅವರು ಅವರ ಮನೆಗಳಲ್ಲಿಯೇ ಬೋರಲು ಬಿದ್ದು ಸತ್ತರು. info
التفاسير:

external-link copy
79 : 7

فَتَوَلّٰی عَنْهُمْ وَقَالَ یٰقَوْمِ لَقَدْ اَبْلَغْتُكُمْ رِسَالَةَ رَبِّیْ وَنَصَحْتُ لَكُمْ وَلٰكِنْ لَّا تُحِبُّوْنَ النّٰصِحِیْنَ ۟

ಅವರಿಂದ ತಿರುಗಿ ನಡೆಯುತ್ತಾ ಸ್ವಾಲಿಹ್ ಹೇಳಿದರು: “ಓ ನನ್ನ ಜನರೇ! ನಿಶ್ಚಯವಾಗಿಯೂ ನಾನು ನನ್ನ ಪರಿಪಾಲಕನ (ಅಲ್ಲಾಹನ) ಸಂದೇಶವನ್ನು ನಿಮಗೆ ತಲುಪಿಸಿದ್ದೇನೆ ಮತ್ತು ನಿಮಗೆ ಪ್ರಾಮಾಣಿಕವಾಗಿ ಉಪದೇಶ ಮಾಡಿದ್ದೇನೆ. ಆದರೆ ನೀವು ಉಪದೇಶ ಮಾಡುವವರನ್ನು ಇಷ್ಟಪಡುತ್ತಿರಲಿಲ್ಲ.” info
التفاسير:

external-link copy
80 : 7

وَلُوْطًا اِذْ قَالَ لِقَوْمِهٖۤ اَتَاْتُوْنَ الْفَاحِشَةَ مَا سَبَقَكُمْ بِهَا مِنْ اَحَدٍ مِّنَ الْعٰلَمِیْنَ ۟

ಲೂತರನ್ನು ಕೂಡ (ನಾವು ಕಳುಹಿಸಿದೆವು). ಅವರು ತಮ್ಮ ಜನರೊಡನೆ ಹೇಳಿದ ಸಂದರ್ಭ: “ಸರ್ವಲೋಕಗಳ ಜನರಲ್ಲಿ ಈ ತನಕ ಯಾರೂ ಮಾಡದ ನೀಚಕೃತ್ಯವನ್ನು ನೀವು ಮಾಡುತ್ತಿದ್ದೀರಾ? info
التفاسير:

external-link copy
81 : 7

اِنَّكُمْ لَتَاْتُوْنَ الرِّجَالَ شَهْوَةً مِّنْ دُوْنِ النِّسَآءِ ؕ— بَلْ اَنْتُمْ قَوْمٌ مُّسْرِفُوْنَ ۟

ನೀವು ಲೈಂಗಿಕ ತೃಷೆಯನ್ನು ತೀರಿಸಲು ಮಹಿಳೆಯರ ಬದಲು ಪುರುಷರ ಬಳಿಗೆ ಹೋಗುತ್ತಿದ್ದೀರಿ. ನೀವು ಎಲ್ಲೆ ಮೀರಿದ ಜನರಾಗಿದ್ದೀರಿ.” info
التفاسير: