แปล​ความหมาย​อัลกุรอาน​ - คำแปลภาษากันนาดา - โดยหัมซะฮ์ บะตูร

หมายเลข​หน้า​:close

external-link copy
107 : 10

وَاِنْ یَّمْسَسْكَ اللّٰهُ بِضُرٍّ فَلَا كَاشِفَ لَهٗۤ اِلَّا هُوَ ۚ— وَاِنْ یُّرِدْكَ بِخَیْرٍ فَلَا رَآدَّ لِفَضْلِهٖ ؕ— یُصِیْبُ بِهٖ مَنْ یَّشَآءُ مِنْ عِبَادِهٖ ؕ— وَهُوَ الْغَفُوْرُ الرَّحِیْمُ ۟

ಅಲ್ಲಾಹು ನಿಮಗೇನಾದರೂ ತೊಂದರೆ ನೀಡಿದರೆ, ಅದನ್ನು ಅವನ ಹೊರತು ನಿವಾರಿಸಲು ಯಾರಿಗೂ ಸಾಧ್ಯವಿಲ್ಲ. ಅವನು ನಿಮಗೇನಾದರೂ ಒಳಿತನ್ನು ಉದ್ದೇಶಿಸಿದರೆ, ಅವನ ಔದಾರ್ಯವನ್ನು ತಡೆಯಲು ಯಾರಿಗೂ ಸಾಧ್ಯವಿಲ್ಲ. ತನ್ನ ದಾಸರಲ್ಲಿ ಅವನು ಇಚ್ಛಿಸಿದವರಿಗೆ ಅದನ್ನು (ಔದಾರ್ಯವನ್ನು) ತಲುಪಿಸುತ್ತಾನೆ. ಅವನು ಕ್ಷಮಿಸುವವನು ಮತ್ತು ದಯೆ ತೋರುವವನಾಗಿದ್ದಾನೆ. info
التفاسير:

external-link copy
108 : 10

قُلْ یٰۤاَیُّهَا النَّاسُ قَدْ جَآءَكُمُ الْحَقُّ مِنْ رَّبِّكُمْ ۚ— فَمَنِ اهْتَدٰی فَاِنَّمَا یَهْتَدِیْ لِنَفْسِهٖ ۚ— وَمَنْ ضَلَّ فَاِنَّمَا یَضِلُّ عَلَیْهَا ؕ— وَمَاۤ اَنَا عَلَیْكُمْ بِوَكِیْلٍ ۟ؕ

ಹೇಳಿರಿ: “ಓ ಜನರೇ! ನಿಮ್ಮ ಪರಿಪಾಲಕನ (ಅಲ್ಲಾಹನ) ಕಡೆಯಿಂದ ನಿಮ್ಮ ಬಳಿಗೆ ಸತ್ಯವು ಬಂದಿದೆ. ಆದ್ದರಿಂದ ಯಾರಾದರೂ ಸನ್ಮಾರ್ಗವನ್ನು ಸ್ವೀಕರಿಸಿದರೆ ಅವನು ಅವನ ಒಳಿತಿಗಾಗಿಯೇ ಅದನ್ನು ಸ್ವೀಕರಿಸುತ್ತಾನೆ. ಯಾರಾದರೂ ದುರ್ಮಾರ್ಗವನ್ನು ಆರಿಸಿದರೆ ಅವನು ಅವನ ಕೆಡುಕಿಗಾಗಿಯೇ ಅದನ್ನು ಆರಿಸುತ್ತಾನೆ. ನನಗೆ ನಿಮ್ಮ ಮೇಲೆ ಯಾವುದೇ ಅಧಿಕಾರವಿಲ್ಲ.” info
التفاسير:

external-link copy
109 : 10

وَاتَّبِعْ مَا یُوْحٰۤی اِلَیْكَ وَاصْبِرْ حَتّٰی یَحْكُمَ اللّٰهُ ۚ— وَهُوَ خَیْرُ الْحٰكِمِیْنَ ۟۠

ನಿಮಗೆ ದೇವವಾಣಿಯಾಗಿ ನೀಡಲಾಗುವುದನ್ನು ಅನುಸರಿಸಿರಿ ಮತ್ತು ಅಲ್ಲಾಹು ತೀರ್ಪು ನೀಡುವ ತನಕ ತಾಳ್ಮೆಯಿಂದಿರಿ. ತೀರ್ಪು ನೀಡುವವರಲ್ಲಿ ಅವನು ಅತಿಶ್ರೇಷ್ಠನಾಗಿದ್ದಾನೆ. info
التفاسير: