แปล​ความหมาย​อัลกุรอาน​ - คำแปลภาษากันนาดา - โดยหัมซะฮ์ บะตูร

หมายเลข​หน้า​:close

external-link copy
41 : 36

وَاٰیَةٌ لَّهُمْ اَنَّا حَمَلْنَا ذُرِّیَّتَهُمْ فِی الْفُلْكِ الْمَشْحُوْنِ ۟ۙ

ನಾವು ಅವರ ಸಂತಾನವನ್ನು ತುಂಬಿ ತುಳುಕುವ ನಾವೆಯಲ್ಲಿ ಹೊತ್ತು ಸಾಗಿಸಿದ್ದು ಅವರಿಗೊಂದು ದೃಷ್ಟಾಂತವಾಗಿದೆ. info
التفاسير:

external-link copy
42 : 36

وَخَلَقْنَا لَهُمْ مِّنْ مِّثْلِهٖ مَا یَرْكَبُوْنَ ۟

ಅವರು ಸವಾರಿ ಮಾಡಲು ಬಳಸುವ ಇಂತಹ ಅನೇಕ ವಸ್ತುಗಳನ್ನು ನಾವು ಸೃಷ್ಟಿಸಿದ್ದೇವೆ. info
التفاسير:

external-link copy
43 : 36

وَاِنْ نَّشَاْ نُغْرِقْهُمْ فَلَا صَرِیْخَ لَهُمْ وَلَا هُمْ یُنْقَذُوْنَ ۟ۙ

ನಾವು ಇಚ್ಛಿಸಿದರೆ ಅವರನ್ನು ಮುಳುಗಿಸಿ ಬಿಡುವೆವು. ಆಗ ಅವರ ಕೂಗನ್ನು ಕೇಳುವವರು ಯಾರೂ ಇರಲಾರರು. ಅವರು ಸ್ವತಃ ರಕ್ಷಣೆಯನ್ನೂ ಪಡೆಯಲಾರರು. info
التفاسير:

external-link copy
44 : 36

اِلَّا رَحْمَةً مِّنَّا وَمَتَاعًا اِلٰی حِیْنٍ ۟

ಆದರೆ ನಾವು ನಮ್ಮ ಕಡೆಯ ದಯೆಯಿಂದ ಅವರನ್ನು ರಕ್ಷಿಸುತ್ತೇವೆ ಮತ್ತು ಒಂದು ನಿಶ್ಚಿತ ಕಾಲದವರೆಗೆ ಅವರಿಗೆ ಸವಲತ್ತುಗಳನ್ನು ನೀಡುತ್ತೇವೆ. info
التفاسير:

external-link copy
45 : 36

وَاِذَا قِیْلَ لَهُمُ اتَّقُوْا مَا بَیْنَ اَیْدِیْكُمْ وَمَا خَلْفَكُمْ لَعَلَّكُمْ تُرْحَمُوْنَ ۟

“ಮುಂದೆ ಉಂಟಾಗಲಿರುವ ಮತ್ತು ಈಗಾಗಲೇ ಉಂಟಾಗಿರುವ ಪಾಪಗಳ ಬಗ್ಗೆ ಎಚ್ಚರವಾಗಿರಿ; ನಿಮಗೆ ದಯೆ ತೋರಲಾಗುವುದಕ್ಕಾಗಿ” ಎಂದು ಅವರೊಡನೆ ಹೇಳಲಾದರೆ (ಅವರು ಅದನ್ನು ನಿರ್ಲಕ್ಷಿಸುತ್ತಾರೆ). info
التفاسير:

external-link copy
46 : 36

وَمَا تَاْتِیْهِمْ مِّنْ اٰیَةٍ مِّنْ اٰیٰتِ رَبِّهِمْ اِلَّا كَانُوْا عَنْهَا مُعْرِضِیْنَ ۟

ಅವರ ಪರಿಪಾಲಕನ (ಅಲ್ಲಾಹನ) ಕಡೆಯ ದೃಷ್ಟಾಂತಗಳಲ್ಲಿ ಯಾವುದೇ ದೃಷ್ಟಾಂತವು ಅವರ ಬಳಿಗೆ ಬಂದರೂ ಅವರು ಅದನ್ನು ನಿರ್ಲಕ್ಷಿಸಿ ವಿಮುಖರಾಗುತ್ತಿದ್ದರು. info
التفاسير:

external-link copy
47 : 36

وَاِذَا قِیْلَ لَهُمْ اَنْفِقُوْا مِمَّا رَزَقَكُمُ اللّٰهُ ۙ— قَالَ الَّذِیْنَ كَفَرُوْا لِلَّذِیْنَ اٰمَنُوْۤا اَنُطْعِمُ مَنْ لَّوْ یَشَآءُ اللّٰهُ اَطْعَمَهٗۤ ۖۗ— اِنْ اَنْتُمْ اِلَّا فِیْ ضَلٰلٍ مُّبِیْنٍ ۟

“ಅಲ್ಲಾಹು ನಿಮಗೆ ಒದಗಿಸಿದ ಸಂಪತ್ತಿನಿಂದ ಖರ್ಚು ಮಾಡಿರಿ”[1] ಎಂದು ಅವರೊಡನೆ ಹೇಳಲಾದರೆ ಸತ್ಯನಿಷೇಧಿಗಳು ಸತ್ಯವಿಶ್ವಾಸಿಗಳೊಡನೆ ಹೇಳುತ್ತಾರೆ: “ಅಲ್ಲಾಹು ಇಚ್ಛಿಸಿದರೆ ಅವನೇ ಆಹಾರ ನೀಡಬಹುದಾದ ಈ ಜನರಿಗೆ ನಾವೇಕೆ ಆಹಾರ ನೀಡಬೇಕು? ನಿಜಕ್ಕೂ ನೀವು ಸ್ಪಷ್ಟ ದುರ್ಮಾರ್ಗದಲ್ಲಿದ್ದೀರಿ.”[2] info

[1] ಅಂದರೆ ಬಡವರು, ನಿರ್ಗತಿಕರು ಮುಂತಾದವರಿಗೆ ದಾನ ಮಾಡಿರಿ.
[2] ಅವರು ಬಡವರಾಗಿರಬೇಕು ಎಂಬುದು ಅಲ್ಲಾಹನ ನಿರ್ಧಾರವಾಗಿದೆ. ಅವನು ಇಚ್ಛಿಸುತ್ತಿದ್ದರೆ ಅವರನ್ನು ಶ್ರೀಮಂತರನ್ನಾಗಿ ಮಾಡುತ್ತಿದ್ದನು. ನಾವು ಅವರಿಗೆ ದಾನ ಮಾಡಬೇಕೆಂದು ಹೇಳುವುದು ಅಲ್ಲಾಹನ ನಿರ್ಧಾರಕ್ಕೆ ವಿರುದ್ಧವಾಗುತ್ತದೆ. ಇದು ಸ್ಪಷ್ಟ ದುರ್ಮಾರ್ಗವಾಗಿದೆ ಎಂದು ಅವರು ಹೇಳುತ್ತಿದ್ದರು.

التفاسير:

external-link copy
48 : 36

وَیَقُوْلُوْنَ مَتٰی هٰذَا الْوَعْدُ اِنْ كُنْتُمْ صٰدِقِیْنَ ۟

ಅವರು ಹೇಳುತ್ತಾರೆ: “ನೀವು ಸತ್ಯವಂತರಾಗಿದ್ದರೆ ಈ ವಾಗ್ದಾನವು ಯಾವಾಗ ನಿಜವಾಗುತ್ತದೆಂದು ಹೇಳಿರಿ.” info
التفاسير:

external-link copy
49 : 36

مَا یَنْظُرُوْنَ اِلَّا صَیْحَةً وَّاحِدَةً تَاْخُذُهُمْ وَهُمْ یَخِصِّمُوْنَ ۟

ಅವರು ಒಂದು ಮಹಾ ಚೀತ್ಕಾರವನ್ನು ಮಾತ್ರ ಕಾಯುತ್ತಿದ್ದಾರೆ. ಅವರು ಪರಸ್ಪರ ತರ್ಕಿಸುತ್ತಿರುವಾಗಲೇ ಅದು ಅವರನ್ನು ಹಿಡಿಯುವುದು. info
التفاسير:

external-link copy
50 : 36

فَلَا یَسْتَطِیْعُوْنَ تَوْصِیَةً وَّلَاۤ اِلٰۤی اَهْلِهِمْ یَرْجِعُوْنَ ۟۠

ಆಗ ಯಾವುದೇ ಉಯಿಲು ಮಾಡಲು ಅವರಿಗೆ ಸಾಧ್ಯವಾಗುವುದಿಲ್ಲ. ತಮ್ಮ ಮನೆಯವರ ಬಳಿಗೆ ಮರಳಲೂ ಸಾಧ್ಯವಾಗುವುದಿಲ್ಲ. info
التفاسير:

external-link copy
51 : 36

وَنُفِخَ فِی الصُّوْرِ فَاِذَا هُمْ مِّنَ الْاَجْدَاثِ اِلٰی رَبِّهِمْ یَنْسِلُوْنَ ۟

ಕಹಳೆಯಲ್ಲಿ ಊದಲಾಗುವುದು. ಆಗ ಅಗೋ! ಅವರು ಸಮಾಧಿಗಳಿಂದ ಎದ್ದು ತಮ್ಮ ಪರಿಪಾಲಕನ (ಅಲ್ಲಾಹನ) ಬಳಿಗೆ ಧಾವಿಸುವರು. info
التفاسير:

external-link copy
52 : 36

قَالُوْا یٰوَیْلَنَا مَنْ بَعَثَنَا مِنْ مَّرْقَدِنَا ۣٚۘ— هٰذَا مَا وَعَدَ الرَّحْمٰنُ وَصَدَقَ الْمُرْسَلُوْنَ ۟

ಅವರು ಹೇಳುವರು: “ಅಯ್ಯೋ! ನಮ್ಮ ದುರ್ಗತಿಯೇ! ನಮ್ಮನ್ನು ನಿದ್ದೆಯಿಂದ ಎಬ್ಬಿಸಿದ್ದು ಯಾರು?” (ಆಗ ಅವರಿಗೆ ಉತ್ತರ ನೀಡಲಾಗುವುದು): “ಇದು ಪರಮ ದಯಾಳು (ಅಲ್ಲಾಹು) ಮಾಡಿದ ವಾಗ್ದಾನವಾಗಿದೆ ಮತ್ತು ಸಂದೇಶವಾಹಕರುಗಳು ಈ ಸತ್ಯವನ್ನು ನಿಮಗೆ ತಿಳಿಸಿದ್ದರು.” info
التفاسير:

external-link copy
53 : 36

اِنْ كَانَتْ اِلَّا صَیْحَةً وَّاحِدَةً فَاِذَا هُمْ جَمِیْعٌ لَّدَیْنَا مُحْضَرُوْنَ ۟

ಅದು ಕೇವಲ ಒಂದು ಚೀತ್ಕಾರ ಮಾತ್ರವಾಗಿರುತ್ತದೆ. ಆಗ ಅಗೋ! ಅವರೆಲ್ಲರನ್ನೂ ನಮ್ಮ ಮುಂದೆ ಹಾಜರುಪಡಿಸಲಾಗುತ್ತದೆ. info
التفاسير:

external-link copy
54 : 36

فَالْیَوْمَ لَا تُظْلَمُ نَفْسٌ شَیْـًٔا وَّلَا تُجْزَوْنَ اِلَّا مَا كُنْتُمْ تَعْمَلُوْنَ ۟

ಆ ದಿನ ಯಾರಿಗೂ ಸ್ವಲ್ಪವೂ ಅನ್ಯಾಯವಾಗುವುದಿಲ್ಲ. ನೀವು ಮಾಡಿದ ಕರ್ಮಗಳ ಪ್ರತಿಫಲವನ್ನೇ ಹೊರತು ಬೇರೇನೂ ನಿಮಗೆ ನೀಡಲಾಗುವುದಿಲ್ಲ. info
التفاسير: