แปล​ความหมาย​อัลกุรอาน​ - คำแปลภาษากันนาดา - โดยหัมซะฮ์ บะตูร

external-link copy
7 : 39

اِنْ تَكْفُرُوْا فَاِنَّ اللّٰهَ غَنِیٌّ عَنْكُمْ ۫— وَلَا یَرْضٰی لِعِبَادِهِ الْكُفْرَ ۚ— وَاِنْ تَشْكُرُوْا یَرْضَهُ لَكُمْ ؕ— وَلَا تَزِرُ وَازِرَةٌ وِّزْرَ اُخْرٰی ؕ— ثُمَّ اِلٰی رَبِّكُمْ مَّرْجِعُكُمْ فَیُنَبِّئُكُمْ بِمَا كُنْتُمْ تَعْمَلُوْنَ ؕ— اِنَّهٗ عَلِیْمٌۢ بِذَاتِ الصُّدُوْرِ ۟

ನೀವು ಕೃತಘ್ನತೆ ತೋರುವುದಾದರೆ ನಿಶ್ಚಯವಾಗಿಯೂ ಅಲ್ಲಾಹನಿಗೆ ನಿಮ್ಮ ಅಗತ್ಯವಿಲ್ಲ. ದಾಸರು ಕೃತಘ್ನರಾಗುವುದನ್ನು ಅವನು ಇಷ್ಟಪಡುವುದಿಲ್ಲ. ನೀವು ಕೃತಜ್ಞರಾಗುವುದಾದರೆ ಅವನು ಅದನ್ನು ನಿಮಗಾಗಿ ಇಷ್ಟಪಡುವನು. ಪಾಪಗಳ ಭಾರವನ್ನು ಹೊರುವವರು ಇತರರು ಮಾಡಿದ ಪಾಪಗಳ ಭಾರವನ್ನು ಹೊರುವುದಿಲ್ಲ. ನಂತರ ನಿಮ್ಮನ್ನು ನಿಮ್ಮ ಪರಿಪಾಲಕನ (ಅಲ್ಲಾಹನ) ಬಳಿಗೆ ಮರಳಿಸಲಾಗುವುದು. ಆಗ ನೀವು ಮಾಡುತ್ತಿದ್ದ ಕರ್ಮಗಳ ಬಗ್ಗೆ ಅವನು ನಿಮಗೆ ತಿಳಿಸಿಕೊಡುವನು. ನಿಶ್ಚಯವಾಗಿಯೂ ಅವನು ಹೃದಯಗಳಲ್ಲಿರುವುದನ್ನು ತಿಳಿಯುತ್ತಾನೆ. info
التفاسير: