Salin ng mga Kahulugan ng Marangal na Qur'an - Salin sa Wikang Kanarese ni Hamza Batur

Numero ng Pahina:close

external-link copy
44 : 28

وَمَا كُنْتَ بِجَانِبِ الْغَرْبِیِّ اِذْ قَضَیْنَاۤ اِلٰی مُوْسَی الْاَمْرَ وَمَا كُنْتَ مِنَ الشّٰهِدِیْنَ ۟ۙ

(ಪ್ರವಾದಿಯವರೇ) ನಾವು ಮೂಸಾರಿಗೆ ಆಜ್ಞಾದೇಶಗಳ ಬಗ್ಗೆ ದೇವವಾಣಿ ನೀಡಿದಾಗ ನೀವು ಆ ಪರ್ವತದ ಪಶ್ಚಿಮ ಭಾಗದಲ್ಲಿರಲಿಲ್ಲ. (ಆ ಘಟನೆಗೆ) ಸಾಕ್ಷಿಯಾದವರಲ್ಲೂ ನೀವಿರಲಿಲ್ಲ. info
التفاسير:

external-link copy
45 : 28

وَلٰكِنَّاۤ اَنْشَاْنَا قُرُوْنًا فَتَطَاوَلَ عَلَیْهِمُ الْعُمُرُ ۚ— وَمَا كُنْتَ ثَاوِیًا فِیْۤ اَهْلِ مَدْیَنَ تَتْلُوْا عَلَیْهِمْ اٰیٰتِنَا ۙ— وَلٰكِنَّا كُنَّا مُرْسِلِیْنَ ۟

ಆದರೆ ನಾವು (ಮೂಸಾರ ನಂತರ) ಅನೇಕ ತಲೆಮಾರುಗಳನ್ನು ಬೆಳೆಸಿದೆವು. ಅವರ ಮೂಲಕ ದೀರ್ಘ ಕಾಲಗಳು ಕಳೆದುಹೋದವು. ಮದ್ಯನ್‍ ದೇಶದವರಿಗೆ ನಮ್ಮ ವಚನಗಳನ್ನು ಓದಿಕೊಡುತ್ತಾ ನೀವು ಅವರೊಂದಿಗೆ ವಾಸವಾಗಿರಲಿಲ್ಲ. ಆದರೆ ನಿಶ್ಚಯವಾಗಿಯೂ ನಾವು ಸಂದೇಶವಾಹಕರನ್ನು ಕಳುಹಿಸುವವರಾಗಿದ್ದೇವೆ. info
التفاسير:

external-link copy
46 : 28

وَمَا كُنْتَ بِجَانِبِ الطُّوْرِ اِذْ نَادَیْنَا وَلٰكِنْ رَّحْمَةً مِّنْ رَّبِّكَ لِتُنْذِرَ قَوْمًا مَّاۤ اَتٰىهُمْ مِّنْ نَّذِیْرٍ مِّنْ قَبْلِكَ لَعَلَّهُمْ یَتَذَكَّرُوْنَ ۟

ನಾವು (ಮೂಸಾರನ್ನು) ಕರೆದ ಸಂದರ್ಭದಲ್ಲಿ ನೀವು ತೂರ್ ಪರ್ವತದ ಭಾಗದಲ್ಲಿರಲಿಲ್ಲ. ಆದರೆ ಅದು ನಿಮ್ಮ ಪರಿಪಾಲಕನ (ಅಲ್ಲಾಹನ) ಕಡೆಯ ದಯೆಯಾಗಿದೆ. ನಿಮಗಿಂತ ಮೊದಲು ಯಾವುದೇ ಮುನ್ನೆಚ್ಚರಿಕೆಗಾರರು ಬಂದಿರದ ಈ ಜನರಿಗೆ ನೀವು ಮುನ್ನೆಚ್ಚರಿಕೆ ನೀಡುವುದಕ್ಕಾಗಿ. ಅವರು ಉಪದೇಶವನ್ನು ಸ್ವೀಕರಿಸಲೆಂದು. info
التفاسير:

external-link copy
47 : 28

وَلَوْلَاۤ اَنْ تُصِیْبَهُمْ مُّصِیْبَةٌ بِمَا قَدَّمَتْ اَیْدِیْهِمْ فَیَقُوْلُوْا رَبَّنَا لَوْلَاۤ اَرْسَلْتَ اِلَیْنَا رَسُوْلًا فَنَتَّبِعَ اٰیٰتِكَ وَنَكُوْنَ مِنَ الْمُؤْمِنِیْنَ ۟

ಅವರ ಕೈಗಳು ಮುಂದಕ್ಕೆ ಕಳುಹಿಸಿರುವ ದುಷ್ಕರ್ಮಗಳ ಫಲವಾಗಿ ಅವರಿಗೇನಾದರೂ ಅನಾಹುತ ಸಂಭವಿಸಿದರೆ, “ಓ ನಮ್ಮ ಪರಿಪಾಲಕನೇ! ನಮ್ಮ ಬಳಿಗೆ ಒಬ್ಬ ಸಂದೇಶವಾಹಕರನ್ನು ಏಕೆ ಕಳುಹಿಸಲಿಲ್ಲ, ಹಾಗಿರುತ್ತಿದ್ದರೆ ನಾವು ನಿನ್ನ ವಚನಗಳನ್ನು ಅನುಸರಿಸುತ್ತಿದ್ದೆವು ಮತ್ತು ಸತ್ಯವಿಶ್ವಾಸಿಗಳಲ್ಲಿ ಸೇರುತ್ತಿದ್ದೆವು” ಎಂದು ಅವರು ಹೇಳಲಾರರು ಎಂದಿರುತ್ತಿದ್ದರೆ (ನಾವು ನಿಮ್ಮನ್ನು ಅವರಿಗೆ ಸಂದೇಶವಾಹಕರಾಗಿ ಕಳುಹಿಸುತ್ತಿರಲಿಲ್ಲ). info
التفاسير:

external-link copy
48 : 28

فَلَمَّا جَآءَهُمُ الْحَقُّ مِنْ عِنْدِنَا قَالُوْا لَوْلَاۤ اُوْتِیَ مِثْلَ مَاۤ اُوْتِیَ مُوْسٰی ؕ— اَوَلَمْ یَكْفُرُوْا بِمَاۤ اُوْتِیَ مُوْسٰی مِنْ قَبْلُ ۚ— قَالُوْا سِحْرٰنِ تَظَاهَرَا ۫— وَقَالُوْۤا اِنَّا بِكُلٍّ كٰفِرُوْنَ ۟

ನಮ್ಮ ಕಡೆಯ ಸತ್ಯವು ಅವರಿಗೆ ತಲುಪಿದಾಗ ಅವರು ಹೇಳಿದರು: “ಮೂಸಾರಿಗೆ ನೀಡಲಾದಂತಹ ದೃಷ್ಟಾಂತಗಳನ್ನು ಇವರಿಗೇಕೆ ನೀಡಲಾಗಿಲ್ಲ?” ಆದರೆ ಇದಕ್ಕೆ ಮೊದಲು ಮೂಸಾರಿಗೆ ನೀಡಲಾದ ದೃಷ್ಟಾಂತಗಳನ್ನು ಅವರು ನಿಷೇಧಿಸಿಲ್ಲವೇ? ಅವರು ಹೇಳಿದರು: “ಇವೆರಡು (ಕುರ್‌ಆನ್ ಮತ್ತು ತೌರಾತ್) ಮಾಟಗಾರಿಕೆಗಳಾಗಿದ್ದು ಪರಸ್ಪರ ಬೆಂಬಲಿಸುತ್ತವೆ.” ಅವರು ಹೇಳಿದರು: “ನಾವು ಇವೆಲ್ಲವನ್ನೂ ನಿಷೇಧಿಸುತ್ತೇವೆ.” info
التفاسير:

external-link copy
49 : 28

قُلْ فَاْتُوْا بِكِتٰبٍ مِّنْ عِنْدِ اللّٰهِ هُوَ اَهْدٰی مِنْهُمَاۤ اَتَّبِعْهُ اِنْ كُنْتُمْ صٰدِقِیْنَ ۟

ಹೇಳಿರಿ: “ನೀವು ಅವೆರಡಕ್ಕಿಂತಲೂ ಹೆಚ್ಚು ಸ್ಪಷ್ಟವಾಗಿ ಸನ್ಮಾರ್ಗವನ್ನು ತೋರಿಸುವ ಒಂದು ಗ್ರಂಥವನ್ನು ಅಲ್ಲಾಹನ ಬಳಿಯಿಂದ ತನ್ನಿರಿ. ಅದನ್ನು ನಾನು ಅನುಸರಿಸುತ್ತೇನೆ. ನೀವು ಸತ್ಯವಂತರಾಗಿದ್ದರೆ.” info
التفاسير:

external-link copy
50 : 28

فَاِنْ لَّمْ یَسْتَجِیْبُوْا لَكَ فَاعْلَمْ اَنَّمَا یَتَّبِعُوْنَ اَهْوَآءَهُمْ ؕ— وَمَنْ اَضَلُّ مِمَّنِ اتَّبَعَ هَوٰىهُ بِغَیْرِ هُدًی مِّنَ اللّٰهِ ؕ— اِنَّ اللّٰهَ لَا یَهْدِی الْقَوْمَ الظّٰلِمِیْنَ ۟۠

ಅವರೇನಾದರೂ ನಿಮಗೆ ಉತ್ತರ ನೀಡದಿದ್ದರೆ ತಿಳಿಯಿರಿ! ಅವರು ಅವರ ಸ್ವೇಚ್ಛೆಗಳನ್ನು ಮಾತ್ರ ಅನುಸರಿಸುತ್ತಿದ್ದಾರೆ. ಅಲ್ಲಾಹನ ಕಡೆಯ ಯಾವುದೇ ಮಾರ್ಗದರ್ಶನವನ್ನು ಪಡೆಯದೆ ತನ್ನ ಸ್ವೇಚ್ಛೆಯನ್ನು ಹಿಂಬಾಲಿಸುವವನಿಗಿಂತ ಹೆಚ್ಚು ದಾರಿತಪ್ಪಿದವನು ಯಾರು? ನಿಶ್ಚಯವಾಗಿಯೂ ಅಲ್ಲಾಹು ಅಕ್ರಮಿಗಳಾದ ಜನರಿಗೆ ಸನ್ಮಾರ್ಗ ತೋರಿಸುವುದಿಲ್ಲ. info
التفاسير: