Salin ng mga Kahulugan ng Marangal na Qur'an - Salin sa Wikang Kanarese ni Hamza Batur

external-link copy
7 : 3

هُوَ الَّذِیْۤ اَنْزَلَ عَلَیْكَ الْكِتٰبَ مِنْهُ اٰیٰتٌ مُّحْكَمٰتٌ هُنَّ اُمُّ الْكِتٰبِ وَاُخَرُ مُتَشٰبِهٰتٌ ؕ— فَاَمَّا الَّذِیْنَ فِیْ قُلُوْبِهِمْ زَیْغٌ فَیَتَّبِعُوْنَ مَا تَشَابَهَ مِنْهُ ابْتِغَآءَ الْفِتْنَةِ وَابْتِغَآءَ تَاْوِیْلِهٖ ؔۚ— وَمَا یَعْلَمُ تَاْوِیْلَهٗۤ اِلَّا اللّٰهُ ۘؐ— وَالرّٰسِخُوْنَ فِی الْعِلْمِ یَقُوْلُوْنَ اٰمَنَّا بِهٖ ۙ— كُلٌّ مِّنْ عِنْدِ رَبِّنَا ۚ— وَمَا یَذَّكَّرُ اِلَّاۤ اُولُوا الْاَلْبَابِ ۟

ನಿಮಗೆ ಗ್ರಂಥವನ್ನು ಅವತೀರ್ಣಗೊಳಿಸಿದ್ದು ಅವನೇ. ಅದರಲ್ಲಿ ಸ್ಪಷ್ಟ ವಚನಗಳಿವೆ.[1] ಅವು ಗ್ರಂಥದ ಮೂಲಗಳಾಗಿವೆ. (ಅದರಲ್ಲಿ) ಹೋಲಿಕೆಯಿರುವ ಕೆಲವು ವಚನಗಳೂ ಇವೆ. ಹೃದಯದಲ್ಲಿ ವಕ್ರತೆಯಿರುವವರು, ಗೊಂದಲವನ್ನು ಸೃಷ್ಟಿಸಲು ಮತ್ತು ತಪ್ಪಾಗಿ ವ್ಯಾಖ್ಯಾನಿಸಲು ಹೋಲಿಕೆಯಿರುವ ವಚನಗಳ ಹಿಂದೆ ಬೀಳುತ್ತಾರೆ. ಆದರೆ, ಅಲ್ಲಾಹನ ಹೊರತು ಯಾರೂ ಅದರ ವ್ಯಾಖ್ಯಾನವನ್ನು ತಿಳಿದಿಲ್ಲ. ಜ್ಞಾನದಲ್ಲಿ ಸದೃಢರಾಗಿರುವವರು ಹೇಳುತ್ತಾರೆ: “ನಾವು ಅದರಲ್ಲಿ ವಿಶ್ವಾಸವಿಟ್ಟಿದ್ದೇವೆ. ಎಲ್ಲವೂ ನಮ್ಮ ಪರಿಪಾಲಕನ (ಅಲ್ಲಾಹನ) ಕಡೆಯಿಂದಾಗಿದೆ.” ಬುದ್ಧಿವಂತರ ಹೊರತು ಇನ್ನಾರೂ ಉಪದೇಶವನ್ನು ಪಡೆಯುವುದಿಲ್ಲ. info

[1] ಸ್ಪಷ್ಟವಚನಗಳು ಅಂದರೆ ಆದೇಶ-ವಿರೋಧಗಳು, ನಿಯಮಗಳು, ಸಮಸ್ಯೆಗಳಿಗೆ ಪರಿಹಾರಗಳು, ಸಮಾಚಾರಗಳು ಮತ್ತು ನಿರೂಪಣೆಗಳಿರುವ ವಚನಗಳು. ಇವುಗಳನ್ನು ಅರ್ಥಮಾಡಿಕೊಳ್ಳಲು ಕಷ್ಟವಿಲ್ಲ. ಹೋಲಿಕೆಯಿರುವ ವಚನಗಳು ಇವುಗಳಿಗೆ ತದ್ವಿರುದ್ಧವಾದದ್ದು. ಅವು ಅಲ್ಲಾಹನ ಅಸ್ತಿತ್ವ, ವಿಧಿ-ನಿರ್ಣಯ, ಸ್ವರ್ಗ-ನರಕ, ದೇವದೂತರು ಮುಂತಾದವುಗಳಿಗೆ ಸಂಬಂಧಿಸಿದ ವಿವರಣೆಗಳಿರುವ ವಚನಗಳು.

التفاسير: