Salin ng mga Kahulugan ng Marangal na Qur'an - Salin sa Wikang Kanarese ni Hamza Batur

external-link copy
48 : 5

وَاَنْزَلْنَاۤ اِلَیْكَ الْكِتٰبَ بِالْحَقِّ مُصَدِّقًا لِّمَا بَیْنَ یَدَیْهِ مِنَ الْكِتٰبِ وَمُهَیْمِنًا عَلَیْهِ فَاحْكُمْ بَیْنَهُمْ بِمَاۤ اَنْزَلَ اللّٰهُ وَلَا تَتَّبِعْ اَهْوَآءَهُمْ عَمَّا جَآءَكَ مِنَ الْحَقِّ ؕ— لِكُلٍّ جَعَلْنَا مِنْكُمْ شِرْعَةً وَّمِنْهَاجًا ؕ— وَلَوْ شَآءَ اللّٰهُ لَجَعَلَكُمْ اُمَّةً وَّاحِدَةً وَّلٰكِنْ لِّیَبْلُوَكُمْ فِیْ مَاۤ اٰتٰىكُمْ فَاسْتَبِقُوا الْخَیْرٰتِ ؕ— اِلَی اللّٰهِ مَرْجِعُكُمْ جَمِیْعًا فَیُنَبِّئُكُمْ بِمَا كُنْتُمْ فِیْهِ تَخْتَلِفُوْنَ ۟ۙ

(ಪ್ರವಾದಿಯವರೇ) ನಿಮಗೂ ನಾವು ಗ್ರಂಥವನ್ನು ಸತ್ಯಸಹಿತ ಅವತೀರ್ಣಗೊಳಿಸಿದ್ದೇವೆ. ಅದು ತನ್ನ ಮುಂದಿರುವ ಗ್ರಂಥಗಳನ್ನು ದೃಢೀಕರಿಸುತ್ತದೆ ಮತ್ತು ಅವುಗಳನ್ನು ಸಂರಕ್ಷಿಸುತ್ತದೆ. ಆದ್ದರಿಂದ ಅಲ್ಲಾಹು ಅವತೀರ್ಣಗೊಳಿಸಿದ್ದಕ್ಕೆ ಅನುಗುಣವಾಗಿ ನೀವು ಅವರ ನಡುವೆ ತೀರ್ಪು ನೀಡಿರಿ. ನಿಮಗೆ ಅವತೀರ್ಣವಾದ ಸತ್ಯವನ್ನು ತೊರೆದು ಅವರ ಸ್ವೇಚ್ಛೆಗಳನ್ನು ಹಿಂಬಾಲಿಸಬೇಡಿ. ನಿಮ್ಮಲ್ಲಿ ಪ್ರತಿಯೊಂದು ಸಮುದಾಯಕ್ಕೂ ನಾವು ಒಂದು ಧರ್ಮಶಾಸ್ತ್ರ ಮತ್ತು ಕರ್ಮಮಾರ್ಗವನ್ನು ನಿಶ್ಚಯಿಸಿದ್ದೇವೆ. ಅಲ್ಲಾಹು ಇಚ್ಛಿಸಿದ್ದರೆ ನಿಮ್ಮೆಲ್ಲರನ್ನೂ ಒಂದೇ ಸಮುದಾಯವಾಗಿ ಮಾಡುತ್ತಿದ್ದನು. ಆದರೆ ಅವನು ನಿಮಗೆ ಏನು ನೀಡಿದ್ದಾನೋ ಅದರಲ್ಲಿ ನಿಮ್ಮನ್ನು ಪರೀಕ್ಷಿಸಲು (ಇಚ್ಛಿಸುತ್ತಾನೆ). ಆದ್ದರಿಂದ ನೀವು ಸತ್ಕರ್ಮಗಳಲ್ಲಿ ತ್ವರೆಯಿಂದ ಮುನ್ನುಗ್ಗಿರಿ. ನೀವೆಲ್ಲರೂ ಅಲ್ಲಾಹನ ಬಳಿಗೇ ಮರಳಬೇಕಾಗಿದೆ. ಆಗ ನೀವು ಭಿನ್ನಮತ ತಳೆದ ವಿಷಯಗಳ ಬಗ್ಗೆ ಅವನು ನಿಮಗೆ ತಿಳಿಸಿಕೊಡುವನು. info
التفاسير: