Salin ng mga Kahulugan ng Marangal na Qur'an - Salin sa Wikang Kanarese ni Hamza Batur

Numero ng Pahina:close

external-link copy
112 : 9

اَلتَّآىِٕبُوْنَ الْعٰبِدُوْنَ الْحٰمِدُوْنَ السَّآىِٕحُوْنَ الرّٰكِعُوْنَ السّٰجِدُوْنَ الْاٰمِرُوْنَ بِالْمَعْرُوْفِ وَالنَّاهُوْنَ عَنِ الْمُنْكَرِ وَالْحٰفِظُوْنَ لِحُدُوْدِ اللّٰهِ ؕ— وَبَشِّرِ الْمُؤْمِنِیْنَ ۟

ಪಶ್ಚಾತ್ತಾಪಪಡುವವರು, ಆರಾಧನೆ ಮಾಡುವವರು, ಸ್ತುತಿಕೀರ್ತನೆ ಮಾಡುವವರು, ಉಪವಾಸ ಆಚರಿಸುವವರು, ತಲೆಬಾಗುವವರು, ಸಾಷ್ಟಾಂಗ ಮಾಡುವವರು, ಒಳಿತನ್ನು ಆದೇಶಿಸುವವರು, ಕೆಡುಕನ್ನು ವಿರೋಧಿಸುವವರು ಮತ್ತು ಅಲ್ಲಾಹನ ಎಲ್ಲೆಗಳನ್ನು ಸಂರಕ್ಷಿಸುವವರು (ಇವರೇ ಸತ್ಯವಿಶ್ವಾಸಿಗಳು). ಆ ಸತ್ಯವಿಶ್ವಾಸಿಗಳಿಗೆ ಶುಭವಾರ್ತೆಯನ್ನು ತಿಳಿಸಿರಿ. info
التفاسير:

external-link copy
113 : 9

مَا كَانَ لِلنَّبِیِّ وَالَّذِیْنَ اٰمَنُوْۤا اَنْ یَّسْتَغْفِرُوْا لِلْمُشْرِكِیْنَ وَلَوْ كَانُوْۤا اُولِیْ قُرْبٰی مِنْ بَعْدِ مَا تَبَیَّنَ لَهُمْ اَنَّهُمْ اَصْحٰبُ الْجَحِیْمِ ۟

ಬಹುದೇವವಿಶ್ವಾಸಿಗಳು ನರಕವಾಸಿಗಳೆಂದು ಸ್ಪಷ್ಟವಾದ ಬಳಿಕ ಅವರಿಗೋಸ್ಕರ (ಅಲ್ಲಾಹನಲ್ಲಿ) ಕ್ಷಮೆಯಾಚನೆ ಮಾಡಲು ಪ್ರವಾದಿಗೆ ಮತ್ತು ಸತ್ಯವಿಶ್ವಾಸಿಗಳಿಗೆ ಅನುಮತಿಯಿಲ್ಲ. ಅವರು ಆಪ್ತ ಸಂಬಂಧಿಕರಾಗಿದ್ದರೂ ಸಹ. info
التفاسير:

external-link copy
114 : 9

وَمَا كَانَ اسْتِغْفَارُ اِبْرٰهِیْمَ لِاَبِیْهِ اِلَّا عَنْ مَّوْعِدَةٍ وَّعَدَهَاۤ اِیَّاهُ ۚ— فَلَمَّا تَبَیَّنَ لَهٗۤ اَنَّهٗ عَدُوٌّ لِّلّٰهِ تَبَرَّاَ مِنْهُ ؕ— اِنَّ اِبْرٰهِیْمَ لَاَوَّاهٌ حَلِیْمٌ ۟

ಇಬ್ರಾಹೀಮರು ತಮ್ಮ ತಂದೆಗೋಸ್ಕರ (ಅಲ್ಲಾಹನಲ್ಲಿ) ಕ್ಷಮೆಯಾಚನೆ ಮಾಡಿರುವುದು ಅವರು ತಂದೆಗೆ ಕೊಟ್ಟ ಮಾತನ್ನು ಪಾಲಿಸುವುದಕ್ಕಾಗಿತ್ತು. ಆದರೆ ತಂದೆ ಅಲ್ಲಾಹನ ವೈರಿಯೆಂದು ಸ್ಪಷ್ಟವಾದಾಗ ಅವರು ತಂದೆಯಿಂದ ದೂರವಾದರು. ನಿಶ್ಚಯವಾಗಿಯೂ ಇಬ್ರಾಹೀಮರು ಅತ್ಯಂತ ಮೃದು ಹೃದಯದವರು ಮತ್ತು ಸಹಿಷ್ಣುವಾಗಿದ್ದರು. info
التفاسير:

external-link copy
115 : 9

وَمَا كَانَ اللّٰهُ لِیُضِلَّ قَوْمًا بَعْدَ اِذْ هَدٰىهُمْ حَتّٰی یُبَیِّنَ لَهُمْ مَّا یَتَّقُوْنَ ؕ— اِنَّ اللّٰهَ بِكُلِّ شَیْءٍ عَلِیْمٌ ۟

ಅಲ್ಲಾಹು ಜನರಿಗೆ ಸನ್ಮಾರ್ಗವನ್ನು ತೋರಿಸಿದ ಬಳಿಕ ಅವರನ್ನು ದಾರಿತಪ್ಪಿಸುವುದಿಲ್ಲ—ಅವರು ಯಾವುದರಿಂದ ತಮ್ಮನ್ನು ರಕ್ಷಿಸಿಕೊಳ್ಳಬೇಕೆಂದು ಅವರಿಗೆ ಸ್ಪಷ್ಟವಾಗಿ ವಿವರಿಸಿಕೊಡುವ ತನಕ. ನಿಶ್ಚಯವಾಗಿಯೂ ಅಲ್ಲಾಹು ಎಲ್ಲಾ ವಿಷಯಗಳನ್ನು ತಿಳಿದವನಾಗಿದ್ದಾನೆ. info
التفاسير:

external-link copy
116 : 9

اِنَّ اللّٰهَ لَهٗ مُلْكُ السَّمٰوٰتِ وَالْاَرْضِ ؕ— یُحْیٖ وَیُمِیْتُ ؕ— وَمَا لَكُمْ مِّنْ دُوْنِ اللّٰهِ مِنْ وَّلِیٍّ وَّلَا نَصِیْرٍ ۟

ನಿಶ್ಚಯವಾಗಿಯೂ ಭೂಮ್ಯಾಕಾಶಗಳ ಸಾರ್ವಭೌಮತ್ವವು ಅಲ್ಲಾಹನಿಗೆ ಸೇರಿದ್ದು. ಅವನು ಜೀವ ಮತ್ತು ಮರಣವನ್ನು ನೀಡುತ್ತಾನೆ. ಅಲ್ಲಾಹನ ಹೊರತು ನಿಮಗೆ ಬೇರೆ ರಕ್ಷಕರು ಅಥವಾ ಸಹಾಯಕರಿಲ್ಲ. info
التفاسير:

external-link copy
117 : 9

لَقَدْ تَّابَ اللّٰهُ عَلَی النَّبِیِّ وَالْمُهٰجِرِیْنَ وَالْاَنْصَارِ الَّذِیْنَ اتَّبَعُوْهُ فِیْ سَاعَةِ الْعُسْرَةِ مِنْ بَعْدِ مَا كَادَ یَزِیْغُ قُلُوْبُ فَرِیْقٍ مِّنْهُمْ ثُمَّ تَابَ عَلَیْهِمْ ؕ— اِنَّهٗ بِهِمْ رَءُوْفٌ رَّحِیْمٌ ۟ۙ

ನಿಶ್ಚಯವಾಗಿಯೂ ಅಲ್ಲಾಹು ಪ್ರವಾದಿಯನ್ನು ಮತ್ತು ಸಂದಿಗ್ಧ ಸ್ಥಿತಿಯಲ್ಲಿ ಅವರನ್ನು ಹಿಂಬಾಲಿಸಿದ ಮುಹಾಜಿರ್ ಮತ್ತು ಅನ್ಸಾರರನ್ನು ಕ್ಷಮಿಸಿದ್ದಾನೆ. ನಂತರ ಅಲ್ಲಾಹು ಅವರ ಪಶ್ಚಾತ್ತಾಪವನ್ನು ಸ್ವೀಕರಿಸಿದನು. ನಿಶ್ಚಯವಾಗಿಯೂ ಅವನು ಅವರೊಡನೆ ಕೃಪೆ ಮತ್ತು ದಯೆಯುಳ್ಳವನಾಗಿದ್ದಾನೆ. info
التفاسير: