Kur'an-ı Kerim meal tercümesi - Kanadaca Tercüme - Hamza Batur

Sayfa numarası:close

external-link copy
211 : 2

سَلْ بَنِیْۤ اِسْرَآءِیْلَ كَمْ اٰتَیْنٰهُمْ مِّنْ اٰیَةٍ بَیِّنَةٍ ؕ— وَمَنْ یُّبَدِّلْ نِعْمَةَ اللّٰهِ مِنْ بَعْدِ مَا جَآءَتْهُ فَاِنَّ اللّٰهَ شَدِیْدُ الْعِقَابِ ۟

ಇಸ್ರಾಯೇಲ್ ಮಕ್ಕಳೊಡನೆ ನಾವು ಅವರಿಗೆ ಎಷ್ಟೆಷ್ಟು ಸ್ಪಷ್ಟ ದೃಷ್ಟಾಂತಗಳನ್ನು ನೀಡಿದ್ದೇವೆಂದು ಕೇಳಿರಿ. ಅಲ್ಲಾಹನ ಅನುಗ್ರಹವು ತನ್ನ ಬಳಿಗೆ ಬಂದ ಬಳಿಕವೂ ಅದನ್ನು ಬದಲಾಯಿಸುವವನು ಯಾರೋ—ನಿಶ್ಚಯವಾಗಿಯೂ ಅಲ್ಲಾಹು ಅತಿಕಠೋರವಾಗಿ ಶಿಕ್ಷಿಸುವವನೆಂದು (ಅವನು ತಿಳಿದುಕೊಳ್ಳಲಿ). info
التفاسير:

external-link copy
212 : 2

زُیِّنَ لِلَّذِیْنَ كَفَرُوا الْحَیٰوةُ الدُّنْیَا وَیَسْخَرُوْنَ مِنَ الَّذِیْنَ اٰمَنُوْا ۘ— وَالَّذِیْنَ اتَّقَوْا فَوْقَهُمْ یَوْمَ الْقِیٰمَةِ ؕ— وَاللّٰهُ یَرْزُقُ مَنْ یَّشَآءُ بِغَیْرِ حِسَابٍ ۟

ಸತ್ಯನಿಷೇಧಿಗಳಿಗೆ ಇಹಲೋಕ ಜೀವನವನ್ನು ಅಲಂಕರಿಸಿಕೊಡಲಾಗಿದೆ. ಅವರು ಸತ್ಯವಿಶ್ವಾಸಿಗಳನ್ನು ತಮಾಷೆ ಮಾಡುತ್ತಾರೆ. ಆದರೆ, ಪುನರುತ್ಥಾನ ದಿನದಂದು ದೇವಭಯವುಳ್ಳವರು ಅವರಿಗಿಂತ ಮೇಲಿರುತ್ತಾರೆ. ಅಲ್ಲಾಹು ಅವನು ಇಚ್ಛಿಸಿದವರಿಗೆ ಲೆಕ್ಕವಿಲ್ಲದೆ ನೀಡುತ್ತಾನೆ. info
التفاسير:

external-link copy
213 : 2

كَانَ النَّاسُ اُمَّةً وَّاحِدَةً ۫— فَبَعَثَ اللّٰهُ النَّبِیّٖنَ مُبَشِّرِیْنَ وَمُنْذِرِیْنَ ۪— وَاَنْزَلَ مَعَهُمُ الْكِتٰبَ بِالْحَقِّ لِیَحْكُمَ بَیْنَ النَّاسِ فِیْمَا اخْتَلَفُوْا فِیْهِ ؕ— وَمَا اخْتَلَفَ فِیْهِ اِلَّا الَّذِیْنَ اُوْتُوْهُ مِنْ بَعْدِ مَا جَآءَتْهُمُ الْبَیِّنٰتُ بَغْیًا بَیْنَهُمْ ۚ— فَهَدَی اللّٰهُ الَّذِیْنَ اٰمَنُوْا لِمَا اخْتَلَفُوْا فِیْهِ مِنَ الْحَقِّ بِاِذْنِهٖ ؕ— وَاللّٰهُ یَهْدِیْ مَنْ یَّشَآءُ اِلٰی صِرَاطٍ مُّسْتَقِیْمٍ ۟

ಮಾನವರೆಲ್ಲರೂ ಒಂದೇ ಸಮುದಾಯವಾಗಿದ್ದರು. ನಂತರ ಅಲ್ಲಾಹು ಸುವಾರ್ತೆ ತಿಳಿಸಲು ಮತ್ತು ಎಚ್ಚರಿಕೆ ನೀಡಲು ಪ್ರವಾದಿಗಳನ್ನು ಕಳುಹಿಸಿದನು. ಜನರು ಭಿನ್ನಾಭಿಪ್ರಾಯ ತಳೆದ ವಿಷಯದಲ್ಲಿ ತೀರ್ಪು ನೀಡುವುದಕ್ಕಾಗಿ ಅವರ ಜೊತೆಗೆ ಗ್ರಂಥವನ್ನು ಸತ್ಯ ಸಮೇತ ಅವತೀರ್ಣಗೊಳಿಸಿದನು. ಆದರೆ ಗ್ರಂಥ ನೀಡಲಾದ ಅದೇ ಜನರು ಸ್ಪಷ್ಟ ಸಾಕ್ಷ್ಯಾಧಾರಗಳು ತಮಗೆ ತಲುಪಿದ ಬಳಿಕವೂ ತಮ್ಮೊಳಗಿನ ವಿದ್ವೇಷದ ನಿಮಿತ್ತ ಅದರ (ಗ್ರಂಥದ) ವಿಷಯದಲ್ಲಿ ಭಿನ್ನಮತ ತಳೆದರು. ಆದ್ದರಿಂದ ಅಲ್ಲಾಹು ತನ್ನ ಅಪ್ಪಣೆ ಪ್ರಕಾರ ಅವರು ಭಿನ್ನಮತೀಯರಾದ ಆ ಸತ್ಯಕ್ಕೆ ಸತ್ಯವಿಶ್ವಾಸಿಗಳನ್ನು ಮುನ್ನಡೆಸಿದನು. ಅಲ್ಲಾಹು ಅವನು ಇಚ್ಛಿಸಿದವರನ್ನು ನೇರಮಾರ್ಗಕ್ಕೆ ಮುನ್ನಡೆಸುತ್ತಾನೆ. info
التفاسير:

external-link copy
214 : 2

اَمْ حَسِبْتُمْ اَنْ تَدْخُلُوا الْجَنَّةَ وَلَمَّا یَاْتِكُمْ مَّثَلُ الَّذِیْنَ خَلَوْا مِنْ قَبْلِكُمْ ؕ— مَسَّتْهُمُ الْبَاْسَآءُ وَالضَّرَّآءُ وَزُلْزِلُوْا حَتّٰی یَقُوْلَ الرَّسُوْلُ وَالَّذِیْنَ اٰمَنُوْا مَعَهٗ مَتٰی نَصْرُ اللّٰهِ ؕ— اَلَاۤ اِنَّ نَصْرَ اللّٰهِ قَرِیْبٌ ۟

ನಿಮಗಿಂತ ಮೊದಲಿನವರಿಗೆ ಬಂದಂತಹ ಪರೀಕ್ಷೆಗಳು ನಿಮಗೂ ಬಾರದೆ ನಿರಾಯಾಸವಾಗಿ ಸ್ವರ್ಗವನ್ನು ಪ್ರವೇಶಿಸಿ ಬಿಡಬಹುದೆಂದು ನೀವು ಭಾವಿಸಿದ್ದೀರಾ? ಅವರಿಗೆ ಬಡತನ ಮತ್ತು ಕಷ್ಟಗಳು ಎರಗಿದ್ದವು. ಅಲ್ಲಾಹನ ಸಹಾಯ ಬರುವುದು ಯಾವಾಗ ಎಂದು ಸಂದೇಶವಾಹಕರು ಮತ್ತು ಅವರ ಜೊತೆಯಲ್ಲಿದ್ದ ಸತ್ಯವಿಶ್ವಾಸಿಗಳು ಕೇಳುವವರೆಗೆ ಅವರನ್ನು ನಡುಗಿಸಲಾಯಿತು. ತಿಳಿಯಿರಿ! ಅಲ್ಲಾಹನ ಸಹಾಯವು ಹತ್ತಿರದಲ್ಲೇ ಇದೆ. info
التفاسير:

external-link copy
215 : 2

یَسْـَٔلُوْنَكَ مَاذَا یُنْفِقُوْنَ ؕ— قُلْ مَاۤ اَنْفَقْتُمْ مِّنْ خَیْرٍ فَلِلْوَالِدَیْنِ وَالْاَقْرَبِیْنَ وَالْیَتٰمٰی وَالْمَسٰكِیْنِ وَابْنِ السَّبِیْلِ ؕ— وَمَا تَفْعَلُوْا مِنْ خَیْرٍ فَاِنَّ اللّٰهَ بِهٖ عَلِیْمٌ ۟

ಅವರು ಏನು ಖರ್ಚು ಮಾಡಬೇಕೆಂದು ಅವರು ನಿಮ್ಮೊಡನೆ ಕೇಳುತ್ತಾರೆ. ಹೇಳಿರಿ: “ನೀವು ಒಳಿತಾಗಿರುವ ಏನು ಖರ್ಚು ಮಾಡುವುದಾದರೂ ಅದು ಮಾತಾಪಿತರಿಗೆ, ಹತ್ತಿರದ ಸಂಬಂಧಿಕರಿಗೆ, ಅನಾಥರಿಗೆ, ನಿರ್ಗತಿಕರಿಗೆ ಮತ್ತು ದಾರಿಹೋಕರಿಗೆ ಖರ್ಚು ಮಾಡಿರಿ. ನೀವು ಏನೇ ಒಳಿತು ಮಾಡಿದರೂ ನಿಶ್ಚಯವಾಗಿಯೂ ಅಲ್ಲಾಹು ಅದನ್ನು ತಿಳಿಯುತ್ತಾನೆ.” info
التفاسير: