Kur'an-ı Kerim meal tercümesi - Kanadaca Tercüme - Hamza Batur

Sayfa numarası:close

external-link copy
17 : 68

اِنَّا بَلَوْنٰهُمْ كَمَا بَلَوْنَاۤ اَصْحٰبَ الْجَنَّةِ ۚ— اِذْ اَقْسَمُوْا لَیَصْرِمُنَّهَا مُصْبِحِیْنَ ۟ۙ

ನಿಶ್ಚಯವಾಗಿಯೂ ಆ ತೋಟದ ಜನರನ್ನು ಪರೀಕ್ಷಿಸಿದಂತೆ ನಾವು ಅವರನ್ನೂ ಪರೀಕ್ಷಿಸಿದೆವು. ಬೆಳಗಾಗುತ್ತಿದ್ದಂತೆ ತೋಟದ ಹಣ್ಣುಗಳನ್ನು ನಾವು ಖಂಡಿತ ಕೊಯ್ಯುವೆವು ಎಂದು ಅವರು ಆಣೆ ಮಾಡಿ ಹೇಳಿದ ಸಂದರ್ಭ. info
التفاسير:

external-link copy
18 : 68

وَلَا یَسْتَثْنُوْنَ ۟

ಆದರೆ ಅವರು ಇನ್‌ಶಾ ಅಲ್ಲಾಹ್ (ಅಲ್ಲಾಹು ಇಚ್ಛಿಸಿದರೆ) ಎಂದು ಹೇಳಲಿಲ್ಲ. info
التفاسير:

external-link copy
19 : 68

فَطَافَ عَلَیْهَا طَآىِٕفٌ مِّنْ رَّبِّكَ وَهُمْ نَآىِٕمُوْنَ ۟

ಆದ್ದರಿಂದ, ಅವರು ನಿದ್ದೆಯಲ್ಲಿದ್ದಾಗಲೇ (ರಾತ್ರೋರಾತ್ರಿ) ನಿಮ್ಮ ಪರಿಪಾಲಕನ (ಅಲ್ಲಾಹನ) ಕಡೆಯ ಒಂದು ಶಿಕ್ಷೆಯು ಆ ತೋಟವನ್ನು ನಾಲ್ಕೂ ಕಡೆಯಿಂದ ಸುತ್ತಿತು. info
التفاسير:

external-link copy
20 : 68

فَاَصْبَحَتْ كَالصَّرِیْمِ ۟ۙ

ಆಗ ಆ ತೋಟವು ಕಟಾವು ಮಾಡಿದ ಹೊಲದಂತಾಯಿತು. info
التفاسير:

external-link copy
21 : 68

فَتَنَادَوْا مُصْبِحِیْنَ ۟ۙ

ಬೆಳಗಾಗುತ್ತಿದ್ದಂತೆ ಅವರು ಒಬ್ಬರನ್ನೊಬ್ಬರು ಕೂಗಿ ಕರೆದು ಹೇಳಿದರು: info
التفاسير:

external-link copy
22 : 68

اَنِ اغْدُوْا عَلٰی حَرْثِكُمْ اِنْ كُنْتُمْ صٰرِمِیْنَ ۟

“ನಿಮಗೆ ಹಣ್ಣು ಕೊಯ್ಯಬೇಕೆಂದಿದ್ದರೆ ಬೆಳಿಗ್ಗೆಯೇ ನಿಮ್ಮ ತೋಟಕ್ಕೆ ಹೊರಡಿ.” info
التفاسير:

external-link copy
23 : 68

فَانْطَلَقُوْا وَهُمْ یَتَخَافَتُوْنَ ۟ۙ

ನಂತರ ಅವರು ಪರಸ್ಪರ ಗುಟ್ಟಾಗಿ ಈ ಮಾತುಗಳನ್ನು ಹೇಳುತ್ತಾ ಹೊರಟರು: info
التفاسير:

external-link copy
24 : 68

اَنْ لَّا یَدْخُلَنَّهَا الْیَوْمَ عَلَیْكُمْ مِّسْكِیْنٌ ۟ۙ

“ಇಂದು ನಿಮ್ಮ ಬಳಿಗೆ ಯಾವುದೇ ಬಡವ ಬರುವಂತಾಗಬಾರದು.” info
التفاسير:

external-link copy
25 : 68

وَّغَدَوْا عَلٰی حَرْدٍ قٰدِرِیْنَ ۟

ಅವರು ಒಂದು ನಿರ್ಧಾರದೊಂದಿಗೆ (ಅದನ್ನು ಜಾರಿಗೊಳಿಸುವ) ಪೂರ್ಣ ಸಾಮರ್ಥ್ಯವಿದೆಯೆಂದು ಪರಿಗಣಿಸಿ ಬೆಳಗ್ಗೆಯೇ ಹೊರಟರು. info
التفاسير:

external-link copy
26 : 68

فَلَمَّا رَاَوْهَا قَالُوْۤا اِنَّا لَضَآلُّوْنَ ۟ۙ

ಆದರೆ ಅವರು ಆ ತೋಟವನ್ನು ನೋಡಿದಾಗ ಅವರು ಹೇಳಿದರು: “ನಿಶ್ಚಯವಾಗಿಯೂ ನಮಗೆ ದಾರಿ ತಪ್ಪಿದೆ. info
التفاسير:

external-link copy
27 : 68

بَلْ نَحْنُ مَحْرُوْمُوْنَ ۟

ಅಲ್ಲ, ನಮಗೆ ಅದೃಷ್ಟ ಕೈಕೊಟ್ಟಿದೆ.” info
التفاسير:

external-link copy
28 : 68

قَالَ اَوْسَطُهُمْ اَلَمْ اَقُلْ لَّكُمْ لَوْلَا تُسَبِّحُوْنَ ۟

ಅವರಲ್ಲಿದ್ದ ಉತ್ತಮ ವ್ಯಕ್ತಿ ಹೇಳಿದನು: “ನೀವೇಕೆ ಅಲ್ಲಾಹನ ಪರಿಶುದ್ಧಿಯನ್ನು ಕೊಂಡಾಡುವುದಿಲ್ಲ ಎಂದು ನಾನು ನಿಮ್ಮೊಡನೆ ಕೇಳಲಿಲ್ಲವೇ?” info
التفاسير:

external-link copy
29 : 68

قَالُوْا سُبْحٰنَ رَبِّنَاۤ اِنَّا كُنَّا ظٰلِمِیْنَ ۟

ಅವರು ಹೇಳಿದರು: “ನಮ್ಮ ಪರಿಪಾಲಕನ (ಅಲ್ಲಾಹನ) ಪರಿಶುದ್ಧಿಯನ್ನು ನಾವು ಕೊಂಡಾಡುತ್ತೇವೆ. ನಿಶ್ಚಯವಾಗಿಯೂ ನಾವು ಅಕ್ರಮಿಗಳಾಗಿದ್ದೇವೆ.” info
التفاسير:

external-link copy
30 : 68

فَاَقْبَلَ بَعْضُهُمْ عَلٰی بَعْضٍ یَّتَلَاوَمُوْنَ ۟

ನಂತರ ಅವರು ಒಬ್ಬರಿಗೊಬ್ಬರು ಮುಖ ಮಾಡಿ ಪರಸ್ಪರ ಆರೋಪ ಹೊರಿಸತೊಡಗಿದರು. info
التفاسير:

external-link copy
31 : 68

قَالُوْا یٰوَیْلَنَاۤ اِنَّا كُنَّا طٰغِیْنَ ۟

ಅವರು ಹೇಳಿದರು: “ಓ ನಮ್ಮ ದುರ್ಗತಿಯೇ! ನಿಶ್ಚಯವಾಗಿಯೂ ನಾವು ಅತಿರೇಕಿಗಳಾಗಿದ್ದೆವು. info
التفاسير:

external-link copy
32 : 68

عَسٰی رَبُّنَاۤ اَنْ یُّبْدِلَنَا خَیْرًا مِّنْهَاۤ اِنَّاۤ اِلٰی رَبِّنَا رٰغِبُوْنَ ۟

ನಮ್ಮ ಪರಿಪಾಲಕನು (ಅಲ್ಲಾಹು) ನಮಗೆ ಇದಕ್ಕಿಂತಲೂ ಉತ್ತಮವಾದುದನ್ನು ಬದಲಿಯಾಗಿ ನೀಡಬಹುದು. ನಿಶ್ಚಯವಾಗಿಯೂ ನಾವು ನಮ್ಮ ಪರಿಪಾಲಕನ (ಅಲ್ಲಾಹನ) ಬಗ್ಗೆ ಆಶಾವಾದಿಗಳಾಗಿದ್ದೇವೆ.” info
التفاسير:

external-link copy
33 : 68

كَذٰلِكَ الْعَذَابُ ؕ— وَلَعَذَابُ الْاٰخِرَةِ اَكْبَرُ ۘ— لَوْ كَانُوْا یَعْلَمُوْنَ ۟۠

ಶಿಕ್ಷೆಯು ಹೀಗೆಯೇ ಆಗಿದೆ. ಪರಲೋಕದ ಶಿಕ್ಷೆಯು ಅತಿದೊಡ್ಡದಾಗಿದೆ. ಅವರು ಅದನ್ನು ತಿಳಿಯುತ್ತಿದ್ದರೆ! info
التفاسير:

external-link copy
34 : 68

اِنَّ لِلْمُتَّقِیْنَ عِنْدَ رَبِّهِمْ جَنّٰتِ النَّعِیْمِ ۟

ನಿಶ್ಚಯವಾಗಿಯೂ, ದೇವಭಯವುಳ್ಳವರಿಗೆ ಅವರ ಪರಿಪಾಲಕನ (ಅಲ್ಲಾಹನ) ಬಳಿ ಸುಖಾಡಂಬರಗಳಿಂದ ಕೂಡಿದ ಸ್ವರ್ಗೋದ್ಯಾನಗಳಿವೆ. info
التفاسير:

external-link copy
35 : 68

اَفَنَجْعَلُ الْمُسْلِمِیْنَ كَالْمُجْرِمِیْنَ ۟ؕ

ಹಾಗಾದರೆ ನಾವು ಮುಸ್ಲಿಮರನ್ನು ಅಪರಾಧಿಗಳಂತೆ ನಡೆಸಿಕೊಳ್ಳುವೆವೇ? info
التفاسير:

external-link copy
36 : 68

مَا لَكُمْ ۫— كَیْفَ تَحْكُمُوْنَ ۟ۚ

ನಿಮಗೇನಾಗಿದೆ? ನೀವು ಹೇಗೆ ತೀರ್ಪು ನೀಡುತ್ತೀರಿ? info
التفاسير:

external-link copy
37 : 68

اَمْ لَكُمْ كِتٰبٌ فِیْهِ تَدْرُسُوْنَ ۟ۙ

ನಿಮ್ಮಲ್ಲಿ ಒಂದು ಗ್ರಂಥವಿದ್ದು ನೀವು ಅದರಿಂದ ಓದುತ್ತಿದ್ದೀರಾ? info
التفاسير:

external-link copy
38 : 68

اِنَّ لَكُمْ فِیْهِ لَمَا تَخَیَّرُوْنَ ۟ۚ

ಅದರಲ್ಲಿ ನಿಮ್ಮ ಮನಸ್ಸಿಗೆ ಒಪ್ಪಿಗೆಯಾಗುವ ವಿಷಯಗಳಿವೆಯೇ? info
التفاسير:

external-link copy
39 : 68

اَمْ لَكُمْ اَیْمَانٌ عَلَیْنَا بَالِغَةٌ اِلٰی یَوْمِ الْقِیٰمَةِ ۙ— اِنَّ لَكُمْ لَمَا تَحْكُمُوْنَ ۟ۚ

ಅಥವಾ, ನೀವು ಸ್ವಯಂ ನಿಶ್ಚಯಿಸುವುದೆಲ್ಲವೂ ನಿಮಗಿದೆಯೆಂದು ಪುನರುತ್ಥಾನ ದಿನದ ತನಕ ತಲುಪುವ ಯಾವುದಾದರೂ ಪ್ರತಿಜ್ಞೆಗಳನ್ನು ನೀವು ನಮ್ಮಿಂದ ಪಡೆದಿದ್ದೀರಾ? info
التفاسير:

external-link copy
40 : 68

سَلْهُمْ اَیُّهُمْ بِذٰلِكَ زَعِیْمٌ ۟ۚۛ

ಅವರಲ್ಲಿ ಯಾರು ಇದರ ಹೊಣೆಯನ್ನು ವಹಿಸಿಕೊಳ್ಳುತ್ತಾರೆಂದು ಅವರೊಡನೆ ಕೇಳಿರಿ. info
التفاسير:

external-link copy
41 : 68

اَمْ لَهُمْ شُرَكَآءُ ۛۚ— فَلْیَاْتُوْا بِشُرَكَآىِٕهِمْ اِنْ كَانُوْا صٰدِقِیْنَ ۟

ಅವರಿಗೆ ಯಾರಾದರೂ ಸಹಭಾಗಿಗಳು ಇದ್ದಾರೆಯೇ? ಅವರು ಸತ್ಯವಂತರಾಗಿದ್ದರೆ ಅವರ ಸಹಭಾಗಿಗಳನ್ನು ಕರೆದುಕೊಂಡು ಬರಲಿ. info
التفاسير:

external-link copy
42 : 68

یَوْمَ یُكْشَفُ عَنْ سَاقٍ وَّیُدْعَوْنَ اِلَی السُّجُوْدِ فَلَا یَسْتَطِیْعُوْنَ ۟ۙ

ಕಣಕಾಲನ್ನು ಪ್ರದರ್ಶಿಸಲಾಗುವ ದಿನ. ಆಗ ಅವರನ್ನು ಸಾಷ್ಟಾಂಗ ಮಾಡಲು ಕರೆಯಲಾಗುವುದು. ಆದರೆ ಅವರಿಗೆ (ಸಾಷ್ಟಾಂಗ ಮಾಡಲು) ಸಾಧ್ಯವಾಗುವುದಿಲ್ಲ.[1] info

[1] ಪುನರುತ್ಥಾನದ ದಿನ ಅಲ್ಲಾಹು ತನ್ನ ಮಹತ್ವಕ್ಕೆ ಹೊಂದಿಕೆಯಾಗುವ ವಿಧದಲ್ಲಿ ತನ್ನ ಕಣಕಾಲನ್ನು ಪ್ರದರ್ಶಿಸುತ್ತಾನೆ. ಆಗ ಸತ್ಯವಿಶ್ವಾಸಿಗಳಾದ ಪುರುಷರು ಮತ್ತು ಮಹಿಳೆಯರೆಲ್ಲರೂ ಅವನ ಮುಂದೆ ಸಾಷ್ಟಾಂಗ ಮಾಡುತ್ತಾರೆ. ಆದರೆ ಇಹಲೋಕದಲ್ಲಿ ತೋರಿಕೆಗಾಗಿ ಮತ್ತು ಜನಮನ್ನಣೆಗಾಗಿ ಸಾಷ್ಟಾಂಗ ಮಾಡುತ್ತಿದ್ದವರಿಗೆ ಅದು ಸಾಧ್ಯವಾಗವುದಿಲ್ಲ.

التفاسير: