قۇرئان كەرىم مەنىلىرىنىڭ تەرجىمىسى - كاناداچە تەرجىمىسى- ھەمزە بەتتۇر

بەت نومۇرى:close

external-link copy
163 : 4

اِنَّاۤ اَوْحَیْنَاۤ اِلَیْكَ كَمَاۤ اَوْحَیْنَاۤ اِلٰی نُوْحٍ وَّالنَّبِیّٖنَ مِنْ بَعْدِهٖ ۚ— وَاَوْحَیْنَاۤ اِلٰۤی اِبْرٰهِیْمَ وَاِسْمٰعِیْلَ وَاِسْحٰقَ وَیَعْقُوْبَ وَالْاَسْبَاطِ وَعِیْسٰی وَاَیُّوْبَ وَیُوْنُسَ وَهٰرُوْنَ وَسُلَیْمٰنَ ۚ— وَاٰتَیْنَا دَاوٗدَ زَبُوْرًا ۟ۚ

ನೂಹ್ ಮತ್ತು ಅವರ ನಂತರದ ಪ್ರವಾದಿಗಳಿಗೆ ದೇವವಾಣಿ ನೀಡಿದಂತೆಯೇ ನಾವು ನಿಮಗೂ ದೇವವಾಣಿ ನೀಡಿದ್ದೇವೆ. ಇಬ್ರಾಹೀಮ್, ಇಸ್ಮಾಈಲ್, ಇಸ್‍ಹಾಕ್, ಯಾಕೂಬ್, ಯಾಕೂಬ್ ಸಂತತಿಗಳು, ಈಸಾ, ಅಯ್ಯೂಬ್, ಯೂನುಸ್, ಹಾರೂನ್, ಸುಲೈಮಾನ್ ಮುಂತಾದವರಿಗೂ ನಾವು ದೇವವಾಣಿಯನ್ನು ನೀಡಿದ್ದೇವೆ. ನಾವು ದಾವೂದರಿಗೆ ಝಬೂರನ್ನು ನೀಡಿದ್ದೇವೆ. info
التفاسير:

external-link copy
164 : 4

وَرُسُلًا قَدْ قَصَصْنٰهُمْ عَلَیْكَ مِنْ قَبْلُ وَرُسُلًا لَّمْ نَقْصُصْهُمْ عَلَیْكَ ؕ— وَكَلَّمَ اللّٰهُ مُوْسٰی تَكْلِیْمًا ۟ۚ

ನಾವು ಈಗಾಗಲೇ ನಿಮಗೆ ತಿಳಿಸಿಕೊಟ್ಟ ಸಂದೇಶವಾಹಕರನ್ನು ಮತ್ತು ನಾವು ನಿಮಗೆ ತಿಳಿಸಿಕೊಡದ ಸಂದೇಶವಾಹಕರನ್ನು (ನಾವು ಕಳುಹಿಸಿದ್ದೇವೆ). ಅಲ್ಲಾಹು ಮೂಸಾರೊಡನೆ ನೇರವಾಗಿ ಮಾತನಾಡಿದ್ದಾನೆ. info
التفاسير:

external-link copy
165 : 4

رُسُلًا مُّبَشِّرِیْنَ وَمُنْذِرِیْنَ لِئَلَّا یَكُوْنَ لِلنَّاسِ عَلَی اللّٰهِ حُجَّةٌ بَعْدَ الرُّسُلِ ؕ— وَكَانَ اللّٰهُ عَزِیْزًا حَكِیْمًا ۟

ಸುವಾರ್ತೆ ತಿಳಿಸುವ ಮತ್ತು ಮುನ್ನೆಚ್ಚರಿಕೆ ನೀಡುವ ಸಂದೇಶವಾಹಕರನ್ನು (ನಾವು ಕಳುಹಿಸಿದ್ದೇವೆ). ಸಂದೇಶವಾಹಕರನ್ನು ಕಳುಹಿಸಿದ ನಂತರ ಅಲ್ಲಾಹನಿಗೆದುರಾಗಿ ಜನರಿಗೆ ಯಾವುದೇ ಸಾಕ್ಷ್ಯಾಧಾರಗಳು ಇಲ್ಲದಿರುವುದಕ್ಕಾಗಿ. ಅಲ್ಲಾಹು ಪ್ರಬಲನು ಮತ್ತು ವಿವೇಕಪೂರ್ಣನಾಗಿದ್ದಾನೆ. info
التفاسير:

external-link copy
166 : 4

لٰكِنِ اللّٰهُ یَشْهَدُ بِمَاۤ اَنْزَلَ اِلَیْكَ اَنْزَلَهٗ بِعِلْمِهٖ ۚ— وَالْمَلٰٓىِٕكَةُ یَشْهَدُوْنَ ؕ— وَكَفٰی بِاللّٰهِ شَهِیْدًا ۟ؕ

ಆದರೆ ನಿಮಗೆ ಅವತೀರ್ಣಗೊಳಿಸಿದ ಸಂದೇಶಕ್ಕೆ ಅಲ್ಲಾಹು ಸಾಕ್ಷಿಯಾಗಿದ್ದಾನೆ. ಅವನು ಅದನ್ನು ಪೂರ್ಣ ತಿಳುವಳಿಕೆಯೊಂದಿಗೆ ಅವತೀರ್ಣಗೊಳಿಸಿದ್ದಾನೆ. ದೇವದೂತರುಗಳು ಕೂಡ ಅದಕ್ಕೆ ಸಾಕ್ಷಿಯಾಗಿದ್ದಾರೆ. ಸಾಕ್ಷಿಯಾಗಿ ಅಲ್ಲಾಹು ಸಾಕು. info
التفاسير:

external-link copy
167 : 4

اِنَّ الَّذِیْنَ كَفَرُوْا وَصَدُّوْا عَنْ سَبِیْلِ اللّٰهِ قَدْ ضَلُّوْا ضَلٰلًا بَعِیْدًا ۟

ಸತ್ಯನಿಷೇಧಿಗಳು ಮತ್ತು ಅಲ್ಲಾಹನ ಮಾರ್ಗದಿಂದ ಜನರನ್ನು ತಡೆದವರು ಯಾರೋ—ನಿಶ್ಚಯವಾಗಿಯೂ ಅವರು ವಿದೂರ ದುರ್ಮಾರ್ಗದಲ್ಲಿ ದಾರಿತಪ್ಪಿದ್ದಾರೆ. info
التفاسير:

external-link copy
168 : 4

اِنَّ الَّذِیْنَ كَفَرُوْا وَظَلَمُوْا لَمْ یَكُنِ اللّٰهُ لِیَغْفِرَ لَهُمْ وَلَا لِیَهْدِیَهُمْ طَرِیْقًا ۟ۙ

ಸತ್ಯನಿಷೇಧಿಗಳು ಮತ್ತು ಅಕ್ರಮವೆಸಗಿದವರು ಯಾರೋ—ಅವರನ್ನು ಅಲ್ಲಾಹು ಎಂದಿಗೂ ಕ್ಷಮಿಸುವುದಿಲ್ಲ ಮತ್ತು ಅವರಿಗೆ ಯಾವುದೇ ಮಾರ್ಗವನ್ನು ತೋರಿಸುವುದಿಲ್ಲ. info
التفاسير:

external-link copy
169 : 4

اِلَّا طَرِیْقَ جَهَنَّمَ خٰلِدِیْنَ فِیْهَاۤ اَبَدًا ؕ— وَكَانَ ذٰلِكَ عَلَی اللّٰهِ یَسِیْرًا ۟

ನರಕದ ಮಾರ್ಗವನ್ನು ಬಿಟ್ಟು. ಅವರು ಅದರಲ್ಲಿ ಶಾಶ್ವತವಾಗಿ ವಾಸಿಸುವರು. ಅದು ಅಲ್ಲಾಹನಿಗೆ ಬಹಳ ಸುಲಭವಾಗಿದೆ. info
التفاسير:

external-link copy
170 : 4

یٰۤاَیُّهَا النَّاسُ قَدْ جَآءَكُمُ الرَّسُوْلُ بِالْحَقِّ مِنْ رَّبِّكُمْ فَاٰمِنُوْا خَیْرًا لَّكُمْ ؕ— وَاِنْ تَكْفُرُوْا فَاِنَّ لِلّٰهِ مَا فِی السَّمٰوٰتِ وَالْاَرْضِ ؕ— وَكَانَ اللّٰهُ عَلِیْمًا حَكِیْمًا ۟

ಓ ಜನರೇ! ನಿಮ್ಮ ಪರಿಪಾಲಕನ (ಅಲ್ಲಾಹನ) ಕಡೆಯಿಂದ ನಿಮ್ಮ ಬಳಿಗೆ ಸಂದೇಶವಾಹಕರು ಸತ್ಯಸಹಿತ ಬಂದಿದ್ದಾರೆ. ಆದ್ದರಿಂದ ಅವರಲ್ಲಿ ವಿಶ್ವಾಸವಿಡಿ. ಅದು ನಿಮಗೆ ಒಳಿತಾಗಿದೆ. ನೀವು ನಿಷೇಧಿಸಿದರೆ (ಅದರಿಂದ ಅಲ್ಲಾಹನಿಗೇನೂ ನಷ್ಟವಿಲ್ಲ). ಭೂಮ್ಯಾಕಾಶಗಳಲ್ಲಿರುವುದೆಲ್ಲವೂ ಅಲ್ಲಾಹನಿಗೆ ಸೇರಿದ್ದು. ಅಲ್ಲಾಹು ಎಲ್ಲವನ್ನು ತಿಳಿದವನು ಮತ್ತು ವಿವೇಕಪೂರ್ಣನಾಗಿದ್ದಾನೆ. info
التفاسير: