قرآن کریم کے معانی کا ترجمہ - کنڑ ترجمہ - حمزہ بتور

صفحہ نمبر:close

external-link copy
109 : 5

یَوْمَ یَجْمَعُ اللّٰهُ الرُّسُلَ فَیَقُوْلُ مَاذَاۤ اُجِبْتُمْ ؕ— قَالُوْا لَا عِلْمَ لَنَا ؕ— اِنَّكَ اَنْتَ عَلَّامُ الْغُیُوْبِ ۟

ಅಲ್ಲಾಹು ಸಂದೇಶವಾಹಕರನ್ನು ಒಟ್ಟುಗೂಡಿಸಿ, “ನಿಮಗೇನು ಉತ್ತರ ಸಿಕ್ಕಿತು?” ಎಂದು ಕೇಳುವ ದಿನ. ಅವರು ಹೇಳುವರು: “ನಮಗೇನೂ ತಿಳಿದಿಲ್ಲ. ನೀನೇ ಅದೃಶ್ಯ ವಿಷಯಗಳನ್ನು ಚೆನ್ನಾಗಿ ತಿಳಿದವನು.” info
التفاسير:

external-link copy
110 : 5

اِذْ قَالَ اللّٰهُ یٰعِیْسَی ابْنَ مَرْیَمَ اذْكُرْ نِعْمَتِیْ عَلَیْكَ وَعَلٰی وَالِدَتِكَ ۘ— اِذْ اَیَّدْتُّكَ بِرُوْحِ الْقُدُسِ ۫— تُكَلِّمُ النَّاسَ فِی الْمَهْدِ وَكَهْلًا ۚ— وَاِذْ عَلَّمْتُكَ الْكِتٰبَ وَالْحِكْمَةَ وَالتَّوْرٰىةَ وَالْاِنْجِیْلَ ۚ— وَاِذْ تَخْلُقُ مِنَ الطِّیْنِ كَهَیْـَٔةِ الطَّیْرِ بِاِذْنِیْ فَتَنْفُخُ فِیْهَا فَتَكُوْنُ طَیْرًا بِاِذْنِیْ وَتُبْرِئُ الْاَكْمَهَ وَالْاَبْرَصَ بِاِذْنِیْ ۚ— وَاِذْ تُخْرِجُ الْمَوْتٰی بِاِذْنِیْ ۚ— وَاِذْ كَفَفْتُ بَنِیْۤ اِسْرَآءِیْلَ عَنْكَ اِذْ جِئْتَهُمْ بِالْبَیِّنٰتِ فَقَالَ الَّذِیْنَ كَفَرُوْا مِنْهُمْ اِنْ هٰذَاۤ اِلَّا سِحْرٌ مُّبِیْنٌ ۟

ಅಲ್ಲಾಹು (ಈಸಾರೊಂದಿಗೆ) ಹೇಳುವ ಸಂದರ್ಭ: “ಓ ಮರ್ಯಮರ ಮಗ ಈಸಾ! ನಾನು ಪವಿತ್ರಾತ್ಮನ ಮೂಲಕ ನಿಮಗೆ ಬೆಂಬಲ ನೀಡಿ ನೀವು ತೊಟ್ಟಿಲಲ್ಲಿಯೂ ಮಧ್ಯವಯಸ್ಸಿನಲ್ಲಿಯೂ ಜನರೊಂದಿಗೆ ಮಾತನಾಡುತ್ತಿದ್ದ ಸಂದರ್ಭ; ನಾನು ನಿಮಗೆ ಗ್ರಂಥವನ್ನು, ವಿವೇಕವನ್ನು, ತೌರಾತ್ ಮತ್ತು ಇಂಜೀಲನ್ನು ಕಲಿಸಿಕೊಟ್ಟ ಸಂದರ್ಭ; ನನ್ನ ಅಪ್ಪಣೆಯಂತೆ ನೀವು ಜೇಡಿಮಣ್ಣಿನಿಂದ ಹಕ್ಕಿಯ ರೂಪವನ್ನು ತಯಾರಿಸಿ ಅದರಲ್ಲಿ ಊದಿದಾಗ ನನ್ನ ಅಪ್ಪಣೆಯಿಂದ ಅದು ಹಕ್ಕಿಯಾಗಿ ಮಾರ್ಪಡುತ್ತಿದ್ದ ಸಂದರ್ಭ; ನನ್ನ ಅಪ್ಪಣೆಯಂತೆ ನೀವು ಹುಟ್ಟು ಕುರುಡನನ್ನು ಮತ್ತು ಕುಷ್ಠರೋಗಿಯನ್ನು ಗುಣಪಡಿಸುತ್ತಿದ್ದ ಸಂದರ್ಭ; ನನ್ನ ಅಪ್ಪಣೆಯಂತೆ ನೀವು ಸತ್ತವರನ್ನು (ಸಮಾಧಿಯಿಂದ) ಹೊರತರುತ್ತಿದ್ದ ಸಂದರ್ಭ ಮತ್ತು ನೀವು ಇಸ್ರಾಯೇಲ್ ಮಕ್ಕಳ ಬಳಿಗೆ ಸ್ಪಷ್ಟ ಸಾಕ್ಷ್ಯಾಧಾರಗಳೊಂದಿಗೆ ಹೋದಾಗ ಅವರಲ್ಲಿರುವ ಸತ್ಯನಿಷೇಧಿಗಳು, ಇದು ಸ್ಪಷ್ಟ ವಾಮಾಚಾರವಾಗಿದೆಯೆಂದು ಹೇಳಿದಾಗ ನಿಮ್ಮನ್ನು ಅವರಿಂದ ಪಾರು ಮಾಡಿದ ಸಂದರ್ಭ ನಾನು ನಿಮಗೆ ಮತ್ತು ನಿಮ್ಮ ತಾಯಿಗೆ ಅನುಗ್ರಹಿಸಿದ ಅನುಗ್ರಹಗಳನ್ನು ಸ್ಮರಿಸಿರಿ.” info
التفاسير:

external-link copy
111 : 5

وَاِذْ اَوْحَیْتُ اِلَی الْحَوَارِیّٖنَ اَنْ اٰمِنُوْا بِیْ وَبِرَسُوْلِیْ ۚ— قَالُوْۤا اٰمَنَّا وَاشْهَدْ بِاَنَّنَا مُسْلِمُوْنَ ۟

“ನನ್ನಲ್ಲಿ ಮತ್ತು ನನ್ನ ಸಂದೇಶವಾಹಕರಲ್ಲಿ ವಿಶ್ವಾಸವಿಡಿ” ಎಂದು ನಾನು ಹವಾರಿಗಳಿಗೆ ದಿವ್ಯಪ್ರೇರಣೆ ನೀಡಿದ ಸಂದರ್ಭ. ಅವರು ಹೇಳಿದರು: “ನಾವು ವಿಶ್ವಾಸವಿಟ್ಟಿದ್ದೇವೆ. ನಾವು ಮುಸ್ಲಿಮರು ಎಂಬುದಕ್ಕೆ ನೀವು ಸಾಕ್ಷಿಯಾಗಿರಿ.” info
التفاسير:

external-link copy
112 : 5

اِذْ قَالَ الْحَوَارِیُّوْنَ یٰعِیْسَی ابْنَ مَرْیَمَ هَلْ یَسْتَطِیْعُ رَبُّكَ اَنْ یُّنَزِّلَ عَلَیْنَا مَآىِٕدَةً مِّنَ السَّمَآءِ ؕ— قَالَ اتَّقُوا اللّٰهَ اِنْ كُنْتُمْ مُّؤْمِنِیْنَ ۟

ಹವಾರಿಗಳು ಹೇಳಿದ ಸಂದರ್ಭ(ವನ್ನು ಸ್ಮರಿಸಿ): “ಓ ಮರ್ಯಮರ ಮಗ ಈಸಾ! ನಮಗೆ ಆಕಾಶದಿಂದ ಒಂದು ಆಹಾರದ ತಟ್ಟೆಯನ್ನು ಇಳಿಸಿಕೊಡಲು ನಿಮ್ಮ ಪರಿಪಾಲಕನಿಗೆ (ಅಲ್ಲಾಹನಿಗೆ) ಸಾಧ್ಯವೇ?” ಈಸಾ ಹೇಳಿದರು: “ನೀವು ಸತ್ಯವಿಶ್ವಾಸಿಗಳಾಗಿದ್ದರೆ ಅಲ್ಲಾಹನನ್ನು ಭಯಪಡಿರಿ.” info
التفاسير:

external-link copy
113 : 5

قَالُوْا نُرِیْدُ اَنْ نَّاْكُلَ مِنْهَا وَتَطْمَىِٕنَّ قُلُوْبُنَا وَنَعْلَمَ اَنْ قَدْ صَدَقْتَنَا وَنَكُوْنَ عَلَیْهَا مِنَ الشّٰهِدِیْنَ ۟

ಅವರು ಹೇಳಿದರು: “ಅದರಿಂದ ಆಹಾರ ಸೇವಿಸಿ ನಮ್ಮ ಮನಸ್ಸನ್ನು ಸಮಾಧಾನಪಡಿಸಲು, ನೀವು ನಮಗೆ ತಿಳಿಸಿದ್ದೆಲ್ಲವೂ ಸತ್ಯವೆಂದು ಮನದಟ್ಟು ಮಾಡಿಕೊಳ್ಳಲು ಮತ್ತು ನಾವು ಅದಕ್ಕೆ ಸಾಕ್ಷಿಗಳಾಗಲು ಬಯಸುತ್ತೇವೆ.” info
التفاسير: