Bản dịch ý nghĩa nội dung Qur'an - 卡纳达语翻译:哈姆宰·巴特尔

external-link copy
5 : 22

یٰۤاَیُّهَا النَّاسُ اِنْ كُنْتُمْ فِیْ رَیْبٍ مِّنَ الْبَعْثِ فَاِنَّا خَلَقْنٰكُمْ مِّنْ تُرَابٍ ثُمَّ مِنْ نُّطْفَةٍ ثُمَّ مِنْ عَلَقَةٍ ثُمَّ مِنْ مُّضْغَةٍ مُّخَلَّقَةٍ وَّغَیْرِ مُخَلَّقَةٍ لِّنُبَیِّنَ لَكُمْ ؕ— وَنُقِرُّ فِی الْاَرْحَامِ مَا نَشَآءُ اِلٰۤی اَجَلٍ مُّسَمًّی ثُمَّ نُخْرِجُكُمْ طِفْلًا ثُمَّ لِتَبْلُغُوْۤا اَشُدَّكُمْ ۚ— وَمِنْكُمْ مَّنْ یُّتَوَفّٰی وَمِنْكُمْ مَّنْ یُّرَدُّ اِلٰۤی اَرْذَلِ الْعُمُرِ لِكَیْلَا یَعْلَمَ مِنْ بَعْدِ عِلْمٍ شَیْـًٔا ؕ— وَتَرَی الْاَرْضَ هَامِدَةً فَاِذَاۤ اَنْزَلْنَا عَلَیْهَا الْمَآءَ اهْتَزَّتْ وَرَبَتْ وَاَنْۢبَتَتْ مِنْ كُلِّ زَوْجٍ بَهِیْجٍ ۟

ಮನುಷ್ಯರೇ! ಪುನರುತ್ಥಾನದ ಬಗ್ಗೆ ನಿಮಗೆ ಸಂಶಯವಿದ್ದರೆ (ಆಲೋಚಿಸಿ ನೋಡಿ). ನಿಶ್ಚಯವಾಗಿಯೂ, ನಾವು ನಿಮ್ಮನ್ನು ಮಣ್ಣಿನಿಂದ, ನಂತರ ವೀರ್ಯದಿಂದ, ನಂತರ ರಕ್ತಪಿಂಡದಿಂದ, ನಂತರ ರೂಪ ನೀಡಲಾದ ಮತ್ತು ರೂಪ ನೀಡಲ್ಪಡದ ಮಾಂಸ ಮುದ್ದೆಯಿಂದ ಸೃಷ್ಟಿಸಿದೆವು. ನಾವು ಇದನ್ನು ನಿಮಗೆ ವಿವರಿಸಿಕೊಡುತ್ತಿದ್ದೇವೆ. ನಂತರ ನಾವು ಇಚ್ಛಿಸುವ ನಿಶ್ಚಿತ ಅವಧಿಯ ತನಕ ಅದನ್ನು ಗರ್ಭಾಶಯಗಳಲ್ಲಿ ಇಡುತ್ತೇವೆ. ನಂತರ ನಿಮ್ಮನ್ನು ಶಿಶುವಿನ ರೂಪದಲ್ಲಿ ಹೊರತರುತ್ತೇವೆ. ನೀವು ನಿಮ್ಮ ಪೂರ್ಣ ಯೌವನವನ್ನು ತಲುಪುವುದಕ್ಕಾಗಿ. ನಿಮ್ಮಲ್ಲಿ ಕೆಲವರು ನಿಧನರಾಗುತ್ತಾರೆ. ಕೆಲವರು ಅನೇಕ ವಿಷಯಗಳನ್ನು ತಿಳಿದುಕೊಂಡ ಬಳಿಕವೂ ಏನೂ ತಿಳಿಯದ ಅವಸ್ಥೆಗೆ ತಲುಪುವ ರೀತಿಯಲ್ಲಿ ಹಣ್ಣು ಹಣ್ಣು ಮುದುಕರಾಗುವ ಪ್ರಾಯಕ್ಕೆ ಮರಳಿಸಲ್ಪಡುತ್ತಾರೆ. ಭೂಮಿಯು ಒಣಗಿ ನಿರ್ಜೀವವಾಗಿರುವುದನ್ನು ನೀವು ಕಾಣುವಿರಿ. ನಂತರ ನಾವು ಅದರ ಮೇಲೆ ಮಳೆಯನ್ನು ಸುರಿಸಿದಾಗ, ಅದು ಮೈಗೊಡವಿ ಎದ್ದು ಬೆಳವಣಿಗೆ ಪಡೆಯುತ್ತದೆ ಮತ್ತು ಅಪ್ಯಾಯಮಾನವಾದ ಎಲ್ಲಾ ರೀತಿಯ ಸಸ್ಯಗಳನ್ನು ಉತ್ಪಾದಿಸುತ್ತದೆ. info
التفاسير: