Bản dịch ý nghĩa nội dung Qur'an - 卡纳达语翻译:哈姆宰·巴特尔

external-link copy
150 : 7

وَلَمَّا رَجَعَ مُوْسٰۤی اِلٰی قَوْمِهٖ غَضْبَانَ اَسِفًا ۙ— قَالَ بِئْسَمَا خَلَفْتُمُوْنِیْ مِنْ بَعْدِیْ ۚ— اَعَجِلْتُمْ اَمْرَ رَبِّكُمْ ۚ— وَاَلْقَی الْاَلْوَاحَ وَاَخَذَ بِرَاْسِ اَخِیْهِ یَجُرُّهٗۤ اِلَیْهِ ؕ— قَالَ ابْنَ اُمَّ اِنَّ الْقَوْمَ اسْتَضْعَفُوْنِیْ وَكَادُوْا یَقْتُلُوْنَنِیْ ۖؗ— فَلَا تُشْمِتْ بِیَ الْاَعْدَآءَ وَلَا تَجْعَلْنِیْ مَعَ الْقَوْمِ الظّٰلِمِیْنَ ۟

ಮೂಸಾ ತಮ್ಮ ಜನರ ಬಳಿಗೆ ಮರಳಿ ಬಂದಾಗ—ಅವರು ಕೋಪ ಮತ್ತು ಬೇಸರದಿಂದ ಹೇಳಿದರು: “ನನ್ನ ನಿರ್ಗಮನದ ಬಳಿಕ ನೀವು ಮಾಡಿದ ಕೃತ್ಯವು ಅತ್ಯಂತ ಹೇಯವಾಗಿದೆ. ನಿಮ್ಮ ಪರಿಪಾಲಕನ (ಅಲ್ಲಾಹನ) ಆಜ್ಞೆ ಬರುವುದಕ್ಕೆ ಮೊದಲೇ ನೀವು ಅವಸರಪಟ್ಟಿರಾ?” ಅವರು ಹಲಗೆಗಳನ್ನು ಎಸೆದು ಸಹೋದರನ ತಲೆಗೂದಲನ್ನು ಹಿಡಿದು ಎಳೆದರು. ಅವರು (ಸಹೋದರ) ಹೇಳಿದರು: “ನನ್ನ ತಾಯಿಯ ಮಗನೇ! ನಿಶ್ಚಯವಾಗಿಯೂ ಈ ಜನರು ನನ್ನನ್ನು ದುರ್ಬಲನೆಂದು ಪರಿಗಣಿಸಿದರು. ಅವರು ನನ್ನನ್ನು ಇನ್ನೇನು ಕೊಲ್ಲುವುದರಲ್ಲಿದ್ದರು. ನನ್ನ ಮೇಲೆ ಹಲ್ಲೆ ಮಾಡಿ ವೈರಿಗಳಿಗೆ ಸಂತಸವಾಗುವಂತೆ ಮಾಡಬೇಡ. ಅಕ್ರಮಿಗಳ ಸಾಲಿಗೆ ನನ್ನನ್ನು ಕೂಡ ಸೇರಿಸಿ ಬಿಡಬೇಡ.” info
التفاسير: