《古兰经》译解 - 卡纳达语翻译 - 哈姆宰·比图尔

页码:close

external-link copy
52 : 7

وَلَقَدْ جِئْنٰهُمْ بِكِتٰبٍ فَصَّلْنٰهُ عَلٰی عِلْمٍ هُدًی وَّرَحْمَةً لِّقَوْمٍ یُّؤْمِنُوْنَ ۟

ಜ್ಞಾನದ ಆಧಾರದಲ್ಲಿ ವಿವರಿಸಲಾದ ಒಂದು ಗ್ರಂಥವನ್ನು ನಾವು ಅವರಿಗೆ ನೀಡಿದ್ದೇವೆ. ಅದು ವಿಶ್ವಾಸವಿಡುವ ಜನರಿಗೆ ಮಾರ್ಗದರ್ಶಿ ಮತ್ತು ದಯೆಯಾಗಿದೆ. info
التفاسير:

external-link copy
53 : 7

هَلْ یَنْظُرُوْنَ اِلَّا تَاْوِیْلَهٗ ؕ— یَوْمَ یَاْتِیْ تَاْوِیْلُهٗ یَقُوْلُ الَّذِیْنَ نَسُوْهُ مِنْ قَبْلُ قَدْ جَآءَتْ رُسُلُ رَبِّنَا بِالْحَقِّ ۚ— فَهَلْ لَّنَا مِنْ شُفَعَآءَ فَیَشْفَعُوْا لَنَاۤ اَوْ نُرَدُّ فَنَعْمَلَ غَیْرَ الَّذِیْ كُنَّا نَعْمَلُ ؕ— قَدْ خَسِرُوْۤا اَنْفُسَهُمْ وَضَلَّ عَنْهُمْ مَّا كَانُوْا یَفْتَرُوْنَ ۟۠

ಅವರು ಅದರ ಫಲಿತಾಂಶವನ್ನು ಕಾಯುತ್ತಿದ್ದಾರೆಯೇ?[1] ಅದರ ಫಲಿತಾಂಶವು ಬರುವ ದಿನದಂದು ಅದಕ್ಕೆ ಮುಂಚೆ ಅದನ್ನು ಮರೆತುಬಿಟ್ಟವರು ಹೇಳುವರು: “ನಿಶ್ಚಯವಾಗಿಯೂ ನಮ್ಮ ಪರಿಪಾಲಕನ (ಅಲ್ಲಾಹನ) ಸಂದೇಶವಾಹಕರುಗಳು ಸತ್ಯ ಸಹಿತ ಬಂದಿದ್ದರು. ನಮಗೆ ಶಿಫಾರಸು ಮಾಡುವ ಶಿಫಾರಸುಗಾರರು ಯಾರಾದರೂ ಇದ್ದಾರೆಯೇ? ಅಥವಾ ನಾವು ಈಗಾಗಲೇ ಮಾಡಿದ ಕರ್ಮಗಳಲ್ಲದ ಬೇರೆ ಕರ್ಮಗಳನ್ನು ಮಾಡಲು ನಮ್ಮನ್ನು ಪುನಃ ಇಹಲೋಕಕ್ಕೆ ಕಳುಹಿಸಲಾಗುವುದೇ?” ಅವರು ಸ್ವಯಂ ನಷ್ಟಹೊಂದಿದವರು. ಅವರು ಕಲ್ಪಿಸಿ ಹೇಳುತ್ತಿದ್ದ ವಿಷಯಗಳೆಲ್ಲವೂ ಅವರಿಂದ ಕಣ್ಮರೆಯಾಗಿ ಬಿಡುವುವು. info

[1] ಅಂದರೆ ಪವಿತ್ರ ಕುರ್‌ಆನಿನಲ್ಲಿ ನೀಡಲಾದ ಎಚ್ಚರಿಕೆಗಳು ಸತ್ಯವಾಗಿ ಪರಿಣಮಿಸುವುದನ್ನು ಅವರು ಕಾಯುತ್ತಿದ್ದಾರೆಯೇ?

التفاسير:

external-link copy
54 : 7

اِنَّ رَبَّكُمُ اللّٰهُ الَّذِیْ خَلَقَ السَّمٰوٰتِ وَالْاَرْضَ فِیْ سِتَّةِ اَیَّامٍ ثُمَّ اسْتَوٰی عَلَی الْعَرْشِ ۫— یُغْشِی الَّیْلَ النَّهَارَ یَطْلُبُهٗ حَثِیْثًا ۙ— وَّالشَّمْسَ وَالْقَمَرَ وَالنُّجُوْمَ مُسَخَّرٰتٍ بِاَمْرِهٖ ؕ— اَلَا لَهُ الْخَلْقُ وَالْاَمْرُ ؕ— تَبٰرَكَ اللّٰهُ رَبُّ الْعٰلَمِیْنَ ۟

ನಿಶ್ಚಯವಾಗಿಯೂ ಭೂಮ್ಯಾಕಾಶಗಳನ್ನು ಆರು ದಿನಗಳಲ್ಲಿ ಸೃಷ್ಟಿಸಿದ ಅಲ್ಲಾಹನೇ ನಿಮ್ಮ ಪರಿಪಾಲಕನು. ನಂತರ ಅವನು ಸಿಂಹಾಸನದಲ್ಲಿ ಆರೂಢನಾದನು. ಅವನು ಹಗಲನ್ನು ರಾತ್ರಿಯಿಂದ ಮುಚ್ಚುತ್ತಾನೆ. ಆಗ ಅದು ಕ್ಷಿಪ್ರಗತಿಯಲ್ಲಿ ಹಗಲನ್ನು ಹುಡುಕುತ್ತಾ ಸಾಗುತ್ತದೆ. ಸೂರ್ಯ, ಚಂದ್ರ ಮತ್ತು ನಕ್ಷತ್ರಗಳೆಲ್ಲವೂ ಅವನ ಆಜ್ಞೆಗೆ ವಿಧೇಯವಾಗಿವೆ. ತಿಳಿಯಿರಿ! ಸೃಷ್ಟಿ ಮತ್ತು ಆಜ್ಞೆಯು ಅವನದ್ದು. ಸರ್ವಲೋಕಗಳ ಪರಿಪಾಲಕನಾದ ಅಲ್ಲಾಹು ಸಮೃದ್ಧಪೂರ್ಣನಾಗಿದ್ದಾನೆ. info
التفاسير:

external-link copy
55 : 7

اُدْعُوْا رَبَّكُمْ تَضَرُّعًا وَّخُفْیَةً ؕ— اِنَّهٗ لَا یُحِبُّ الْمُعْتَدِیْنَ ۟ۚ

ವಿನಯದಿಂದ ಮತ್ತು ರಹಸ್ಯವಾಗಿ ನಿಮ್ಮ ಪರಿಪಾಲಕನನ್ನು (ಅಲ್ಲಾಹನನ್ನು) ಕರೆದು ಪ್ರಾರ್ಥಿಸಿರಿ. ನಿಶ್ಚಯವಾಗಿಯೂ ಅವನು ಎಲ್ಲೆ ಮೀರುವವರನ್ನು ಇಷ್ಟಪಡುವುದಿಲ್ಲ. info
التفاسير:

external-link copy
56 : 7

وَلَا تُفْسِدُوْا فِی الْاَرْضِ بَعْدَ اِصْلَاحِهَا وَادْعُوْهُ خَوْفًا وَّطَمَعًا ؕ— اِنَّ رَحْمَتَ اللّٰهِ قَرِیْبٌ مِّنَ الْمُحْسِنِیْنَ ۟

ಭೂಮಿಯಲ್ಲಿ ಸುಧಾರಣೆ ಮಾಡಿದ ಬಳಿಕ ಅಲ್ಲಿ ಕಿಡಿಗೇಡಿತನ ಮಾಡಬೇಡಿ. ಭಯ ಮತ್ತು ನಿರೀಕ್ಷೆಯಿಂದ ಅವನನ್ನು ಕರೆದು ಪ್ರಾರ್ಥಿಸಿರಿ. ನಿಶ್ಚಯವಾಗಿಯೂ ಅಲ್ಲಾಹನ ದಯೆ ಒಳಿತು ಮಾಡುವವರ ಸಮೀಪದಲ್ಲಿದೆ. info
التفاسير:

external-link copy
57 : 7

وَهُوَ الَّذِیْ یُرْسِلُ الرِّیٰحَ بُشْرًاۢ بَیْنَ یَدَیْ رَحْمَتِهٖ ؕ— حَتّٰۤی اِذَاۤ اَقَلَّتْ سَحَابًا ثِقَالًا سُقْنٰهُ لِبَلَدٍ مَّیِّتٍ فَاَنْزَلْنَا بِهِ الْمَآءَ فَاَخْرَجْنَا بِهٖ مِنْ كُلِّ الثَّمَرٰتِ ؕ— كَذٰلِكَ نُخْرِجُ الْمَوْتٰی لَعَلَّكُمْ تَذَكَّرُوْنَ ۟

ತನ್ನ ದಯೆಗೆ (ಮಳೆಗೆ) ಮೊದಲು ಸುವಾರ್ತೆಯಾಗಿ ಗಾಳಿಯನ್ನು ಕಳುಹಿಸುವವನು ಅವನೇ. ಎಲ್ಲಿಯವರೆಗೆಂದರೆ, ಅದು ಭಾರವಾದ ಮೋಡಗಳನ್ನು ಹೊತ್ತಾಗ ನಾವು ಅದನ್ನು ಬರಡು ಪ್ರದೇಶಕ್ಕೆ ಸಾಗಿಸುವೆವು. ನಂತರ ನಾವು ಅಲ್ಲಿ ಮಳೆ ಸುರಿಸುವೆವು ಮತ್ತು ಅದರಿಂದ ವಿಭಿನ್ನ ಹಣ್ಣುಗಳನ್ನು ಉತ್ಪಾದಿಸುವೆವು. ಇದೇ ರೀತಿ ನಾವು ಸತ್ತವರನ್ನು (ಸಮಾಧಿಯಿಂದ) ಹೊರತರುವೆವು. ನೀವು ಉಪದೇಶ ಪಡೆಯುವುದಕ್ಕಾಗಿ (ಇದನ್ನು ವಿವರಿಸುತ್ತಿದ್ದೇವೆ). info
التفاسير: